State Budget 2023 : ರಾಜ್ಯ ಬಜೆಟ್ 2023: ಸಿಎಂ ಬೊಮ್ಮಾಯಿ ಬಜೆಟ್‌ನಲ್ಲಿ ಕರಾವಳಿ ನಿರೀಕ್ಷೆಗಳೇನು ?

ಬೆಂಗಳೂರು : ಕರ್ನಾಟಕ ರಾಜ್ಯದ ಹಣಕಾಸು ಸಚಿವರೂ ಕೂಡ ಆಗಿರುವ ಮುಖ್ಯಮಂತ್ರ ಬಸವರಾಜ್‌ ಬೊಮ್ಮಾಯಯಿ ಫೆಬ್ರವರಿ 17ರಂದು ಕರ್ನಾಟಕ ಬಜೆಟ್‌ 2023-24 (State Budget 2023) ಮಂಡನೆ ಮಾಡಲಿದ್ದಾರೆ. ಚುನಾವಣೆ ಹಿನ್ನಲೆಯಲ್ಲಿ ಬಜೆಟ್‌ನಲ್ಲಿ ಹಲವಾರು ಕೊಡುಗೆ ಬಗ್ಗೆ ನಿರೀಕ್ಷೆ ಮಾಡಲಾಗಿದೆ. ಅದರಲ್ಲಿ ನಮ್ಮ ಕರಾವಳಿ ಜನತೆ ಕೂಡ ಈ ಬಾರಿ ಬಜೆಟ್‌ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ.

ಫೆಬ್ರವರಿ 17ರ ಶುಕ್ರವಾರ ಬೆಳಿಗ್ಗೆ 10.15ಕ್ಕೆ ಸರಿಯಾಗಿ ಸಿಎಂ ಬಸವರಾಜ್‌ ಬೊಮ್ಮಾಯಿ ಬಜೆಟ್‌ ಮಂಡನೆ ಮಾಡಲಿದ್ದು, ಇದಕ್ಕೂಮೊದಲು ಬೆಳಗ್ಗೆ 9.45ಕ್ಕೆ ವಿಧಾನಸೌಧದಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ. ಬಜೆಟ್‌ ಮಂಡನೆಗೂ ಮೊದಲು ಮುಖ್ಯಮಂತ್ರಿಗಳು ಸಂಪ್ರದಾಯದಂತೆ ಸಚಿವ ಸಂಪುಟದ ಒಪ್ಪಿಗೆ ಪಡೆಯಲಿದ್ದಾರೆ. ಬಳಿಕ ವಿಧಾನಸಭೆ ಕಲಾಪ ಪ್ರಾರಂಭವಾಗಲಿದ್ದು, 10.15ಕ್ಕೆ ಬಜೆಟ್‌ ಮಂಡನೆ ಆರಂಭವಾಗಲಿದೆ. 2019ರಲ್ಲಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರದ ಕೊನೆಯ ಬಜೆಟ್‌ ಇದಾಗಿದೆ.

ಕುಚ್ಚಲಕ್ಕಿ ಭಾಗ್ಯ :
ಕರಾವಳಿಯವರಿಗೆ ಅನ್ನಭಾಗ್ಯ ಯೋಜನೆಯಡಿ ಕೋಟ ಶ್ರೀನಿವಾಸ ಪೂಜಾರಿಯವರು ಕುಚ್ಚಲಕ್ಕಿ ನೀಡುವುದಾಗಿ ಘೋಷಿಸಿದ್ದಾರೆ. ಆದರೆ ಅದು ಈವರೆಗೂ ಬಂದಿರುವುದಿಲ್ಲ. ಅದರ ಬಗ್ಗೆ ಕರಾವಳಿ ಜನತೆಯಲ್ಲಿ ಸಾಕಷ್ಟು ನಿರೀಕ್ಷೆಗಳಿದ್ದು, ಈ ಬಾರಿ ಆದರೂ ಕುಚ್ಚಲಕ್ಕಿ ಲಭ್ಯವಾಗಬಹುದು ಎನ್ನುವ ನಿರೀಕ್ಷೆ ಇದೆ.

ಕರಾವಳಿ ಕಡಲ್ಕೊರೆತಕ್ಕೆ ಶಾಶ್ವತ :
ಕರಾವಳಿಯಲ್ಲಿ ಮಳೆಗಾಲದಲ್ಲಿ ಕಡಲ್ಕೊರೆತ ಹೆಚ್ಚಿರುತ್ತದೆ. ಕಡಲತೀರದಲ್ಲಿ ವಾಸಿಸುವ ಜನರಿಗೆ ಸಾಕಷ್ಟು ತೊಂದರೆಗಳು ಆಗುತ್ತಿದ್ದು, ಇದಕ್ಕೊಂದು ಶಾಶ್ವತ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ವಿಶೇಷ ಪ್ಯಾಕೇಜ್‌ ಘೋಷಣೆಯೂ ಆಗಬೇಕಿದೆ ಎನ್ನುವುದು ಬಹುವರ್ಷಗಳ ಬೇಡಿಕೆ ಇದೆ. ಈ ಭಾರಿಯಾದರೂ ಇದಕ್ಕೊಂದು ಶಾಶ್ವತ ಪರಿಹಾರ ಸಿಗಬಹುದಾ ಎನ್ನುವ ನಿರೀಕ್ಷೆಯಲ್ಲಿ ಕರಾವಳಿ ಜನರಿದ್ದಾರೆ.

