ಬೆಂಗಳೂರು: (Irrigation Project Budget) ರಾಜ್ಯ ಸರಕಾರದ ಪ್ರಸಕ್ತ ಸಾಲಿನ ಬಜೆಟ್ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ್ದು, ಅಯವ್ಯಯದಲ್ಲಿ ನೀರಾವರಿ ಯೋಜನೆಗೆ ಭರ್ಜರಿಯಾಗೇ ಅನುದಾನವನ್ನು ಘೋಷಿಸಿದ್ದಾರೆ. ಬೊಮ್ಮಾಯಿ ಬಜೆಟ್ ನಲ್ಲಿ ನೀರಾವರಿ ಅಭಿವೃದ್ದಿಗಾಗಿ ಒಟ್ಟಾರೆ 25 ಸಾವಿರ ಕೋಟಿ ರೂ ಗಳ ಅನುದಾನವನ್ನು ನೀಡಿದ್ದಾರೆ.
ಉತ್ತರ ಕರ್ನಾಟಕದ ಪ್ರಮುಖ ಯೋಜನೆಯಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆಗೆ ಮೂರನೇ ಹಂತಕ್ಕೆ ಈ ಬಾರಿಯ ಬಜೆಟ್ನಲ್ಲಿ 5000 ಕೋಟಿ ರೂ ಅನುದಾನ ಘೋಷಣೆ ಮಾಡಲಾಗಿದೆ.ನೀರಾವರಿ ಆದ್ಯತೆ ದೃಷ್ಟಿಯಿಂದ 2022-23ನೇ ಸಾಲಿನಲ್ಲಿ ಒಟ್ಟು 11, 236 ಕೋಟಿ ರೂ ಮೊತ್ತದ 38 ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿತ್ತು. ಇದೀಗ ಪ್ರಸಕ್ತ ಸಾಲಿನಲ್ಲಿ ಅದನ್ನು ಅನುಷ್ಠಾನಗೊಳಿಸಲಾಗುವುದು. ಜಲಸಂಪನ್ಯೂಲ ಇಲಾಖೆಯ ವತಿಯಿಂದ ಸುಮಾರು 1.5 ಲಕ್ಷ ಎಕರೆ ನೀರಾವರಿ ಸಾಮರ್ಥ್ಯವನ್ನು ಸೃಷ್ಟಿಸಲಾಗುವುದು ಎಂದು ಬೊಮ್ಮಾಯಿ ಅವರು ಹೇಳಿದ್ದಾರೆ
ಉತ್ತರ ಕರ್ನಾಟಕದ ಪ್ರಮುಖ ಯೋಜನೆಯಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆಗೆ ಮೂರನೇ ಹಂತಕ್ಕೆ ಈ ಬಾರಿಯ ಬಜೆಟ್ನಲ್ಲಿ 5000 ಕೋಟಿ ರೂ ಅನುದಾನ ಘೋಷಣೆ ಮಾಡಲಾಗಿದೆ. ಈ ಯೋಜನೆಯಡಿ ಭೂಸ್ವಾದೀನಕ್ಕೆ ಏಕರೂಪ ದರ ನಿಗದಿಪಡಿಸುವ ಸಂಬಂಧದಲ್ಲಿ ಒಪ್ಪಂದದ ತೀರ್ಪನ್ನು ರಚಿಸುವ ಕುರಿತು ಪ್ರಸಕ್ತ ಸರ್ಕಾರ ಐತಿಹಾಸಿಕ ನಿರ್ಣಯವನ್ನು ಕೈಗೊಂಡಿದೆ. ಇದರಿಂದ ರೈತರು ಭೂಮಾಲೀಕರಿಗೆ ಶೀಘ್ರ ಭೂಪರಿಹಾರ ದೊರಕಲಿದೆ ಎಂದರು.
ಕಳಸಾ ಬಂಡೂರಿ ಯೋಜನೆಯ ಕಾಮಗಾರಿ ಪ್ರಾರಂಭಿಸಲು 800 ಕೋಟಿ ರೂ ಅನುಮೋದನೆ ನೀಡಲಾಗಿದೆ. ರಾಜ್ಯದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಪ್ರಥಮ ಹಂತದ ಕಾಮಗಾರಿಗಳು ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿದ್ದು, ತುಮಕೂರು ಜಿಲ್ಲೆವರೆಗಿನ ಗುರುತ್ವ ಕಾಲುವೆ ಮತ್ತು ಫೀಡರ್ ಕಾಲುವೆ ಕಾಮಗಾರಿಗಳನ್ನು ಪೂರ್ಣಗೊಳಿಸಿ. 2023-24ರಲ್ಲಿ ನೀರು ಪೂರೈಸಲು ಉದ್ದೇಶಿಸಲಾಗಿದೆ. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಿಗೆ ನೀರನ್ನು ಪೂರೈಸುವ ಕಾಮಗಾರಿಗಳ ಹಾಗೂ ಶ್ರೀನಿವಾಸಪುರ ಮತ್ತು ಕೋಲಾರ ಫೀಡರ್ ಚಾನೆಲ್ಗಳ ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗಿದ್ದು, ಶೀಘ್ರದಲ್ಲಿಯೇ ಕಾಮಗಾರಿಗಳನ್ನು ಪ್ರಾರಂಭಿಸಿ ಪೂರ್ಣಗೊಳಿಸಲಾಗುವುದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಲ್ಲಿ ತಮಿಳುನಾಡು ರಾಜ್ಯ ದಾವೆ ಹೂಡಿದೆ. ಇದನ್ನು ಶೀಘ್ರದಲ್ಲಿಯೇ ಇತ್ಯರ್ಥಪಡಿಸಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಈ ಯೋಜನೆಗೆ ಅಗತ್ಯ ಅನುದಾನವನ್ನು ಕಲ್ಪಿಸಲಾಗುವುದು ಹೇಳಿದ್ದಾರೆ. ತುಂಗಭದ್ರಾ ಜಲಾಶಯದಲ್ಲಿ ಸಂಗ್ರಹಣಾ ಸಾಮರ್ಥ್ಯದ ಕೊರತೆಯನ್ನು ನಿವಾರಿಸಲು ಕೊಪ್ಪಳ ಜಿಲ್ಲೆಯ ನವಲೆ ಬಳಿ ಸಮತೋಲನಾ ಜಲಾಶಯ ನಿರ್ಮಿಸಲು ಯೋಜನಾ ವರದಿಯನ್ನು ಸಿದ್ಧಪಡಿಸಲಾಗಿದೆ.
ಇದನ್ನೂ ಓದಿ : ಕರ್ನಾಟಕ ರಾಜ್ಯ ಬಜೆಟ್ 2023 : ಕರಾವಳಿಗೆ ಈ ಬಾರಿ ಭರ್ಜರಿ ಆಫರ್ ನೀಡಿದ ಬೊಮ್ಮಾಯಿ
Irrigation Project Budget: Rs 25 thousand crore grant for implementation of various irrigation projects