ಮಡಿಕೇರಿ : ಕೊಡಗು ಜಿಲ್ಲಾ ಕಾಂಗ್ರೆಸ್ ನಲ್ಲಿ ಯಾವುದು ಸರಿಯಿಲ್ಲಾ ಅನ್ನೋದು ಮತ್ತೊಮ್ಮೆ ಖಾತ್ರಿಯಾಗಿದೆ. ಈ ಹಿಂದೆ ಜಿಲ್ಲಾಧ್ಯಕ್ಷರ ಬದಲಾವಣೆಯ ಕೂಗು ಕೇಳಿಬಂದಿತ್ತು. ಆದ್ರೀಗ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ವಿರುದ್ದ ಕಾಂಗ್ರೆಸ್ ಕಾರ್ಯಕರ್ತರೇ ತಿರುಗಿಬಿದ್ದಿದ್ದಾರೆ.
ಮಡಿಕೇರಿಯ ಬಾಲಭವನದ ಸೊಸೈಟಿಯ ಸಭಾಂಗಣದಲ್ಲಿ ನಡೆದ ನಾಪೊಕ್ಲು ಬ್ಲಾಕ್ ಪ್ರಥಮ ಸಭೆಯಲ್ಲಿ ಜಿಲ್ಲಾಧ್ಯಕ್ಷರಾಗಿರೋ ಮಂಜುನಾಥ್ ವಿರುದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ತಿರುಗಿ ಬಿದ್ದ ಪ್ರಸಂಗ ನಡೆದಿದೆ. ಜಿಲ್ಲಾಧ್ಯಕ್ಷರ ವಿರುದ್ದ ಮಾತಿನದ ದಾಳಿ ನಡೆಸಲಾಗಿದ್ದು, ಪಕ್ಷ ಹಾಳಾಗಿ ಹೋಗುತ್ತಿದೆ ಎಂದು ಹಲವು ನಾಯಕರು ವಾಗ್ದಾಳಿ ನಡೆಸಿದ್ದಾರೆ. ಒಂದು ಹಂತದಲ್ಲಿ ಸಭೆ ನಡೆಸಬಾರದು, ನೀವು ಪಕ್ಷಪಾತಿಯಾಗಿ ನಡೆದುಕೊಳ್ಳುತ್ತಿದ್ದೀರಿ ಎಂದು ಕಾರ್ಯಕರ್ತರು ಆಗ್ರಹಿಸಿದ್ದರು. ಒಟ್ಟಿನಲ್ಲಿ ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿಯಿಲ್ಲ ಅನ್ನೋದು ಮತ್ತೊಮ್ಮೆ ಸಾಬೀತಾಗಿದೆ.
ಕೊಡಗು ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಭಿನ್ನಮತ : ಜಿಲ್ಲಾಧ್ಯಕ್ಷರ ವಿರುದ್ದ ತಿರುಗಿಬಿದ್ದ ಕಾಂಗ್ರೆಸಿಗರು
- Advertisement -