ಬೆಂಗಳೂರು: ಕರ್ನಾಟಕ ಬಜೆಟ್ಗೆ (Karnataka State Budget 2023) ಆರಂಭವಾಗಿದ್ದು, ಇಂದು 10.15ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavarj Bommai) ಬಜೆಟ್ ಮಂಡನೆ ಮಾಡಿದ್ದಾರೆ. ಇದು ಈ ಸರಕಾರದ ಕೊನೆಯ ಬಜೆಟ್ ಆಗಿದ್ದು, ಬೊಮ್ಮಾಯಿ ಅವರು ಮಂಡನೆ ಮಾಡುತ್ತಿರುವ ಎರಡನೇ ಬಜೆಟ್ ಆಗಿದೆ. ಹೀಗಾಗಿ ನಿರೀಕ್ಷೆಗಳು ಹೆಚ್ಚಾಗಿತ್ತು. ಬಜೆಟ್ ಮಂಡನೆಗೂ ಮುನ್ನ ಮುಖ್ಯಮಂತ್ರಿಗಳು ಬೆಂಗಳೂರಿನ ಆರ್.ಟಿ. ನಗರದಲ್ಲಿರುವ ಶ್ರೀಕಂಠೇಶ್ವರ ಆಂಜನೇಯ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ವಿಧಾನಸೌಧದಲ್ಲಿ ಬೆಳಗ್ಗೆ 9.45ಕ್ಕೆ ಮುಖ್ಯಮಂತ್ರಿಗಳು ಸಚಿವ ಸಂಪುಟ ಸಭೆ ನಡೆಸಿ, ಬಜೆಟ್ಗೆ ಅನುಮೋದನೆ ಪಡೆದಿದ್ದಾರೆ. ಕುವೆಂಪು ಕವನದ ಸಾಲು ಓದುತ್ತಾ ಸಿಎಂ ಬಜೆಟ್ ಭಾಷಣ ಶುರು ಮಾಡಿದ್ದಾರೆ. ಕುವೆಂಪು ಅವರು ನುಡಿದಂತೆ ಹೋಗುತಿದೆ ಹಳೆ ಕಾಲ, ಹೊಸ ಕಾಲ ಬರುತಲಿದೆ. ಬರುತಲಿದೆ ಹೊಸ ದೃಷ್ಟಿ, ಹಳೆಯ ಬಾಳು ಹೋಗುತಲಿದೆ, ಹೊಸ ಬಾಳು ಬರುತಿದೆ. ಹೊಸ ದೃಷ್ಟಿಕೋನದೊಂದಿಗೆ ಈ ಬಜೆಟ್ ಮಂಡಿಸುತ್ತಿದ್ದೇನೆ ಎಂದ ಬೊಮ್ಮಾಯಿ.ಕೃಷಿ ಮತ್ತು ಪೂರಕ ಚಟುವಟಿಕೆ ಶೂನ್ಯ ಬಡ್ಡಿದರದಲ್ಲಿ ರೈತರಿಗೆ 5 ಲಕ್ಷ ರೂಪಾಯಿ ಸಾಲ ಘೋಷಿಸಲಾಗಿದೆ.
ಈ ಹಿಂದೆ ಕೃಷಿ ಸಾಲ ಮೂರು ಲಕ್ಷ ಸಾಲ ಸೌಲಭ್ಯ ನೀಡಲಾಗುತ್ತಿತ್ತು, ಇದೀಗ ಅದು ಐದು ಲಕ್ಷ ಏರಿಕೆ ಆಗಿದೆ.ರೈತರ ಆದಾಯ ದ್ವಿಗುಣಗೊಳಿಸುವ ಗುರಿಯೊಂದಿಗೆ ಕೃಷಿಗೆ ಬೆಂಬಲ ನೀಡಲಾಗಿದೆ. ಬೊಮ್ಮಾಯಿ ಕರ್ನಾಟಕ ರಾಜ್ಯ ಬಜೆಟ್ ಮಂಡನೆಯ ಮೊದಲಿಗೆ ರೈತರಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದಾರೆ. ರಾಜ್ಯದ ಕೃಷಿಗೆ ಬೆಂಬಲ ಸೂಚಿಸುವ ಸಲುವಾಗಿ ಶೂನ್ಯ ಬಡ್ಡಿದರದಲ್ಲಿ ರೈತರಿಗೆ 5 ಲಕ್ಷ ರೂಪಾಯಿ ಸಾಲ ನೀಡುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಈ ಸಲದ ರಾಜ್ಯ ಬಜೆಟ್ ಬಂಪರ್ ಆಫರ್ ನೀಡಿದಂತೆ ಆಗಿದೆ. ತೊಗರಿ ಬೇಳೆ, ಅಡಿಕೆ ಬೆಳೆಗೆ ರೋಗ ಸಂಭವಿಸಿದಾಗ ಸರಕಾರ ರೈತರ ನೆರವಿಗೆ ಧಾವಿಸಿದೆ. ಉದ್ಯೋಗಾವಕಾಶ, ಅದಕ್ಕೆ ತಕ್ಕಂತೆ ಕೌಶಲಾಭಿವೃದ್ಧಿ ತರಬೇತಿ ನೀಡಿದ್ದೇವೆ.
ಪಿಎಂ ಕಿಸಾನ್ ಯೋಜನೆಯಡಿ ಕೇಂದ್ರ 10,930 ಕೋಟಿ ರೂ. ನೀಡಿದೆ. ಬಿತ್ತನೆಬೀಜ, ರಸಗೊಬ್ಬರ ಇತ್ಯಾದಿಗಳಿಗಾಗಿ 962 ಕೋಟಿ ರೂ. ನೀಡಲಾಗುತ್ತದೆ. ಕಿಸಾನ್ ಕಾರ್ಡ್ ಹೊಂದಿದ ರೈತರಿಗೆ ರೈತ ಸಿರಿ ಯೋಜನೆಯಡಿ ಸಾಲ ಸೌಲಭ್ಯ ನೀಡಲಾಗುತ್ತದೆ.ರಾಜ್ಯದ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಬೆಳೆ ಹಾನಿ ಪರಿಹಾರ ಹೆಚ್ಚಿಸಿ ದಾಖಲೆ ಅವಧಿಯಲ್ಲಿ ರೈತರ ಖಾತೆಗಳಿಗೆ ನೇರವಾಗಿ ಪರಿಹಾರ ಜಮೆ ಮಾಡಲಾಗಿದೆ. 14 ಲಕ್ಷಕ್ಕೂ ಹೆಚ್ಚು ರೈತರ ಖಾತೆಗಳಿಗೆ ಪರಿಹಾರದ ಹಣ ವರ್ಗಾಯಿಸಲಾಗಿದೆ. ಈ ಬಾರಿ ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ 5 ಲಕ್ಷ ರೂ. ಸಾಲದಲ್ಲಿ 30 ಲಕ್ಷಕ್ಕಿಂತ ಹೆಚ್ಚು ರೈತರಿಗೆ 25 ಸಾವಿರ ಕೋಟಿ ಸಾಲ ನೀಡಲಾಗುತ್ತದೆ. ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆಯಡಿ 2023-24ನೇ ಸಾಲಿನಿಂದ ಹೆಚ್ಚುವರಿಯಾಗಿ 10 ಸಾವಿರ ರೂ ಸಹಾಯಧನ ನೀಡಲಾಗುತ್ತದೆ.
Karnataka State Budget 2023 : Rs 5 lakh loan to farmers at zero interest rate: Bumper gift to farmers