ನವದೆಹಲಿ : ಹೆಮ್ಮಾರಿ ಕೊರೊನಾ ಸೋಂಕು ಆರ್ಭಟ ಜೋರಾಗಿದೆ. ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 37,148 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 11,55,191ಕ್ಕೇರಿದೆ.


ಕಳೆದೊಂದು ವಾರದಿಂದಲೂ ದೇಶದಲ್ಲಿ ಬರೋಬ್ಬರಿ ಎರಡೂವರೆ ಲಕ್ಷ ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 4 ಲಕ್ಷ ದಾಟಿದೆ. ಇನ್ನು ಕೊರೊನಾ ಸೋಂಕಿಗೆ ಬಲಿಯಾಗುವವರ ಸಂಖ್ಯೆಯೂ ಹೆಚ್ಚುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 587 ಮಂದಿ ಬಲಿಯಾಗಿದ್ದು, ಇದುವರೆಗೆ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ28,084ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿರುವವರ ಪೈಕಿ 4,02,529 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ರೆ, 7,24,578 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ದೇಶದಲ್ಲಿ ಇದುವರೆಗೆ 1,43,81,303 ಮಾದರಿಗಳ ಪರೀಕ್ಷೆ ನಡೆಸಲಾಗಿದ್ದು, ನಿನ್ನೆ ಒಂದೇ ದಿನ 3,3,395 ಮಾದರಿಗಳ ಪರೀಕ್ಷೆ ನಡೆಸಲಾಗಿದೆಯೆಂದು ಐಸಿಎಂಆರ್ ಮಾಹಿತಿ ನೀಡಿದೆ.