ಕೈಗಾರಿಕೆ ಕ್ಷೇತ್ರ :
ಶಿವಳ್ಳಿ ಕೈಗಾರಿಕೆ ಪ್ರದೇಶ, ಮೀಯಾರು, ಬೆಳಪು, ನಂದಿಕೂರು ಕೈಗಾರಿಕೆ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಅನುದಾನ ಘೋಷಣೆ ಆಗಬೇಕು. ಕೈಗಾರಿಕೆ ಪ್ರದೇಶಗಳನ್ನು ಸಂದಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದೆ. ರಸ್ತೆ ಅಭಿವೃದ್ಧಿ ಮತ್ತು ಅಲ್ಲಿನ ಮೂಲಸೌಕರ್ಯ ಅಭಿವೃದ್ಧಿಗೂ ಒತ್ತು ನೀಡಬೇಕು.ಈ ನಿಟ್ಟಿನಲ್ಲಿ ಕೈಗಾರಿಕೆಗೆ ಸಮಗ್ರ ಅಭಿವೃದ್ಧಿಗೆ ನಿರ್ಧಿಷ್ಟ ಅನುದಾನ ಮೀಸಲಿಡಬೇಕು ಎಂದು ಜನರು ರಾಜ್ಯ ಬಜೆಟ್ ಮೇಲಿನ ನಿರೀಕ್ಷೆಗಳನ್ನು ವ್ಯಕ್ತಪಡಿಸಿದ್ದಾರೆ.

ಸಕ್ಕರೆ ಕಾರ್ಖಾನೆಗೆ ಮರುಜೀವ :
ಹಲವು ವರ್ಷಗಳಿಂದ ಉಡುಪಿ ಜಿಲ್ಲೆಯಲ್ಲಿ ಒಂದಷ್ಟು ಸಕ್ಕರೆ ಕಾರ್ಖಾನೆಗಳು ಬಾಗಿಲು ಹಾಕಿರುತ್ತದೆ. ಬ್ರಹ್ಮಾವರದಲ್ಲಿ ಕೃಷಿ ಕಾಲೇಜು ಮಾಡಲು ಎಲ್ಲಾ ರೀತಿಯ ವ್ಯವಸ್ಥೆಯಿದೆ. ಮೂಲ ಅನುದಾನದೊಂದಿಗೆ ಕಾಲೇಜು ಘೋಷಣೆ ಆಗಬೇಕು. ಸಕ್ಕರೆ ಕಾರ್ಖಾನೆಗೆ ಮರುಜೀವ ನೀಡಬೇಕು. ಮಣಿಪಾಲ, ಪಡುಬಿದ್ರಿ ಮೊದಲಾದ ಕಡೆಗಳಲ್ಲಿ ಅಗ್ನಿಶಾಮಕ ಘಟಕ ಸಹಿತ ಬಜೆಟ್‌ ಮೇಲೆ ಹಲವು ನಿರೀಕ್ಷೆಗಳಿವೆ. ಈ ಕಾರ್ಖಾನೆಗಳಿಗೆ ಮರುಜೀವ ಕೊಡುವುದರಿಂದ ಕರಾವಳಿ ಪ್ರದೇಶದಲ್ಲಿರುವ ಎಷ್ಟೋ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಿದಂತೆ ಕೂಡ ಆಗುತ್ತದೆ.

ಮೀನುಗಾರಿಕೆಗೆ ಹೆಚ್ಚಿನ ಬೆಂಬಲ :
ಮೀನುಗಾರಿಕೆಗೆ ಅನುಕೂಲವಾಗುವಂತೆ ಹೆಚ್ಚಿನ ಅನುದಾನದ ನಿರೀಕ್ಷೆಯಿದೆ. ಡೀಸೆಲ್‌, ಸೀಮೆಎಣ್ಣೆ ಪೂರೈಕೆ ವ್ಯತ್ಯಯವಾಗದಂತೆ ನೋಡಿ ಕೊಳ್ಳುವ ಜೊತೆಗೆ ವಿವಿಧೆಡೆ ಜೆಟ್ಟಿ ನಿರ್ಮಾಣ, ಬಂದರುಗಳ ಹೂಳೆತ್ತುವುದು ಸಹಿತವಾಗಿ ಸಮಗ್ರ ಅಭಿವೃದ್ಧಿ ಮತ್ತು ಜಿಲ್ಲೆಗೊಂದು ಶೀತಲೀಕರಣ ಘಟಕಕ್ಕೆ ವಿಶೇಷ ಅನುದಾನ ಒದಗಿಸುವ ಬಗ್ಗೆಯೂ ನಿರೀಕ್ಷೆಗಳಿರುತ್ತದೆ. ಅದರಂತೆ ಮೀನುಗಾರಿಕೆ ಮಹಿಳೆಯರ ವ್ಯಾಪಾರಕ್ಕೆ ಪ್ರೋತ್ಸಾಹ ನೀಡುವಂತಹ ಅನುದಾನದ ಬಗ್ಗೆ ಕೂಡ ನಿರೀಕ್ಷೆಗಳಿರುತ್ತದೆ.

