ಭಾನುವಾರ, ಏಪ್ರಿಲ್ 27, 2025
HomeBUDGETKarnataka Budget 2023 : CRZ ಮಾನದಂಡ ಸರಳೀಕರಣ : ಪರಿಸರ ಸ್ನೇಹಿ ಪ್ರವಾಸೋದ್ಯಮಕ್ಕೆ ವಿಶೇಷ...

Karnataka Budget 2023 : CRZ ಮಾನದಂಡ ಸರಳೀಕರಣ : ಪರಿಸರ ಸ್ನೇಹಿ ಪ್ರವಾಸೋದ್ಯಮಕ್ಕೆ ವಿಶೇಷ ಯೋಜನೆ

- Advertisement -

ಬೆಂಗಳೂರು : ಕರಾವಳಿ ಭಾಗದ ಜನರ ಬಹು ವರ್ಷಗಳ ಬೇಡಿಕೆಯಾಗಿರುವ ಸಿಆರ್ ಝಡ್ ಮಾನದಂಡಗಳನ್ನು (Karnataka Budget 2023) ಸಡಿಲಗೊಳಿಸಲು ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ವಲಯ ನಿರ್ವಹಣೆ ಯೋಜನೆಯನ್ನು ಸಿಎಂ ಬಸವರಾಜ್ ಬೊಮ್ಮಾಯಿ (Special scheme for tourism) ಅವರು ಘೋಷಣೆ ಮಾಡಿದ್ದಾರೆ.

ಎರಡನೇ ಬಾರಿಗೆ ಬಜೆಟ್ ಮಂಡಿಸಿರುವ ಸಿಎಂ ಬೊಮ್ಮಾಯಿ ಸಿಆರ್ ಝಡ್ ಮಾನದಂಡಗಳಿಗೆ ಸಂಬಂಧಿಸಿದಂತೆ ವಿಶೇಷ ಯೋಜನೆ ಘೋಷಿಸಿದ್ದಾರೆ. ಈ ಯೋಜನೆಯ ಮೂಲಕ ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ದಿ ಮಾತ್ರವಲ್ಲದೇ, ಧಾರ್ಮಿಕ, ಸಾಹಸ ಮತ್ತು ಪರಿಸರ ಸ್ನೇಹಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ರೂಪುರೇಷೆಗಳನ್ನು ತಯಾರಿಸಲಾಗುವುದು ಎಂದಿದ್ದಾರೆ.

ಕರಾವಳಿ ಭಾಗದಲ್ಲಿನ ಪ್ರವಾಸೋದ್ಯಮವನ್ನು ಉತ್ತೇಜಿಸಲು ಸಾರ್ವಜನಿಕ, ಖಾಸಗಿ ಸಹಭಾಗಿತ್ವದೊಂದಿಗೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಮರೀನಾ ಅಭಿವೃದ್ದಿ ಪಡಿಸಲಾಗುವುದು. ಇನ್ನು ಕರಾವಳಿ ಪ್ರದೇಶದಲ್ಲಿನ ಜನರ ಸುಗಮ ಸಂಚಾರಕ್ಕಾಗಿ ಹಾಗೂ ವಾಣಿಜ್ಯ ವ್ಯವಹಾರಗಳನ್ನು ಉತ್ತಮಗೊಳಿಸಲು ಮಂಗಳೂರು – ಕಾರವಾರ- ಗೋವಾ- ಮುಂಬಯಿ ಜಲಸಾರಿಗೆಯನ್ನು (Waterways) ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ದಿ ಪಡಿಸಲಾಗುವುದು ಎಂದಿದ್ದಾರೆ.

