Traffic control Plan : ಬೆಂಗಳೂರು ಟ್ರಾಫಿಕ್‌ ಕಂಟ್ರೋಲ್‌ಗೆ 300 ಕೋಟಿ ರೂ. ಅನುದಾನ

ಬೆಂಗಳೂರು: ಕರ್ನಾಟಕ ಬಜೆಟ್​​(Karnataka Budget 2023) ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Bommai State Budget 2023) ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಇದು ಈ ಸರಕಾರದ ಕೊನೆಯ ಬಜೆಟ್ ಆಗಿದ್ದು, ಬೊಮ್ಮಾಯಿ ಅವರು ಮಂಡನೆ ಮಾಡುತ್ತಿರುವ ಎರಡನೇ ಬಜೆಟ್ ಆಗಿದೆ. ಈ ಬಾರಿ ಸಿಎಂ ಬೊಮ್ಮಾಯಿ ರಾಜ್ಯ ಬಜೆಟ್‌ನಲ್ಲಿ ಎಲ್ಲಾ ಜಿಲ್ಲೆಗಳಿಗೂ ಹೆಚ್ಚಿನ ಪ್ರಾಶ್ಯತೆಯನ್ನು ನೀಡಿದ್ದಾರೆ. ಅದರಲ್ಲೂ ಬೆಂಳೂರಿನ ಟ್ರಾಫಿಕ್‌ ಕಂಟ್ರೋಲ್‌ಗೆ (Traffic control Plan) ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು, ಮೆಟ್ರೋ, ರಸ್ತೆ ಅಭಿವೃದ್ಧಿ, ಹಾಗೂ ಟ್ರಾಫಿಕ್‌ ಕಂಟ್ರೋಲ್‌ಗೆ (Bangalore Traffic Control) 300 ಕೋಟಿ ರೂ. ಅನುದಾನ ನೀಡಲಾಗಿದ್ದಾರೆ.

ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣಕ್ಕೆ 150 ಕೋಟಿ ರೂ. ವೆಚ್ಚದಲ್ಲಿ 75 ಜಂಕ್ಷನ್‌ ಅಭಿವೃದ್ಧಿಪಡಿಸಲಾಗುವುದು. ಕೃತಕ ಬುದ್ಧಿಮತ್ತೆ ಮೂಲಕ ಟ್ರಾಫಿಕ್ ಸಿಗ್ನಲ್‌ಗಳ ನಿರ್ವಹಣೆ ಮಾಡಲಾಗುತ್ತದೆ. ಸೀಮ್‌ಲೆಸ್ ಸಿಗ್ನಲಿಂಗ್ ಅಳವಡಿಸಿ ಸಂಚಾರ ದಟ್ಟಣೆಗೆ ಕ್ರಮ ಕೈಗೊಳ್ಳಳಾಗುತ್ತದೆ. ಕೆ.ಆರ್. ಪುರಂ ಟಿನ್‌ ಫ್ಯಾಕ್ಟರಿಯಿಂದ ಮೇಡಹಳ್ಳಿವರೆಗೆ 350 ಕೋಟಿ ರೂ. ವೆಚ್ಚದಲ್ಲಿ 5 ಕಿ.ಮೀ. ಎಲಿವೇಟೆಡ್‌ ರಸ್ತೆ ನಿರ್ಮಾಣ ಮಾಡಲಾಗುತ್ತದೆ. 1 ಸಾವಿರ ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ 120 ಕಿ.ಮೀ. ರಸ್ತೆಗೆ ವೈಟ್ ಟಾಪಿಂಗ್, ಬೆಂಗಳೂರಿನ 300 ಕಿ.ಮೀ. ಆರ್ಟಿರಿಯಲ್​​, ಸಬ್ ಆರ್ಟಿರಿಯಲ್ ರಸ್ತೆ ಅಭಿವೃದ್ಧಿಗೆ 450 ಕೋಟಿ ರೂ. ಅನುದಾನ ನೀಡಲಾಗುತ್ತದೆ. ಬೈಯಪ್ಪನಹಳ್ಳಿ ನಮ್ಮ ಮೆಟ್ರೋ ಸುತ್ತಮುತ್ತ ರಸ್ತೆ ಅಭಿವೃದ್ಧಿ, ಟ್ರಾಫಿಕ್‌ ಕಂಟ್ರೋಲ್‌ಗೆ 300 ಕೋಟಿ ರೂ. ಅನುದಾನ ನೀಡಲಾಗುತ್ತದೆ.

