ಬೆಂಗಳೂರು: (State budget 2023) ಪ್ರಸಕ್ತ ಸಾಲಿನಲ್ಲಿ ಸಿಎಂ ಬೊಮ್ಮಾಯಿ ಅವರು ಬಿಜೆಪಿ ಸರಕಾರದ ಕೊನೆಯ ಬಜೆಟ್ ಮಂಡನೆ ಮಾಡಿದ್ದು, ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ತ್ರೀ ಸಬಲೀಕರಣಕ್ಕೆ ಬಂಪರ್ ಕೊಡುಗೆಗಳನ್ನು ನೀಡಿದ್ದಾರೆ.
ಸದ್ಯದಲ್ಲೇ ಚುನಾವಣೆ ಇರುವುದರಿಂದ ಅದನ್ನು ಗಮನದಲ್ಲಿಟ್ಟುಕೊಂಡು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಎಲ್ಲರೂ ಮೆಚ್ಚುವಂತಹ ಬಜೆಟ್‌ನ್ನು ರಾಜ್ಯದ ಮುಂದೆ ಇಟ್ಟಿದ್ದಾರೆ. ಕಳೆದ ಹಣಕಾಸು ವರ್ಷದಲ್ಲಿ ರಾಜ್ಯ ಬಜೆಟ್ ಸುಮಾರು ೨.೬ ಕೋಟಿ ಗಾತ್ರದ ಬಜೆಟ್ ಮಂಡನೆ ಆಗಿದ್ದು, ಈ ಬಾರಿ ಬರೋಬ್ಬರಿ 3.9 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆ ಮಾಡಲಾಗಿದೆ. ಈ ಬಾರಿ ಬಜೆಟ್‌ನಲ್ಲಿ ಸರ್ವರಿಗೂ ಸಮಪಾಲು, ಸಮಬಾಳು ಎನ್ನುವ ಧ್ಯೆಯವನ್ನು ಇಟ್ಟುಕೊಂಡು ಮನ್ನಣೆ ನೀಡಲಾಗಿದೆ.
ಮುಂಬರುವ ಚುನಾವಣೆಯನ್ನು ಗುರಿಯಾಗಿ ಇಟ್ಟುಕೊಂಡು, ಬಜೆಟ್ ಬುನಾದಿ ಹಾಕಿರುವ ಬೊಮ್ಮಾಯಿ, ಜನ ಸಾಮಾನ್ಯರ ಮನಸ್ಸಿಗೆ ಮುದ ನೀಡುವುದಕ್ಕೆ ಮುಂದಾಗಿದ್ದಾರೆ. ಬಜೆಟ್ ಮಂಡನೆಯಲ್ಲಿ ರಾಜ್ಯದಲ್ಲಿ ಗೃಹಿಣಿ ಶಕ್ತಿ ಯೋಜನೆ ಘೋಷಣೆ ಮಾಡಿರುವ ಸಿಎಂ ಬೊಮ್ಮಾಯಿ, ಗೃಹಿಣಿಯರಿಗೆ ತಿಂಗಳಿಗೆ 500 ರೂ. ಸಹಾಯಧನ ಘೋಷಣೆ ಮಾಡಿದ್ದು, ಮೂವತ್ತು ಲಕ್ಷ ಮಹಿಳೆಯರಿಗೆ ಹಾಗೂ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ಹಾಗೂ ಒಂದು ಲಕ್ಷ ಮಹಿಳೆಯರಿಗೆ ಉಚಿತ ಕೌಶಲ್ಯ ತರಬೇತಿಯನ್ನು ಘೋಷಣೆ ಮಾಡಿದ್ದಾರೆ. ಸುಮಾರು 350 ಕೋಟಿ ರೂ ವೆಚ್ಚದಲ್ಲಿ ಉಚಿತ ಬಸ್ ಪಾಸ್ ನೀಡಲಾಗುವುದು ಎಂದ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದರು.
State budget 2023: ಮಹಿಳಾ ಕಾರ್ಮಿಕರಿಗೆ ತಲಾ 500 ರೂ ಸಹಾಯಧನ
ಇನ್ನೂ ರಾಜ್ಯದ ಎಲ್ಲಾ ಮಹಿಳಾ ಕಾರ್ಮಿಕರಿಗೆ ತಲಾ 500 ರೂ ಸಹಾಯಧನ ನೀಡಲಾಗುವುದು. ಈಗಾಗಲೇ ದೆಹಲಿ ಸೇರಿ ಕೆಲವು ರಾಜ್ಯಗಳಿದ್ದ ಮಹಿಳೆಯರು ಹಾಗೂ ವಿದ್ಯಾರ್ಥಿಗಳಿಗೆ ಇದ್ದ ಕೊಡುಗೆಗಳನ್ನು ರಾಜ್ಯದಲ್ಲಿಯೂ ಅಳವಡಿಕೆ ಮಾಡಲಾಗಿದೆ. ಎಲ್ಲ ಶಾಲಾ- ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ನೀಡುತ್ತಿರುವುದು ಪ್ರಮುಖ ಘೋಷಣೆಯಾಗಿದೆ.
ಇದನ್ನೂ ಓದಿ : Irrigation Project Budget: ವಿವಿಧ ನೀರಾವರಿ ಯೋಜನೆಗಳ ಜಾರಿಗೆ 25 ಸಾವಿರ ಕೋಟಿ ರೂ ಅನುದಾನ
ಇದನ್ನೂ ಓದಿ : Bommai budget 2023: ಉಡುಪಿ ಜಿಲ್ಲೆಯಲ್ಲಿ ಯಕ್ಷರಂಗಾಯಣ ಸ್ಥಾಪನೆ
ಇದನ್ನೂ ಓದಿ : Education budget 2023: ಶಿಕ್ಷಣ ಕ್ಷೇತ್ರಕ್ಕೆ ಬೊಮ್ಮಾಯಿ ಭರ್ಜರಿ ಗಿಫ್ಟ್: ಉಚಿತ ಶಿಕ್ಷಣ, ಉಚಿತ ಬಸ್‌ಪಾಸ್, ಸಹಾಯಧನ ಹೆಚ್ಚಳ
State budget 2023: Announcement of Rs 500 subsidy for housewives and women workers