ಭಾನುವಾರ, ಏಪ್ರಿಲ್ 27, 2025
HomeBUDGETEducation budget 2023: ಶಿಕ್ಷಣ ಕ್ಷೇತ್ರಕ್ಕೆ ಬೊಮ್ಮಾಯಿ ಭರ್ಜರಿ ಗಿಫ್ಟ್:‌ ಉಚಿತ ಶಿಕ್ಷಣ, ಉಚಿತ ಬಸ್‌ಪಾಸ್‌,...

Education budget 2023: ಶಿಕ್ಷಣ ಕ್ಷೇತ್ರಕ್ಕೆ ಬೊಮ್ಮಾಯಿ ಭರ್ಜರಿ ಗಿಫ್ಟ್:‌ ಉಚಿತ ಶಿಕ್ಷಣ, ಉಚಿತ ಬಸ್‌ಪಾಸ್‌, ಸಹಾಯಧನ ಹೆಚ್ಚಳ

- Advertisement -

ಬೆಂಗಳೂರು: (Education budget 2023) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಬಜೆಟ್‌ ಮಂಡನೆಯನ್ನು ಮಾಡಿದ್ದು, 2023-24 ನೇ ಸಾಲಿನ ಬಜೆಟ್‌ ಮಂಡನೆಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರ್ಜರಿ ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ.ಈ ಬಾರಿಯ ಬಜೆಟ್ ನಲ್ಲಿ ರಾಜ್ಯ ಸರ್ಕಾರ ಶಿಕ್ಷಣ ಇಲಾಖೆ ಹೆಚ್ಚಿನ ಆದ್ಯತೆ ನೀಡಿದ್ದು, ವಿದ್ಯಾಶಕ್ತಿ ಯೋಜನೆಯನ್ನು ಹೊಸದಾಗಿ ಘೋಷಣೆ ಮಾಡಿದೆ. ಈ ಮೂಲಕ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಪದವಿ ಹಂತದವರೆಗೂ ಎಲ್ಲಾ ಮಕ್ಕಳಿಗೂ ಸಂಪೂರ್ಣ ಶುಲ್ಕ ವಿನಾಯತಿ ನೀಡಲಾಗಿದೆ. ಇದರ ಜತೆಗೆ ಶಾಲೆ, ಕಾಲೇಜು, ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿ ನಿಟ್ಟಿನಲ್ಲಿ ಹೆಚ್ಚಿನ ಅನುದಾನ (Education budget 2023) ನೀಡಲಾಗಿದೆ.

ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕರು, ಬಿಸಿಯೂಟ ತಯಾರಕರು, ಬಿಸಿಯೂಟ ಸಹಾಯಕರು, ಅತಿಥಿ ಉಪನ್ಯಾಸಕರು, ಅತಿಥಿ ಶಿಕ್ಷಕರು, ಗ್ರಾಮ ಸಹಾಯಕರು, ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಮೇಲ್ವಿಚಾರಕರು ಮತ್ತು ಗ್ರಾಮ ಪಂಚಾಯಿತಿ ಸದಸ್ಯರುಗಳ ಗೌರವಧನ ಹೆಚ್ಚಿಸಲಾಗಿದೆ. ಇದರಿಂದ 4,45 ಲಕ್ಷ ಜನರಿಗೆ ಫಲ ದೊರೆತಿದ್ದು, ಒಟ್ಟು 775 ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ. ಅವರ ಸೇವೆಯನ್ನು ಗುರುತಿಸಿ, ಅವರಿಗೆ ನೀಡುವ ಮಾಸಿಕ ಗೌರವಧನವನ್ನು 1,000 ರೂ. ದಂತೆ ಹೆಚ್ಚಿಸಲು ನಿರ್ಧರಿಸಲಾಗಿದೆ.

ರಾಜ್ಯದ 10.32 ಲಕ್ಷ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆಯಡಿ 725 ಕೋಟಿ ರೂ. ಮೊತ್ತವನ್ನು ನೀಡಲಾಗಿದೆ. 2022-23ನೇ ಸಾಲಿನಲ್ಲಿ ಈ ಸೌಲಭ್ಯವನ್ನು ಭೂರಹಿತ ಕೃಷಿ ಕೂಲಿ ಕಾರ್ಮಿಕರು, ನೇಕಾರರು, ಮೀನುಗಾರರು, ಯೆಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರು ಹಾಗೂ ಆಟೋರಿಕ್ಷಾ ಚಾಲಕರ ಮಕ್ಕಳಿಗೆ ವಿಸ್ತರಿಸಲಾಗಿದ್ದು, ಹೆಚ್ಚುವರಿಯಾಗಿ 3 ಲಕ್ಷ ವಿದ್ಯಾರ್ಥಿಗಳಿಗೆ 141 ಕೋಟಿ ರೂ. ಮೊತ್ತವನ್ನು ನೀಡಲಾಗಿದೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆಯನ್ನು ರಾಜ್ಯದ ಸಿಂಪಿಗರ ಮಕ್ಕಳಿಗೂ ವಿಸ್ತರಿಸಲಾಗುವುದು ಎಂದು ಘೋಷಿಸಿದ್ದಾರೆ.

