ಮಂಗಳೂರು : ಕಳೆದೊಂದು ದಶಕಗಳಿಂದಲೂ ಕುಟುಂತ್ತಾ ಸಾಗುತ್ತಿದ್ದ ಪಂಪ್‌ವೆಲ್ ಫ್ಲೈಓವರ್ ಕಾಮಗಾರಿ ಬಹುತೇಕ ಪೂರ್ಣವಾಗಿದೆ. ಈ ತಿಂಗಳಾಂತ್ಯಕ್ಕೆ ಫ್ಲೈಓವರ್ ಕಾಮಗಾರಿ ಪೂರ್ಣಗೊಳ್ಳಲಿದ್ದು, ವಾಹನ ಸಂಚಾರಕ್ಕೆ ಅವಕಾಶ ಲಭ್ಯವಾಗಲಿದೆ.
ಕೇರಳ, ಕರ್ನಾಟಕ, ಗೋವಾ ಹಾಗೂ ಮುಂಬೈ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 33 ರಲ್ಲಿ ಹಾದು ಹೋಗಿರುವ ಪಂಪ್‌ವೆಲ್ ಫ್ಲೈಓವರ್ ಕಾಮಗಾರಿ ಆರಂಭಗೊಂಡು 10 ವರ್ಷಗಳೇ ಕಳೆದು ಹೋಗಿದೆ. ಕಾಮಗಾರಿಯನ್ನು ಕೈಗೆತ್ತಿಕೊಂಡಿರುವ ನವಯುಗ ಕಂಪೆನಿಯ ವಿರುದ್ದ ಸಾರ್ವಜನಿಕರು ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿಯೂ ಸಂಸದ ನಳಿನ್ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ನವಯುಗ ಕಂಪೆನಿಯ ಅಧಿಕಾರಿಗಳಿಗೆ ಬಿಸಿಮುಟ್ಟಿಸಿದ್ದರು.
ಪಂಪ್ ವೆಲ್ ಪ್ಲೈಓವರ್ ಕಾಮಗಾರಿ ವಿಳಭವಾಗುತ್ತಿರೋ ಹಿನ್ನೆಲೆಯಲ್ಲಿ ಡಿ.31ರಂದು ಸಂಸದ ನಳಿನ್‌ಕುಮಾರ್ ಕಟೀಲು ಅವರ ಅಧ್ಯಕ್ಷತೆಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪಂಪ್‌ವೆಲ್ ಫ್ಲೈಓವರ್ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಕಾಮಗಾರಿಯ ಮೇಲ್ವಿಚಾರಣೆ ಜವಾಬ್ದಾರಿ ಜಿಲ್ಲಾಧಿಕಾರಿಯವರಿಗೆ ನೀಡಿರುವುದು ಫಲ ಕೊಟ್ಟಿದೆ. ರಾಷ್ಟ್ರೀಯ ಅಭಿವೃದ್ದಿ ಪ್ರಾಧಿಕಾರದ ಯೋಜನಾ ನಿರ್ದೇಶಕರು, ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರು, ಲೋಕೋ ಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರು ಹಾಗೂ ಮಂಗಳೂರು ತಹಸೀಲ್ದಾರರು ಇರುವ ನಾಲ್ಕು ಮಂದಿಯ ಸಮಿತಿ ಕಾಮಗಾರಿಯ ದೈನಂದಿನ ಪ್ರಗತಿಯ ಬಗ್ಗೆ ಪರಿಶೀಲನೆ ನಡೆಸುತ್ತಿದೆ. ಈ ಸಮಿತಿ ಸದಸ್ಯರ ಜತೆ ಜಿಲ್ಲಾಧಿಕಾರಿ ದಿನಂಪ್ರತಿ ಸಭೆ ನಡೆಸುತ್ತಾರೆ. ಸಭೆ ಬಳಿಕ ಜಿಲ್ಲಾಧಿಕಾರಿ ಸಂಬಂಧಪಟ್ಟವರಿಗೆ ನಿರ್ದೇಶನ ನೀಡುತ್ತಿದ್ದಾರೆ. ಹೀಗಾಗಿ ತಿಂಗಳಾಂತ್ಯಕ್ಕೆ ಪ್ಲೈಓವರ್ ಕಾಮಗಾರಿ ಸಂಪೂರ್ಣವಾಗಿ ಮುಕ್ತಾಯಗೊಳ್ಳಲಿದ್ದು, ವಾಹನ ಸಂಚಾರಕ್ಕೆ ಮುಕ್ತವಾಗಲಿದೆ.
ವಾಹನ ಓಡಾಟಕ್ಕೆ ಸಿದ್ದವಾಯ್ತು ಪಂಪ್‌ವೆಲ್ ಫ್ಲೈಓವರ್ !
- Advertisement -