ಶನಿವಾರ, ಜೂನ್ 14, 2025
HomeBUDGETKarnataka Budget 2025 LIVE : ದಾಖಲೆಯ ಬಜೆಟ್‌ ಮಂಡಿಸಿದ ಸಿದ್ದರಾಮಯ್ಯ

Karnataka Budget 2025 LIVE : ದಾಖಲೆಯ ಬಜೆಟ್‌ ಮಂಡಿಸಿದ ಸಿದ್ದರಾಮಯ್ಯ

ಕರ್ನಾಟಕದಲ್ಲಿ ಈ ಬಾರಿ ಬರೋಬ್ಬರಿ 4 ಲಕ್ಷ ರೂಪಾಯಿ ಗಾತ್ರದ ಬಜೆಟ್‌ ಮಂಡಿಸಲಾಗುತ್ತಿದೆ. ಕಳೆದ ಬಾರಿಗೆ ಹೋಲಿಕೆ ಮಾಡಿದ್ರೆ ಈ ಬಾರಿ 38,166 ಕೋಟಿ ರೂಪಾಯಿಗೆ ಹೆಚ್ಚಳವಾಗಿದೆ. ಬಜೆಟ್‌ ಆರಂಭದಲ್ಲಿಯೇ ಸಿದ್ದರಾಮಯ್ಯ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ.

- Advertisement -

Karnataka Budget 2025 LIVE : ಬೆಂಗಳೂರು : ಕರ್ನಾಟಕ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು 2025-2026ನೇ ಸಾಲಿನ ಕರ್ನಾಟಕ ಬಜೆಟ್‌ ಮಂಡಿಸಿದ್ದಾರೆ. ಸಿದ್ದರಾಮಯ್ಯ 16ನೇ ಬಾರಿಗೆ ಬಜೆಟ್‌ ಮಂಡಿಸುವ ಮೂಲಕ ಕರ್ನಾಟಕದ ಇತಿಹಾಸದಲ್ಲಿಯೇ ಅತೀ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಮುಖ್ಯಮಂತ್ರಿ ಅನ್ನೋ ಖ್ಯಾತಿಗೆ ಪಾತ್ರರಾಗಿದ್ದಾರೆ. ಸಿದ್ದರಾಮಯ್ಯ ರಾಜ್ಯದ ಜನತೆಗೆ ಏನೆಲ್ಲಾ ಕೊಡಗೆಗಳನ್ನು ನೀಡಿದ್ದಾರೆ ಅನ್ನೋ ಮಾಹಿತಿ ಇಲ್ಲಿದೆ.

ಕರ್ನಾಟಕದಲ್ಲಿ ಈ ಬಾರಿ ಬರೋಬ್ಬರಿ 4 ಲಕ್ಷ ರೂಪಾಯಿ ಗಾತ್ರದ ಬಜೆಟ್‌ ಮಂಡಿಸಲಾಗುತ್ತಿದೆ. ಕಳೆದ ಬಾರಿಗೆ ಹೋಲಿಕೆ ಮಾಡಿದ್ರೆ ಈ ಬಾರಿ 38,166 ಕೋಟಿ ರೂಪಾಯಿಗೆ ಹೆಚ್ಚಳವಾಗಿದೆ. ಬಜೆಟ್‌ ಆರಂಭದಲ್ಲಿಯೇ ಸಿದ್ದರಾಮಯ್ಯ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ.

ಮಂಗಳೂರಿನ ಮೀನುಗಾರಿಕಾ ಕಾಲೇಜಿನ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳ ಮಾಡಲಾಗುತ್ತದೆ. ಮೀನುಗಾರರಿಗೆ ಅನುಕೂಲವಾಗುವಂತೆ ರಸ್ತೆ ಸಂಪರ್ಕವನ್ನು ಹೆಚ್ಚಳ ಮಾಡಲಾಗುತ್ತದೆ. ನೋಂದಣಿಯಾಗಿರುವ ಯಾಂತ್ರಿಕೃತ ಬೋಟುಗಳಿಗೆ ಹೊಸ ಯಂತ್ರ ಖರೀದಿಗೆ ಸಹಾಯಧನ ನೀಡಲಾಗುತ್ತದೆ. ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಲ್ಟಿ ಲೆವಲ್‌ ಪಾರ್ಕಿಂಗ್‌ ವ್ಯವಸ್ಥೆ. ಆಳ ಸಮುದ್ರದ ಮೀನುಗಾರಿಕಾ ಬೋಟುಗಳ ಉದ್ದ ಮಿತಿಯನ್ನು ಸಡಿಲಿಸಲಾಗುವುದು.

Also Read : Dhootha sameer md : ಯಾರು ಈ ದೂತ ಸಮೀರ್‌ ಎಂಡಿ ? ಸೌಜನ್ಯಗೆ ಸಿಗುತ್ತಾ ನ್ಯಾಯ

ಅತಿಥಿ ಶಿಕ್ಷಕರು, ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡಿದ ಸಿಎಂ ಸಿದ್ದರಾಮಯ್ಯ ಬಿಸಿಯೂಟ ಕಾರ್ಯಕರ್ತೆಯರ ಗೌರವ ಧನದಲ್ಲಿ 1 ಸಾವಿರ ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಸರಕಾರಿ ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಕೆಲಸ ಮಾಡುತ್ತಿರುವವರಿಗೆ 2000 ರೂಪಾಯಿ ಗೌರವಧನವನ್ನು ಹೆಚ್ಚಳ ಮಾಡಲಾಗಿದೆ.

ಇನ್ನು ಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನಗಳ ಕಾಲ ಮೊಟ್ಟೆ ವಿತರಣೆ ಮಾಡಲಾಗುತ್ತದೆ. ಮೊಟ್ಟೆ ಹಾಗೂ ಬಾಳೆಹಣ್ಣು ವಿತರಣೆಗಾಗಿ 1500 ಕೋಟಿ ರೂಪಾಯಿ ಮೀಸಲಿಡಲಾಗಿದ್ದು, ಅಜೀಂ ಪ್ರೇಮ್‌ಜೀ ಅವರ ಸಹಕಾರದಲ್ಲಿ ಮೊಟ್ಟೆ ಹಾಗೂ ಬಾಳೆಹಣ್ಣು ಹಂಚಿಕೆ ಮಾಡಲಾಗುತ್ತದೆ ಎಂದಿದ್ದಾರೆ.

Also Read : ಕೋಟ : ಮೊಬೈಲ್‌ ನೀಡದಕ್ಕೆ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

Karnataka Budget 2025 LIVE : Siddaramaiah presents record budget in Kannada News –

ಕರ್ನಾಟಕ ಬಜೆಟ್‌ ನೇರಪ್ರಸಾರವನ್ನು ವೀಕ್ಷಿಸಿ

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular