Karnataka health Budget : ಕರ್ನಾಟಕ ರಾಜ್ಯ ಬಜೆಟ್‌ 2023 : ರಾಜ್ಯ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದ ಬೊಮ್ಮಾಯಿ ಬಜೆಟ್

ಬೆಂಗಳೂರು: ಬೆಂಗಳೂರು: ಕರ್ನಾಟಕ ಬಜೆಟ್​​(Karnataka Budget 2023) ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Bommai State Budget 2023) ಬಜೆಟ್ ಮಂಡನೆ ಮಾಡಿದ್ದಾರೆ. ಇದು ಈ ಸರಕಾರದ ಕೊನೆಯ ಬಜೆಟ್ ಆಗಿದ್ದು, ಬೊಮ್ಮಾಯಿ ಅವರು ಮಂಡನೆ ಮಾಡುತ್ತಿರುವ ಎರಡನೇ ಬಜೆಟ್ ಆಗಿದೆ. ಸಿಎಂ ಬೊಮ್ಮಾಯಿ ಬಜೆಟ್‌ನಲ್ಲಿ ರಾಜ್ಯದ ಆರೋಗ್ಯ ಕ್ಷೇತ್ರಕ್ಕೆ (Karnataka health Budget) ಹೆಚ್ಚಿನ ಒತ್ತು ನೀಡಿದ್ದಾರೆ. ಯಾಕೆಂದರೆ ರಾಜ್ಯದ ಜನತೆಯ ಮುಖ್ಯವಾಗಿ ಬೇಕಾಗುವಂತಹದ ಉತ್ತಮ ಆರೋಗ್ಯ ಎನ್ನುವ ದೃಷ್ಟಿಯಲ್ಲಿ ಬಜೆಟ್‌ನಲ್ಲಿ ಮಂಡಿಸಿದ್ದಾರೆ.

ಆರೋಗ್ಯ ದಾಖಲೆಗಳನ್ನು ಒಂದೆಡೆ ಸುರಕ್ಷಿತವಾಗಿ ಕ್ರೂಢೀಕರಿಸಲು, ರೋಗಿಗಳ ಸಮ್ಮತಿಯೊಂದಿಗೆ ವೈದ್ಯಕೀಯ ದಾಖಲಾತಿಗಳನ್ನು ಡಿಜಿಟಲೀಕರಣಗೊಳಿಸಿ, ಇದರಿಂದ ಮುಂದಿನ ಚಿಕಿತ್ಸೆಗೆ ಸಹಾಯವಾಗಲಿದೆ. ಜನಸಾಮಾನ್ಯರ ಮೆದುಳಿನ ಆರೋಗ್ಯ ಕಾಪಾಡಲು ಮತ್ತು ಅದರ ಬಗ್ಗೆ ಅರಿವು ಮೂಡಿಸಲು ನಿಮ್ಹಾನ್ಸ್ ಸಹಯೋಗದೊಂದಿಗೆ ಕರ್ನಾಟಕ ಮೆದುಳು ಆರೋಗ್ಯ ಯೋಜನೆಯನ್ನು 25 ಕೋಟಿ ರೂ ವೆಚ್ಚದಲ್ಲಿ ಇಡೀ ರಾಜ್ಯಕ್ಕೆ ವಿಸ್ತರಿಸಲಾಗುತ್ತದೆ ಎನ್ನಲಾಗುತ್ತದೆ. ಎಲ್ಲಾ ಜಿಲ್ಲೆಗಳಲ್ಲಿ ಹ್ಯಾಂಡ್​ ಹೋಲ್ಡ್ ಎಕ್ಸ್​​ರೇ ಯಂತ್ರಗಳ ಸಹಾಯದಿಂದ ಕ್ಷಯ ರೋಗಿಗಳ ಆರಂಭಿಕ ತಪಾಸಣೆ ಮತ್ತು ಚಿಕಿತ್ಸೆಗಾಗಿ ಸಮುದಾಯ ಆಧಾರಿತ ತಪಾಸಣೆ ಚಟುವಟಿಕೆ ನಡೆಸಲು 12.50 ಕೋಟಿ ರೂ. ಅನುದಾನದ ಬಗ್ಗೆ ಪ್ರಸ್ತಾಪಿಸಲಾಗಿದೆ.