ಇನ್ನು ಮಳಖೇಡ ಕೋಟೆ ಸಂರಕ್ಷಣೆಗೆ ೨೦ ಕೋಟಿ ರೂಪಾಯಿ ಅನುದಾನವನ್ನು ನೀಡಲಾಗುತ್ತಿದ್ದು, ಶಿರಸಿಯಲ್ಲಿ ರಾಜ್ಯದಲ್ಲಿ ಪ್ರಥಮ ಪರಿಸರ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ, ಹೊನ್ನವಾರದಲ್ಲಿ ಚೆನ್ನಭೈರಾದೇವಿ ಸ್ಮಾರಕ ಉದ್ಯಾನ ನಿರ್ಮಾಣ ಮಾಡಲಾಗುತ್ತದೆ. ಇನ್ನು ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯದ ಪ್ರಸಾದ್ ಯೋಜನೆಯ ಅಡಿಯಲ್ಲಿ ಮೈಸೂರು ನಗರದ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ದಿ ಹಾಗೂ ಸ್ವದೇಶ್ ದರ್ಶನ್ 2.0 ಯೋಜನೆಯ ಅಡಿಯಲ್ಲಿ ಹಂಪಿಯ ಸ್ಮಾರಕ ಅಭಿವೃದ್ದಿ ಮತ್ತು ಮೈಸೂರಿನ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಶಾಶ್ವತ ಸೌಲಭ್ಯಗಳನ್ನು ಅಭಿವೃದ್ದಿ ಯೋಜನೆಗಳನ್ನು ಮಂಜೂರು ಮಾಡಲಾಗಿದೆ.

ಇದನ್ನೂ ಓದಿ : ಕರ್ನಾಟಕ ರಾಜ್ಯ ಬಜೆಟ್‌ 2023 : ಶೂನ್ಯ ಬಡ್ಡಿದರದಲ್ಲಿ ರೈತರಿಗೆ 5 ಲಕ್ಷ ರೂಪಾಯಿ ಸಾಲ : ರೈತರಿಗೆ ಬಂಪರ್ ಗಿಫ್ಟ್‌

ಇದನ್ನೂ ಓದಿ : Bommai State Budget 2023 : ಬೊಮ್ಮಾಯಿ ರಾಜ್ಯ ಬಜೆಟ್‌ 2023 : ರಾಜ್ಯದಲ್ಲಿ ಹೆಚ್ಚುವರಿಯಾಗಿ 1,230 ಶಾಲಾ ಕೊಠಡಿ ನಿರ್ಮಾಣ

ಇದನ್ನೂ ಓದಿ : Karnataka Budget 2023 : ಉತ್ತರ ಕನ್ನಡದ ಜನರಿಗೆ ಬೊಮ್ಮಾಯಿ ಗಿಫ್ಟ್: ಕುಮಟಾದಲ್ಲಿ ಮಲ್ಟಿ ಸ್ಪೆಶಾಲಿಟಿ ಹಾಸ್ಪಿಟಲ್

ರಾಮನಗರದ ರಾಮದೇವರ ಬೆಟ್ಟದಲ್ಲಿ ಒಂದು ಭವ್ಯವಾದ ರಾಮಮಂದಿರವನ್ನು ನಿರ್ಮಿಸಲಾಗುವುದು. ಬೆಂಗಳೂರು ನಗರದ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಐತಿಹಾಸಿಕ ಕುರುಹುಗಳಿರುವ ತಾಣಗಳ ಪ್ರಸಾಸಿ ಸರ್ಕೀಟ್ ಆರಂಭಿಸಲಾಗುತ್ತದೆ. ಅಲ್ಲದೇ ಸಂತ ಸೇವಾಲಾಲ್ ಅವರ ಜನ್ಮಸ್ಥಳವಾದ ದಾವಣಗೆರೆ ಜಿಲ್ಲೆಯ ಸೂರಗೊಂಡನಕೊಪ್ಪವನ್ನು ಅಭಿವೃದ್ದಿಪಡಿಸಿ ಪ್ರವಾಸಿ ಸೌಲಭ್ಯವನ್ನು 5 ಕೊಟಿ ರೂ.ಗಳ ವೆಚ್ಚದಲ್ಲಿ ಕಲ್ಪಿಸಲಾಗುವುದು ಎಂದಿದ್ದಾರೆ.

Special scheme for tourism : Karnataka Budget 2023 : Simplification of CRZ Criteria : Special scheme for eco-friendly tourism

RELATED ARTICLES

Most Popular