ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ಎರಡನೇ ಬಾರಿಗೆ ಬಜೆಟ್ ಮಂಡನೆ (Karnataka budget 2023) ಮಾಡಲಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈ ಬಾರಿ ಬಂಪರ್ ಆಫರ್ ಗಳನ್ನು ನಿರೀಕ್ಷಿಸಲಾಗುತ್ತಿದೆ. ಇಂದು ಬಜೆಟ್ ಮಂಡನೆಗೆ ಮೊದಲೇ ದೇವರ ದರ್ಶನ ಪಡೆದಿದ್ದಾರೆ.
ಸಿಎಂ ಬಸವರಾಜ್ ಬೊಮ್ಮಾಯಿ ಅವರು ಇಂದು ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನವನ್ನು ಪಡೆದುಕೊಂಡಿದ್ದಾರೆ. ರಾಜ್ಯದ ಸಮಸ್ತ ಜನತೆಯ ಹೆಸರಿನಲ್ಲಿ ಅರ್ಚನೆ ಮಾಡಿಸಿರುವ ಬಸವರಾಜ್ ಬೊಮ್ಮಾಯಿ, ರೇಸ್ ಕೋರ್ಸ್ ಬಳಿಯಲ್ಲಿರುವ ಸರಕಾರಿ ನಿವಾಸಕ್ಕೆ ತೆರಳಿ, ಬಜೆಟ್ ಪುಸ್ತಕದೊಂದಿಗೆ ಬಸ್ ನಲ್ಲಿ ವಿಧಾನಸೌಧಕ್ಕೆ ಆಗಮಿಸಲಿದ್ದಾರೆ. ನಂತರ ಇಂದು ಬೆಳಗ್ಗೆ 9.45ಕ್ಕೆ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯನ್ನು ನಡೆಸಲಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ ಅವರು ಬಜೆಟ್ ಪ್ರತಿಯೊಂದಿಗೆ ಈಗಾಗಲೇ ವಿಧಾನಸೌಧಕ್ಕೆ ಆಗಮಿಸಿದ್ದಾರೆ.
ಚುನಾವಣಾ ಪೂರ್ವ ಬಜೆಟ್ ಆಗಿರುವ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಬಡವರು, ಮಧ್ಯಮ ವರ್ಗದವರಿಗೆ, ಮಹಿಳೆಯರಿಗೆ ಬಂಪರ್ ಯೋಜನೆಯನ್ನು ಘೋಷಿಸುವ ಸಾಧ್ಯತೆಯಿದೆ. ಸಣ್ಣ ಸಮುದಾಯಗಳ ಅಭಿವೃದ್ದಿಗೆ ವಿಶೇಷ ಯೋಜನೆಗಳನ್ನು ಜಾರಿಗೆ ತರುವ ಸಾಧ್ಯತೆಯಿದೆ. ಸರಕಾರಿ ನೌಕರರ ಬೇಡಿಕೆಗಳನ್ನು ಬಜೆಟ್ ಮೂಲಕ ಈಡೇರಿಕೆ ಮಾಡುವ ಸಾಧ್ಯತೆಯಿದೆ.
ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆಯನ್ನು ನೀಡುವ ಸಾಧ್ಯತೆಯಿದೆ. ಅಂತರ್ಜಲ ವೃದ್ದಿ, ರಸ್ತೆಗುಂಡಿಗಳನ್ನು ಮುಚ್ಚುವುದು, ಕೊಳಚೆ ನೀರಿನ ಸಂಸ್ಕೃರಣೆ ಸೇರಿದಂತೆ ಮೂಲಭೂತ ಸೌಕರ್ಯಗಳ ಅಭಿವೃದ್ದಿಗಾಗಿ ಹತ್ತು ಸಾವಿರ ಕೋಟಿಗೂ ಅಧಿಕ ಹಣವನ್ನು ಮೀಸಲಿರಿಸುವ ನಿರೀಕ್ಷೆಯನ್ನು ಹೊಂದಲಾಗಿದೆ.
ಇದನ್ನೂ ಓದಿ : Karnataka budget 2023 expectations: ಬಿಜೆಪಿ ಸರಕಾರದ ಕೊನೆಯ ಬಜೆಟ್ ನ ನಿರೀಕ್ಷೆಗಳೇನು?
ಇದನ್ನೂ ಓದಿ : State Budget 2023 : ರಾಜ್ಯ ಬಜೆಟ್ 2023: ಸಿಎಂ ಬೊಮ್ಮಾಯಿ ಬಜೆಟ್‌ನಲ್ಲಿ ಕರಾವಳಿ ನಿರೀಕ್ಷೆಗಳೇನು ?
CM Basavaraj Bommai who got darshan of God even before Karnataka budget 2023 presentation
English News Click Here