ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ !
ಕರ್ನಾಟಕ ಬಜೆಟ್ 2026ರಲ್ಲಿ ಸಿಎಂ ಸಿದ್ದರಾಮಯ್ಯ ಐತಿಹಾಸಿಕ ಘೋಷಣೆ
ಬೆಂಗಳೂರು: Karnataka Budget 2026: ರಾಜ್ಯದ ಮಕ್ಕಳ ಭವಿಷ್ಯ ಮತ್ತು ಮಾನಸಿಕ ಆರೋಗ್ಯದ ದೃಷ್ಟಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 2026ನೇ ಸಾಲಿನ ಬಜೆಟ್‌ನಲ್ಲಿ ಅತ್ಯಂತ ಕ್ರಾಂತಿಕಾರಿ ನಿರ್ಧಾರವೊಂದನ್ನು ಪ್ರಕಟಿಸಿದ್ದಾರೆ. 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ (Social Media) ಬಳಕೆಯನ್ನು ರಾಜ್ಯಾದ್ಯಂತ ನಿಷೇಧಿಸುವುದಾಗಿ ಘೋಷಿಸುವ ಮೂಲಕ ಕರ್ನಾಟಕ ದೇಶದಲ್ಲೇ ಇಂತಹ ಕಾನೂನು ಜಾರಿಗೆ ತರುತ್ತಿರುವ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಬಜೆಟ್‌ನಲ್ಲಿ ಘೋಷಣೆಯಾದ ಪ್ರಮುಖ ಅಂಶಗಳು:
ಬಜೆಟ್ ಮಂಡನೆ ವೇಳೆ ಮಾತನಾಡಿದ ಸಿಎಂ, “ಇಂದಿನ ಡಿಜಿಟಲ್ ಯುಗದಲ್ಲಿ ಮಕ್ಕಳು ಸಾಮಾಜಿಕ ಜಾಲತಾಣಗಳ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಇದು ಅವರ ಓದು, ಸಂಸ್ಕೃತಿ ಮತ್ತು ಮಾನಸಿಕ ಬೆಳವಣಿಗೆಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಸೈಬರ್ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸಲು ನಮ್ಮ ಸರ್ಕಾರ ಈ ಕಠಿಣ ಕ್ರಮ ಕೈಗೊಳ್ಳುತ್ತಿದೆ” ಎಂದು ತಿಳಿಸಿದರು.
ಸೋಶಿಯಲ್ ಮೀಡಿಯಾ ಬ್ಯಾನ್ : ನಿಷೇಧದ ಸ್ವರೂಪ ಹೇಗಿರಲಿದೆ ?
ವಯಸ್ಸಿನ ಮಿತಿ: 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಟಿಕ್‌ಟಾಕ್‌ನಂತಹ ಯಾವುದೇ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಬಳಸುವಂತಿಲ್ಲ.
ತಾಂತ್ರಿಕ ನಿಯಂತ್ರಣ: ಸಾಮಾಜಿಕ ಜಾಲತಾಣ ಕಂಪನಿಗಳು ಕಡ್ಡಾಯವಾಗಿ ವಯಸ್ಸಿನ ದೃಢೀಕರಣ (Strict Age Verification) ಮಾಡುವುದನ್ನು ಸರ್ಕಾರ ಕಡ್ಡಾಯಗೊಳಿಸಲಿದೆ.
ಪೋಷಕರ ಜವಾಬ್ದಾರಿ: ಮಕ್ಕಳ ಡಿಜಿಟಲ್ ಚಟುವಟಿಕೆಗಳ ಮೇಲೆ ನಿಗಾ ಇಡಲು ಪೋಷಕರಿಗೆ ಜಾಗೃತಿ ಮೂಡಿಸುವ ವಿಶೇಷ ಕಾರ್ಯಕ್ರಮಗಳಿಗೂ ಬಜೆಟ್‌ನಲ್ಲಿ ಅನುದಾನ ಮೀಸಲಿಡಲಾಗಿದೆ.
Also Read: ಕರ್ನಾಟಕ ಬಜೆಟ್ 2026: ಗೃಹಲಕ್ಷ್ಮಿಯರಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಗಿಫ್ಟ್
ಸೋಶಿಯಲ್ ಮೀಡಿಯಾ ಬ್ಯಾನ್ ನಿರ್ಧಾರಕ್ಕೆ ಕಾರಣವೇನು?
ಇತ್ತೀಚಿನ ವರ್ಷಗಳಲ್ಲಿ ಮಕ್ಕಳಲ್ಲಿ ಹೆಚ್ಚುತ್ತಿರುವ ಆನ್‌ಲೈನ್ ಗೇಮಿಂಗ್ ಕ್ರೇಜ್, ಸೈಬರ್ ಬುಲ್ಲಿಂಗ್ ಮತ್ತು ಖಿನ್ನತೆಯ ಪ್ರಕರಣಗಳನ್ನು ಗಮನಿಸಿ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಆಸ್ಟ್ರೇಲಿಯಾದಂತಹ ಮುಂದುವರಿದ ದೇಶಗಳು ಈಗಾಗಲೇ ಈ ನಿಯಮವನ್ನು ಜಾರಿಗೆ ತಂದಿದ್ದು, ಅದನ್ನು ಮಾದರಿಯಾಗಿಟ್ಟುಕೊಂಡು ಕರ್ನಾಟಕದಲ್ಲಿಯೂ ಅನುಷ್ಠಾನಗೊಳಿಸಲಾಗುತ್ತಿದೆ.
karnataka budget 2026 social media ban for kids under 16