ರಾಜ್ಯದ ಎಲ್ಲಾ ಪ್ರೌಢ ಶಾಲಾ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಹೊಂದಲು ಅನುವು ಮಾಡಿಕೊಡುವ ದೃಷ್ಟಿಯಿಂದ ಮುಖ್ಯಮಂತ್ರಿ ವಿದ್ಯಾಶಕ್ತಿ' ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ. ಇದರಡಿಯಲ್ಲಿ ಸರ್ಕಾರಿ ಪದವಿಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ನೀಡಲಾಗುವುದು. ಈ ಉಚಿತ ಉನ್ನತ ಶಿಕ್ಷಣದಿಂದ ರಾಜ್ಯದ 8 ಲಕ್ಷ ವಿದ್ಯಾರ್ಥಿಗಳು ಅನುಕೂಲ ಪಡೆಯಲಿದ್ದಾರೆ.ರಾಜ್ಯದಲ್ಲಿ ಈಗಾಗಲೇ 19 ಲಕ್ಷ ಶಾಲಾ-ಕಾಲೇಜು ವಿದ್ಯಾರ್ಥಿಗಳು ತಮ್ಮ ಶಿಕ್ಷಣಕ್ಕಾಗಿ ಸಾರ್ವಜನಿಕ ಬಸ್ಸುಗಳ ಸೇವೆಯನ್ನು ಅವಲಂಬಿಸಿದ್ದಾರೆ.ಹೀಗಾಗಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ವರ್ಷದಲ್ಲಿ ಸಾರಿಗೆ ನಿಗಮಗಳ ಮೂಲಕ 100 ಕೋಟಿ ರೂ. ವೆಚ್ಚದಲ್ಲಿ 1,000ಮಕ್ಕಳ ಬಸ್ಸು’ ಎಂಬ ಯೋಜನೆಯನ್ನು ಪ್ರಾರಂಭಿಸುತ್ತಿದ್ದು, ಇದರಿಂದ ಹೆಚ್ಚುವರಿಯಾಗಿ 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ವಿವೇಕ ಯೋಜನೆಯಡಿಯಲ್ಲಿ 7,601 ಶಾಲಾ ಮತ್ತು ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿಗಳನ್ನು 1,194 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಅಲ್ಲದೇ ಇಲಾಖೆಯ ಇತರೆ ಯೋಜನೆಗಳಡಿ ಹೆಚ್ಚುವರಿಯಾಗಿ 1,955 ಕೊಠಡಿಗಳನ್ನು 382 ಕೋಟಿ ರೂ. ವೆಚ್ಚದಲ್ಲಿ ಅನುಮೋದಿಸಲಾಗಿದೆ. ಉತ್ತಮ ಮೂಲಭೂತ ಸೌಕರ್ಯಗಳು ಮತ್ತು ಸೂಕ್ತ ಕಲಿಕಾ ಸಂಪನ್ಮೂಲಗಳನ್ನು ಮಕ್ಕಳಿಗೆ ಒದಗಿಸಲು ಹೊಸ ಕೇಂದ್ರ ಪುರಸ್ಕೃತ ಯೋಜನೆಯಾದ ಪಿಎಂ ಶ್ರೀಯನ್ನು 100 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.ನರೇಗಾ ಸಂಯೋಜನೆಯೊಂದಿಗೆ 250 ಕೋಟಿ ರೂ. ಅಂದಾಜು ವೆಚ್ಚದಲ್ಲಿ 7,750 ಶೌಚಾಲಯಗಳನ್ನು ನಿರ್ಮಾಣ ಕೈಗೊಳ್ಳಲಾಗಿದೆ. ಮಾರ್ಚ್ 2023ರ ಅಂತ್ಯದಲ್ಲಿ 2,169 ಶೌಚಾಲಯಗಳು ಪೂರ್ಣಗೊಳ್ಳಲಿದ್ದು, ಉಳಿದ 5,581 ಶೌಚಾಲಯಗಳನ್ನು 2023-24ನೇ ಸಾಲಿನಲ್ಲಿ ನಿರ್ಮಿಸಲಾಗುವುದು. ಇದಕ್ಕೆ ಒಟ್ಟು 80 ಕೋಟಿ ರೂ. ಹಂಚಿಕೆ ಮಾಡಿದ್ದು, ಅದರಲ್ಲಿ 50 ಕೋಟಿ ರೂ. ಗಳನ್ನು ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ಒದಗಿಸಲಾಗಿದೆ

ರಾಜ್ಯದ 93 ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿನ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ಒದಗಿಸಲು ಎಲ್ಲಾ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ 632 ಕೋಟಿ ರೂ. ಗಳ ವೆಚ್ಚದಲ್ಲಿ ಪ್ರಸಕ್ತ ವರ್ಷದಲ್ಲಿ ಹೆಚ್ಚುವರಿಯಾಗಿ 1,230 ಕೊಠಡಿಗಳ ನಿರ್ಮಾಣ, ಹಳೆಯ ಮತ್ತು ಅಧಿಕ ಮಳೆಯಿಂದಾಗಿ ಹಾನಿಯಾಗಿರುವ 2,777 ಕೊಠಡಿಗಳ ದುರಸ್ತಿ. ಅಧಿಕ ದಾಖಲಾತಿಯಿರುವ ಶಾಲಾ-ಕಾಲೇಜುಗಳಲ್ಲಿ ಹೆಚ್ಚುವರಿ ಶೌಚಾಲಯಗಳ ನಿರ್ಮಾಣ, ಸರ್ಕಾರಿ ಪದವಿ ಹೆಚ್ಚುವರಿಯಾಗಿ ನಿರ್ಮಾಣ. ಕಾಲೇಜುಗಳಲ್ಲಿ ಕೊಠಡಿಗಳ 260 ಶೌಚಾಲಯಗಳನ್ನು 2023-24ನೇ ಸಾಲಿನಲ್ಲಿ ನಿರ್ಮಿಸಲಾಗುವುದು, ಇದಕ್ಕೆ ಒಟ್ಟು 80 ಕೋಟಿ ರೂ. ಹಂಚಿಕೆ ಮಾಡಿದ್ದು, ಅದರಲ್ಲಿ 50 ಕೋಟಿ ರೂ. ಗಳನ್ನು ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ಒದಗಿಸಲಾಗಿದೆ ಎಂದರು.

ಕಾಲೇಜುಗಳಲ್ಲಿ ಕೊಠಡಿಗಳ 260 ತರಗತಿ ಆಯ್ದ 60 ತಾಲ್ಲೂಕುಗಳಲ್ಲಿ ತಲಾ ಒಂದು ಪದವಿ ಪೂರ್ವ ಕಾಲೇಜನ್ನು ಗುರುತಿಸಿ, ವಿಜ್ಞಾನ ಶಿಕ್ಷಣಕ್ಕಾಗಿ ಅಗತ್ಯ ಸೌಲಭ್ಯ ನೀಡುವ ಮೂಲಕ ಆದರ್ಶ ಪದವಿ ಪೂರ್ವ ಕಾಲೇಜುಗಳ ಅಭಿವೃದ್ಧಿಗೆ ಕ್ರಮ. 30 ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ನಿಲಯಗಳಲ್ಲಿ ನಿರ್ಮಾಣ, 47 ವಸತಿ ಶಾಲೆಗಳ ದುರಸ್ತಿ ಮತ್ತು ಸ್ಮಾರ್ಟ್ ಕ್ಲಾಸ್‌ರೂಮ್ ಗಳ ಅಭಿವೃದ್ಧಿಗೆ ಕ್ರಮವಹಿಸಲಾಗಿದೆ ಎಂದು ಹೇಳಿದರು.ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮತ್ತು ಆವಿಷ್ಕಾರಾತ್ಮಕ ಮನೋಭಾವ ಬೆಳೆಸಲು 73 ಕರ್ನಾಟಕ ಪಬ್ಲಿಕ್ ಶಾಲೆಗಳು ಮತ್ತು 50 ಆದರ್ಶ ವಿದ್ಯಾಲಯಗಳಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ‘ಸೃಷ್ಟಿ’ ಟಿಂಕರಿಂಗ್ ಪ್ರಯೋಗಾಲಯಗಳ ಸ್ಥಾಪನೆ ಮಾಡಲಾಗುತ್ತಿದೆ. ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಹೊಂದಿಲ್ಲದ 23 ತಾಲ್ಲೂಕುಗಳಲ್ಲಿ ಹೊಸದಾಗಿ ಶಾಲೆಗಳನ್ನು ನಿರ್ಮಿಸಲು ಮತ್ತು ಕಾರ್ಯನಿರ್ವಹಿಸುತ್ತಿರುವ 46 ಶಾಲೆಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ನೀಡಲಾಗಿದೆ.