ಕರಾವಳಿ ಕೃಷಿ ನಿರೀಕ್ಷೆ :
ಕೃಷಿ, ತೋಟಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಸೇರಿದಂತೆ ಸಮಗ್ರತೆಯ ಆಧಾರದಲ್ಲಿ ಕರಾವಳಿಗೆ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಿ, ಅದರಡಿ ಉಡುಪಿ ಜಿಲ್ಲೆಗೆ ನಿರ್ದಿಷ್ಟ ಪ್ರಮಾಣದ ಅನುದಾನ ಮೀಸಲಿಡಬೇಕು ಎನ್ನುವ ಆಗ್ರಹ ಕೇಳಿಬರುತ್ತಿದೆ. ಅತಿಯಾದ ಮಳೆಯಿಂದ ಬೆಳೆನಾಶ, ಉಪ್ಪು ನೀರಿನ ಹಾವಳಿಯಿಂದ ಬೆಳೆನಾಶಕ್ಕೆ ವಿಶೇಷ ಪರಿಹಾರ ಸಿಗುತ್ತಾ ಎನ್ನುವ ನಿರೀಕ್ಷೆಗಳು ಇರುತ್ತದೆ.

ಉಡುಪಿ ನಗರದ ಯುಜಿಡಿ ಸಮಸ್ಯೆ ಮುಕ್ತಿಗಾಗಿ ಅನುದಾನ :
ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಸೂಕ್ತವಾದ ಯುಜಿಡಿ ವ್ಯವಸ್ಥೆಯಿಲ್ಲ. 330 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವನೆ ಸರಕಾರದ ಹಂತದಲ್ಲಿದೆ. ಈ ಯೋಜನೆಗೆ ಒಪ್ಪಿಗೆ ಸಿಕ್ಕರೆ ಉಡುಪಿ ನಗರದ ಯುಜಿಡಿ ಸಮಸ್ಯೆಗೆ ಮುಕ್ತಿ ಸಿಗಲಿದೆ ಮತ್ತು ನದಿ ಕಲುಷಿತವಾಗುವುದು ತಪ್ಪಲಿದೆ.

ಇದನ್ನೂ ಓದಿ : Karnataka budget-‌2023: ಸಿಎಂ ಬೊಮ್ಮಾಯಿ ಹೊಸ ಕೃಷಿ ನೀತಿ ಘೋಷಣೆ ಸಾಧ್ಯತೆ

ಇದನ್ನೂ ಓದಿ : JP Nadda : ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಉಡುಪಿಗೆ ಆಗಮನ

ಇದನ್ನೂ ಓದಿ : ಕಾಂಗ್ರೆಸ್, ಬಿಜೆಪಿ ಎರಡೂ ಪಕ್ಷಗಳಿಂದ ಆಫರ್ ಇದೆ : ಆದ್ರೆ ಫ್ಯಾನ್ಸ್ ಪಕ್ಷಕ್ಕೆ ನನ್ನ ಬೆಂಬಲ ಎಂದ ಕಿಚ್ಚ ಸುದೀಪ್

ಆಸ್ಪತ್ರೆ ಕಾಮಗಾರಿ :
ಸುಸಜ್ಜಿತ ಜಿಲ್ಲಾಸ್ಪತ್ರೆ ನಿರ್ಮಾಣ ಕಾಮಗಾರಿ ಕುಂಟುತ್ತಿದೆ. ಇದರ ಜೊತೆಗೆ ಸರಕಾರಿ ವೈದ್ಯಕೀಯ ಕಾಲೇಜು ಇಲ್ಲ. ಪಿಪಿಪಿ ಮಾದರಿ ಬದಲು ಪೂರ್ಣ ಪ್ರಮಾಣದ ಸರಕಾರ ಕಾಲೇಜು ಘೋಷಣೆ ಮಾಡಬೇಕು ಎಂಬ ಆಗ್ರಹವನ್ನು ಉಡುಪಿ ಜಿಲ್ಲೆಯ ಜನರು ಮಾಡಿದ್ದಾರೆ.

State Budget 2023: What are the Coastal Expectations in CM Bommai’s Budget?

Comments are closed.