ಭಾನುವಾರ, ಜೂನ್ 15, 2025
HomeBUDGETಕರ್ನಾಟಕ ಬಜೆಟ್ 2023 : ಶ್ರೀ ನಾರಾಯಣ ಗುರು ವಸತಿ ಶಾಲೆಗೆ 18 ಕೋಟಿ ರೂ....

ಕರ್ನಾಟಕ ಬಜೆಟ್ 2023 : ಶ್ರೀ ನಾರಾಯಣ ಗುರು ವಸತಿ ಶಾಲೆಗೆ 18 ಕೋಟಿ ರೂ. ಅನುದಾನ

- Advertisement -

ನವದೆಹಲಿ : ಕರ್ನಾಟಕ ಬಜೆಟ್ ​​(Karnataka Budget 2023) ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Bommai State Budget 2023) ಬಜೆಟ್ ಮಂಡನೆ ಮಾಡಿದ್ದು, ಇದು ಈ ಸರಕಾರದ ಕೊನೆಯ ಬಜೆಟ್ ಆಗಿದ್ದು, ಬೊಮ್ಮಾಯಿ ಅವರು ಮಂಡನೆ ಮಾಡುತ್ತಿರುವ ಎರಡನೇ ಬಜೆಟ್ ಆಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರತಿ ಶಾಲೆಗೆ 18 ಕೋಟಿ ರೂ.ಗಳ ವೆಚ್ಚದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆ (Shree Narayan Guru Residential School) ಆರಂಭಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್‌ನಲ್ಲಿ ಘೋಷಿಸಿದರು.

ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದರಂತೆ ಪ್ರತಿ ಶಾಲೆಗೆ 18 ಕೋಟಿ ರೂ. ವೆಚ್ಚದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆಯನ್ನು ಪ್ರಾರಂಭಿಸಲು ಕ್ರಮ ವಹಿಸಲಾಗಿದೆ ಎಂದು ಎಇಎಂ ಬೊಮ್ಮಾಯಿ ರಾಜ್ಯ ಬಜೆಟ್‌ನಲ್ಲಿ ಘೋಷಣೆ ಮಾಡಿದರು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ನಿರ್ಮಾಣ ಮಾಡಲು ಹಾಗೂ ಮೂಲ ಸೌಕರ್ಯಗಳಿಂದ ಕೂಡಿದ ವಸತಿ ಯೋಜನೆಯನ್ನು ಮಾಡಲಾಗುವುದು. ಹೀಗಾಗಿ ವಿದ್ಯಾರ್ಥಗಳಿಗೆ ವಸತಿ ಉಡುಪಿ, ದಕ್ಷಿಣ ಮತ್ತು ಉತ್ತರ ಕನ್ನಡದಲ್ಲಿನ ವಸತಿ ಶಾಲೆಗಳ ಅಭಿವೃದ್ಧಿ ಮಾಡಲಾಗುವುದು.

ಅಷ್ಟೇ ಅಲ್ಲದೇ ಈ ಬಾರೀ ರಾಜ್ಯ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಪ್ರಾಶ್ಯತೆಯನ್ನು ನೀಡಲಾಗಿದೆ. ರಾಜ್ಯದ ಎಲ್ಲಾ ಪ್ರೌಢ ಶಾಲಾ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಹೊಂದಲು ಅನುವು ಮಾಡಿಕೊಡುವ ದೃಷ್ಟಿಯಿಂದ ಮುಖ್ಯಮಂತ್ರಿ ವಿದ್ಯಾಶಕ್ತಿ’ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ. ಇದರಡಿಯಲ್ಲಿ ಸರ್ಕಾರಿ ಪದವಿಪೂರ್ವ ಮತ್ತು ಸರಕಾರಿ ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ನೀಡಲಾಗುವುದು.

ಇದನ್ನೂ ಓದಿ : State budget 2023: ಗೃಹಿಣಿಯರಿಗೆ ಹಾಗೂ ಮಹಿಳಾ ಕಾರ್ಮಿಕರಿಗೆ 500 ರೂ ಸಹಾಯಧನ ಘೋಷಣೆ

ಇದನ್ನೂ ಓದಿ : Karnaraka State Budget 2023: ಈ ಬಾರಿ ಸಿಎಂ ಬೊಮ್ಮಾಯಿ ಬಜೆಟ್ ನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ; ಇಲ್ಲಿದೆ ಸಂಪೂರ್ಣ ಮಾಹಿತಿ

ಇದನ್ನೂ ಓದಿ : Irrigation Project Budget:‌ ವಿವಿಧ ನೀರಾವರಿ ಯೋಜನೆಗಳ ಜಾರಿಗೆ 25 ಸಾವಿರ ಕೋಟಿ ರೂ ಅನುದಾನ

ಈ ಉಚಿತ ಉನ್ನತ ಶಿಕ್ಷಣದಿಂದ ರಾಜ್ಯದ 8 ಲಕ್ಷ ವಿದ್ಯಾರ್ಥಿಗಳು ಅನುಕೂಲ ಪಡೆಯಲಿದ್ದಾರೆ.ರಾಜ್ಯದಲ್ಲಿ ಈಗಾಗಲೇ 19 ಲಕ್ಷ ಶಾಲಾ-ಕಾಲೇಜು ವಿದ್ಯಾರ್ಥಿಗಳು ತಮ್ಮ ಶಿಕ್ಷಣಕ್ಕಾಗಿ ಸಾರ್ವಜನಿಕ ಬಸ್ಸುಗಳ ಸೇವೆಯನ್ನು ಅವಲಂಬಿಸಿದ್ದಾರೆ.ಹೀಗಾಗಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ವರ್ಷದಲ್ಲಿ ಸಾರಿಗೆ ನಿಗಮಗಳ ಮೂಲಕ 100 ಕೋಟಿ ರೂ. ವೆಚ್ಚದಲ್ಲಿ 1,000ಮಕ್ಕಳ ಬಸ್ಸು’ ಎಂಬ ಯೋಜನೆಯನ್ನು ಪ್ರಾರಂಭಿಸುತ್ತಿದ್ದು, ಇದರಿಂದ ಹೆಚ್ಚುವರಿಯಾಗಿ 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

Karnataka Budget 2023: Rs 18 crore for Shree Narayan Guru Residential School. grant

RELATED ARTICLES

Most Popular