Bengaluru Metro budget: ನಮ್ಮ ಮೆಟ್ರೋ 3ನೇ ಹಂತದ ಕಾಮಗಾರಿಗೆ 16,328 ಕೋಟಿ ಘೋಷಣೆ

ಬೆಂಗಳೂರು: (Bengaluru Metro budget) ಕರ್ನಾಟಕ ಬಜೆಟ್​​ ಆರಂಭವಾಗಿದ್ದು, ಇಂದು 10.15ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆ ಮಾಡಿದ್ದಾರೆ. ಇದು ಈ ಸರಕಾರದ ಕೊನೆಯ ಬಜೆಟ್ ಆಗಿದ್ದು, ಬೊಮ್ಮಾಯಿ ಅವರು ಮಂಡನೆ ಮಾಡುತ್ತಿರುವ ಎರಡನೇ ಬಜೆಟ್ ಆಗಿದೆ. ಹೀಗಾಗಿ ನಿರೀಕ್ಷೆಗಳು ಹೆಚ್ಚಾಗಿತ್ತು. ನಿರೀಕ್ಷೆಯಂತೆ ಬೆಂಗಳೂರಿನ ನಮ್ಮ ಮೆಟ್ರೋಗೆ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್‌ ನಲ್ಲಿ ಭರ್ಜರಿಯಾಗೇ ಅನುದಾನ ಲಭಿಸಿದೆ.

ಬೆಂಗಳೂರು ನಮ್ಮ ಮೆಟ್ರೋ ಮೂರನೇ ಹಂತದ ಕಾಮಗಾರಿಗೆ 16,328 ಕೋಟಿ ಅನುದಾನವನ್ನು ಸಿಎಂ ಬೊಮ್ಮಾಯಿ ಬಜೆಟ್‌ ನಲ್ಲಿ ಮೀಸಲಿಟ್ಟಿದ್ದಾರೆ. ಕೇಂದ್ರ ಸರಕಾರದ ಅನುಮತಿಯ ನಂತರ ನಮ್ಮ ಮೆಟ್ರೋ ಮೂರನೇ ಹಂತದ ಕಾಮಗಾರಿಯನ್ನು ಆರಂಭಿಸಲಾಗುವುದು ಎಂದು ಬೊಮ್ಮಾಯಿ ಅವರು ಬಜೆಟ್‌ ವೇಳೆ ಮಾಹಿತಿ ನೀಡಿದ್ದಾರೆ. ಈ ಮೂಲಕ ಬೆಂಗಳೂರಿನ ನಮ್ಮ ಮೆಟ್ರೋ ವಿಸ್ತರಣೆಗೆ ಬಜೆಟ್‌ ನಲ್ಲೊ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರ್ಜರಿ ಕೊಡುಗೆಯನ್ನೇ ನೀಡಿದ್ದು, ಬೆಂಗಳೂರು ಉಪನಗರ ರೈಲು ಯೋಜನೆ ಅಡಿಯಲ್ಲಿ ಚಿಕ್ಕಬಾಣಾವರ-ಬೈಯಪ್ಪನಹಳ್ಳಿ ಕಾರಿಡಾರ್‌ ಗೆ 860 ಕೋಟಿ ಅನುದಾನವನ್ನು ಒದಗಿಸಿದ್ದಾರೆ.

ಬೆಂಗಳೂರು ಮೆಟ್ರೋ ರೈಲು ವಿಸ್ತರಣೆಯಲ್ಲಿ 58.19 ಕಿಲೋಮೀಟರ್‌ ಕಾಮಗಾರಿ ನಡೆಯುತ್ತಿದ್ದು, ಈ ವರ್ಷ 40.15 ಕಿಲೋಮೀಟರ್‌ ಮಾರ್ಗ ಕಾರ್ಯಗತವಾಗಲಿದೆ. ಇನ್ನೂ 31 ನಿಲ್ದಾಣಗಳಿರುವ ಮೆಟ್ರೋ ಮೂರನೇ ಹಂತದ ಕಾಮಗಾರಿಯ ಕುರಿತು ಕೇಂದ್ರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ.

ಬೈಯಪ್ಪನಹಳ್ಳಿಯ ಸರ್‌ ಎಂ. ವಿಶ್ವೇಶ್ವರಯ್ಯ ಮೆಟ್ರೋ ಟರ್ಮಿನಲ್‌ ಅನ್ನು ಸಮರ್ಪಕವಾಗಿ ಬಳಸಿಕೊಳ್ಳುಬ ದೃಷ್ಟಿಯಿಂದ ಅದರ ಸುತ್ತಮುತ್ತಲಿನ ಸಂಪರ್ಕ ರಸ್ತೆಗಳನ್ನು ಸಮಗ್ರವಾಗಿ ಅಭಿವೃದ್ದಿಗೊಳಿಸಲು ಮತ್ತು ಸಂಚಾರ ದಟ್ಟಣೆ ಪ್ರಮಾಣವನ್ನು ಕಡಿಮೆ ಮಾಡಲು 300 ಕೋಟಿ ರೂ ವೆಚ್ಚದಲ್ಲಿ ಅಗತ್ಯ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಬೆಂಗಳೂರು ಮೆಟ್ರೋ ರೈಲು ಯೋಜನೆಯ ಒಟ್ಟು 56 ಕಿಮೀ ಗಳ ಜಾಲವು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದೆ.

ಇದನ್ನೂ ಓದಿ : Karnataka health Budget : ಕರ್ನಾಟಕ ರಾಜ್ಯ ಬಜೆಟ್‌ 2023 : ರಾಜ್ಯ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದ ಬೊಮ್ಮಾಯಿ ಬಜೆಟ್

ಹಿಂದಿನ ಬಜೆಟ್‌ ನಲ್ಲಿ ಮೆಟ್ರೋ ಜಾಲದ ಮೂರನೇ ಹಂತದ ಕಾಮಗಾರಿಗಳ ಬಗ್ಗೆ ಪ್ರಸ್ತಾಪಿಸಿದ್ದು, 44.65 ಕಿ.ಮೀ. ಉದ್ದದ31 ನಿಲ್ದಾಣಗಳನ್ನು ಒಳಗೊಂಡಂತೆ ಎರಡು ಮಾರ್ಗಗಳ ವಿಸ್ತ್ರತ ವರದಿಯನ್ನು ಕೆಂದ್ರ ಸರಕಾರಕ್ಕೆ ಸಲ್ಲಿಸಲಾಗಿದೆ. ಇದಕ್ಕೆ 16,328 ಕೋಟಿ.ರೂ ವೆಚ್ಚ ಅಂದಾಜಿಸಲಾಗಿದೆ.

Bengaluru Metro budget: 16,328 crore announced for the work of our Metro 3rd phase

Comments are closed.