ಪ್ರಚಲಿತ ವಿದ್ಯಮಾನಗಳ ಕುರಿತು, ಆಸಕ್ತಿ ಹಾಗೂ ಅರಿವು ಹೊಂದಲು ಅನುವಾಗುವಂತೆ 24,347 ಶಾಲೆಗಳಲ್ಲಿ 20 ಕೋಟಿ ರೂ. ಅನುದಾನದಲ್ಲಿ ಗಂಥಾಲಯಗಳ ಬಲವರ್ಧನೆ ಹಾಗೂ ರೀಡಿಂಗ್ ಕಾರ್ನ‌್ರಗಳನ್ನು ಸ್ಥಾಪಿಸಲಾಗುವುದು. 7 ಹೊಸ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ. ಸದರಿ ಸಮಿತಿಯ ಶಿಫಾರಸ್ಸಿನನ್ವಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಉದ್ದೇಶಕ್ಕಾಗಿ 50 ಕೋಟಿ ರೂ. ಗಳನ್ನು ನೀಡಲಾಗಿದೆ. ಉನ್ನತ ಶಿಕ್ಷಣ ಪಡೆಯಲು ಇರುವ ಭಾಷೆಯ ತೊಡಕು ನಿವಾರಿಸಲು ಕರ್ನಾಟಕದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಹಾಗೂ ವೃತ್ತಿಪರ ಕೋರ್ಸುಗಳಲ್ಲಿ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅನುವಾಗುವಂತೆ ರೆಫರೆನ್ಸ್ ಪುಸ್ತಕಗಳು ಹಾಗೂ ಪಠ್ಯ ವಿಷಯಗಳನ್ನು ಮುಂದಿನ ಒಂದು ವರ್ಷದಲ್ಲಿ ಭಾಷಾಂತರಿಸಲು ಕ್ರಮ ಕೈಗೊಳ್ಳಲಾಗುವುದು.

‘ಹಳ್ಳಿ ಮುತ್ತು’ ಎಂಬ ಯೋಜನೆಯಡಿ ಗ್ರಾಮೀಣ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಾಲಾ ಶಿಕ್ಷಣವನ್ನು ಪೂರೈಸುವ 500 ಅತ್ಯುತ್ತಮ ವಿದ್ಯಾರ್ಥಿಗಳಿಗೆ ಅವರು ಸಿಇಟಿ ಮೂಲಕ ಸರ್ಕಾರಿ ಕೋಟಾದಲ್ಲಿ ಆಯ್ಕೆಯಾದ ವೃತ್ತಿಪರ ಶಿಕ್ಷಣದ ಸಂಪೂರ್ಣ ಶುಲ್ಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಭರಿಸಲಾಗುವುದು. 10 ಸುಶಾಸನ ಸೂಚ್ಯಂಕಗಳನ್ವಯ ಅತ್ಯುತ್ತಮ ಸಾಧನೆ ಮಾಡುವ ವಿಶ್ವವಿದ್ಯಾಲಯಗಳಿಗೆ ತಲಾ 50 ಲಕ್ಷ ರೂ. ಗಳಂತೆ ಪ್ರೋತ್ಸಾಹ ಧನ ನೀಡಲಾಗುವುದು. ಬೆಂಗಳೂರು ನಗರದ ಕೇಂದ್ರ ಭಾಗದ 5 ವ್ಯಾಪ್ತಿಯೊಳಗಿರುವ ಪಾರಂಪರಿಕ ಮತ್ತು ಶೈಕ್ಷಣಿಕ ಸಂಸ್ಥೆಗಳನ್ನು ಹೊಂದಿರುವ ಪ್ರದೇಶವನ್ನು ಪಾರಂಪರಿಕ ಮತ್ತು ಶೈಕ್ಷಣಿಕ ಜಿಲ್ಲೆಯಾಗಿ ಘೋಷಿಸುವ ನಿಟ್ಟಿನಲ್ಲಿ ಕಾರ್ಯಸಾಧ್ಯತೆ ಅಧ್ಯಯನ ಮಾಡಲಾಗುವುದು.