ಇದನ್ನೂ ಓದಿ : Loan facility to street vendors : ಸಿಎಂ ಬೊಮ್ಮಾಯಿ ರಾಜ್ಯ ಬಜೆಟ್‌ 2023 : 69,000 ಬೀದಿ ವ್ಯಾಪಾರಿಗಳಿಗೆ 70 ಕೋಟಿ ಸಾಲ ಮಂಜೂರು

ಇದನ್ನೂ ಓದಿ : Agriculture Budget 2023 : ಕೃಷಿಕರಿಗೆ ಬೆಲ್ಲದಂತ ಬಜೆಟ್: ಇದು ಬೊಮ್ಮಾಯಿ ಬೊಕ್ಕಸದ ಕೃಷಿ ಲೆಕ್ಕಾಚಾರ

ಇದನ್ನೂ ಓದಿ : ಬೊಮ್ಮಾಯಿ ರಾಜ್ಯ ಬಜೆಟ್‌ 2023 : ಎಸ್‌ಸಿ, ಎಸ್‌ಟಿ ಬಿಪಿಎಲ್‌ ಕಾರ್ಡ್‌ ಹೊಂದಿದವರಿಗೆ ಉಚಿತ ವಿದ್ಯುತ್

ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡಲು 13,139 ಕೋಟಿ ರೂ. ವೆಚ್ಚದಲ್ಲಿ 288 ಕಿ.ಮೀ ಉದ್ದದ ಸ್ಯಾಟಲೈಟ್ ಟೌನ್ ರಿಂಗ್​ರೋಡ್ ನಿರ್ಮಿಸಲು ಕೇಂದ್ರ ಸರಕಾರದ ಅನುಮೋದನೆ ದೊರೆತಿದೆ. ಈ‌ ಯೋಜನೆಗೆ ಭೂಸ್ವಾಧೀನದ ಶೇ 30 ವೆಚ್ಚವನ್ನು ರಾಜ್ಯ ಸರಕಾರದ ವತಿಯಿಂದ ಭರಿಸಲು ಒಪ್ಪಿಗೆ ನೀಡಲಾಗಿದೆ. ಬೆಂಗಳೂರಿನ ಸಾರಿಗೆ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರ ಕಂಡುಕೊಳ್ಳಲು ಉನ್ನತಾಧಿಕಾರವುಳ್ಳ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ ರಚನೆ ಮಾಡಲಾಗುವುದು ಎಂದು ಬಜೆಟ್​ನಲ್ಲಿ ಘೋಷಿಸಲಾಗಿದೆ. ಇದ್ದರಿಂದಾಗಿ ಬೆಂಗಳೂರಿನಲ್ಲಿ ಆಗುತ್ತಿದಂತಹ ಅಪಘಾತವನ್ನು ಕಡಿಮೆ ಆಗಬಹುದು ಎಂದು ನಿರೀಕ್ಷಿಸಲಾಗುತ್ತದೆ. ಹಾಗೆಯೇ ಬೆಂಗಳೂರು ಟ್ರಾಫಿಕ್‌ನಿಂದ ನರಳಾಡುತ್ತಿರುವ ಜನರಿಗೆ ನಿಟ್ಟುಸಿರು ಬಿಡುವಂತೆ ಆಗಬಹುದಾ ಎಂದು ಕಾದು ನೋಡಬೇಕಾಗಿದೆ.

Traffic control plan: 300 crores for Bangalore traffic control. grant

Comments are closed.