“ಮನೆ ಮನೆಗೆ ಆರೋಗ್ಯ” ಎನ್ನುವ ಕಾರ್ಯಕ್ರಮದಡಿಯಲ್ಲಿ ರಾಜ್ಯದ ಗ್ರಾಮೀಣ ಜನತೆಗೆ 2023-24ನೇ ಸಾಲಿನಲ್ಲಿ ಎರಡು ಬಾರಿ ಹಳ್ಳಿಗಳಲ್ಲಿ ಆರೋಗ್ಯ ಶಿಬಿರಗಳನ್ನು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಆಯೋಜಿಸಿ, ಇದರಿಂದ ತೀವ್ರವಾದ ಕಾಯಿಲೆಗಳನ್ನು ಆರಂಭದಲ್ಲಿಯೇ ಪತ್ತೆಹಚ್ಚಿ ಜನರ ಆರೋಗ್ಯ ಕಾಪಾಡುವ ಗುರಿ ಹೊಂದಲಾಗಿದೆ. ಇದರೊಂದಿಗೆ ಈ ಯೋಜನೆಯಡಿ ದೀರ್ಘಕಾಲಿಕ ಕಾಯಿಲೆಗಳಿಂದ ಬಳಲುತ್ತಿರುವವರ ಮನೆ ಬಾಗಿಲಿಗೆ ಔಷಧಿಗಳನ್ನು ಕ್ರಮವಹಿಸಲಾಗುವುದು ಎಂದು ಬಜೆಟ್​​ನಲ್ಲಿ ಘೋಷಿಸಲಾಗಿದೆ.

ಇದನ್ನೂ ಓದಿ : Traffic control Plan : ಬೆಂಗಳೂರು ಟ್ರಾಫಿಕ್‌ ಕಂಟ್ರೋಲ್‌ಗೆ 300 ಕೋಟಿ ರೂ. ಅನುದಾನ

ಇದನ್ನೂ ಓದಿ : Loan facility to street vendors : ಸಿಎಂ ಬೊಮ್ಮಾಯಿ ರಾಜ್ಯ ಬಜೆಟ್‌ 2023 : 69,000 ಬೀದಿ ವ್ಯಾಪಾರಿಗಳಿಗೆ 70 ಕೋಟಿ ಸಾಲ ಮಂಜೂರು

ಇದನ್ನೂ ಓದಿ : Agriculture Budget 2023 : ಕೃಷಿಕರಿಗೆ ಬೆಲ್ಲದಂತ ಬಜೆಟ್: ಇದು ಬೊಮ್ಮಾಯಿ ಬೊಕ್ಕಸದ ಕೃಷಿ ಲೆಕ್ಕಾಚಾರ

ಸಾರ್ವಜನಿಕರಿಗೆ ದ್ವಿತೀಯ ಹಾಗೂ ತೃತೀಯ ಆರೈಕೆ ಸೇವೆಗಳನ್ನು ಒದಗಿಸಲು 2022-23ನೇ ಸಾಲಿನಲ್ಲಿ ಜಯದೇವ ಸಂಸ್ಥೆಯ ಅಡಿಯಲ್ಲಿ 263 ಕೋಟಿ ರೂ. ವೆಚ್ಚದಲ್ಲಿ, ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ 50 ಹಾಸಿಗೆ ಸಾಮರ್ಥ್ಯ ಹಾಗೂ ಹುಬ್ಬಳ್ಳಿಯಲ್ಲಿ 430 ಹಾಸಿಗೆ ಸಾಮರ್ಥ್ಯದ ಹೃದ್ರೋಗ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ ಎನ್ನಲಾಗಿದೆ. ಕಾರವಾರದಲ್ಲಿ ಪ್ರಗತಿಯಲ್ಲಿರುವ 450 ಹಾಸಿಗೆ ಸಾಮರ್ಥ್ಯದ ನಿರ್ಮಾಣವನ್ನು ಪೂರ್ಣಗೊಳಿಸಲಾಗುತ್ತದೆ. ಬೆಂಗಳೂರಿನ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ 500 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಹೀಗಾಗಿ ಈ ಬಾರಿ ರಾಜ್ಯ ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುವುದರೊಂದಿಗೆ ಜನತೆಯ ಆರೋಗ್ಯದ ಬಗ್ಗೆ ಕಾಳಜಿವಹಿಸಿದ್ದಾರೆ.

Karnataka Health Budget: Karnataka State Budget 2023: Bommai Budget which has given more importance to the state health sector

Comments are closed.