ವಿಜ್ಞಾನ ಮತ್ತು ತಂತ್ರಜ್ಞಾನದ ವೃತ್ತಿಪರ ಕೋರ್ಸ್‌ಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸುವುದಕ್ಕೆ ರಾಜ್ಯದಲ್ಲಿ 100 ಆಯ್ಕೆ ಪದವಿ ಕಾಲೇಜುಗಳಲ್ಲಿ ಪ್ರೊ. ಸಿ.ಎನ್.ಆರ್. ರಾವ್ ವಿಜಾನ ಕಾರ್ಯಕ್ರಮದಡಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ ವಿಜ್ಞಾನ ವಿಭಾಗವನ್ನು ಪ್ರಾರಂಭಕ್ಕೆ ಕ್ರಮ. ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಅಕಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್ಸ್ ಮತ್ತು ಡಿಜಿಲಾಕರ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಕ್ರಮ ವಹಿಸಲಾಗುವುದು. ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯಗಳಲ್ಲಿ ಸರಳ ಹಾಗೂ ಪಾರದರ್ಶಕ ಪ್ರವೇಶಾವಕಾಶಕ್ಕೆ ಏಕರೂಪ ವ್ಯವಸ್ಥೆ ಕಲ್ಪಿಸಲಾಗುವುದು.ಪ್ರತಿ ಜಿಲ್ಲೆಯಲ್ಲಿ ಒಂದರಂತೆ, ‘ವೃದ್ಧಿ’ ಯೋಜನೆಯಡಿ ತಲಾ 2 ಕೋಟಿ ರೂ. ನಂತೆ ಒಟ್ಟು 124 ಕೋಟಿ ರೂ. ವೆಚ್ಚದಲ್ಲಿ ಅತಿ ಹೆಚ್ಚು ದಾಖಲಾತಿ ಹೊಂದಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್‌ ಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿ ಇವುಗಳನ್ನು ಅತ್ಯುತ್ತಮ ಉನ್ನತ ಶಿಕ್ಷಣ ಸಂಸ್ಥೆಗಳಾಗಿ ರೂಪಿಸಲಾಗುತ್ತಿದೆ.

ಇದನ್ನೂ ಓದಿ : Sports budget 2023: ಲೆಕ್ಕಕ್ಕುಂಟು ಆಟಕ್ಕಿಲ್ಲದ ರಾಜ್ಯ ಕ್ರೀಡಾ ಬಜೆಟ್‌

ವಿದ್ಯಾರ್ಥಿಗಳಲ್ಲಿ ಶಿಸ್ತು ಹಾಗೂ ದೇಶಕ್ಕಾಗಿ ಸಮರ್ಪಣಾ ಭಾವವನ್ನು ಮೂಡಿಸಲು ರಾಜ್ಯದಲ್ಲಿ ಈ ವರ್ಷ 2 ಹೊಸ ಎನ್.ಸಿ.ಸಿ. ಘಟಕಗಳನ್ನು ಸ್ಥಾಪಿಸಲಾಗುವುದು. ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿ ಉನ್ನತ ಶಿಕ್ಷಣವನ್ನು ಬಲಪಡಿಸಲು ಒಟ್ಟು 125 ಕೋಟಿ ರೂ. ಅನುದಾನ ನೀಡಲಾಗಿದೆ. ಕೊಠಡಿಗಳು, ವಿಜ್ಞಾನ ಪ್ರಯೋಗಾಲಯಗಳನ್ನು ನಿರ್ಮಾಣ, ಮಾಡಲಾಗುವುದು.`ವಿದ್ಯಾವರ್ಧಿನಿ’ ಯೋಜನೆಯಡಿ ಎಲ್ಲಾ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳು ಹಾಗೂ ಪಾಲಿಟೆಕ್ನಿಕ್‌ಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳು ಹಾಗೂ ಶೈಕ್ಷಣಿಕ ಉಪಕರಣಗಳನ್ನು ಒದಗಿಸಲಾಗುವುದು. ವಿದ್ಯಾರ್ಥಿನಿಯರ ದೈಹಿಕ ಸಾಮರ್ಥ್ಯ ಮತ್ತು ಆತ್ಮವಿಶ್ವಾಸ ವೃದ್ಧಿಗೆ ಎಲ್ಲಾ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಯೋಗ ತರಬೇತಿ ನೀಡಲಾಗುವುದು ಎಂದರು.

Education budget 2023: Bommai big gift to education sector: Free education, free bus pass, increase in subsidy

RELATED ARTICLES

Most Popular