Union Budget 2023 updates: ಕೇಂದ್ರ ಬಜೆಟ್‌ 2023 : ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಮೀಸಲು

ನವದೆಹಲಿ: (Union Budget 2023 updates) ರಾಜ್ಯದ ಮಹತ್ವಾಕಾಂಕ್ಷಿಯ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ ನಲ್ಲಿ 5,300 ಕೋಟಿ ರೂಪಾಯಿ ಮೀಸಲಿಡಲಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತರಾಮನ್‌ ಅವರು ಕೇಂದ್ರದ ಬಜೆಟ್ ಮಂಡಿಸಿದ್ದು, ಬಜೆಟ್‌ ನಲ್ಲಿ ಕರ್ನಾಟಕಕ್ಕೆ ಭರ್ಜರಿ ಗಿಫ್ಟ್‌ ನೀಡಿದ್ದು, ಭದ್ಯಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿ ಮೀಸಲಿಡಲಾಗಿದೆ.

ಭದ್ರಾ ಮೇಲ್ದಂಡೆ ಯೋಜನೆ (Union Budget 2023 updates) ರಾಜ್ಯದ ಪ್ರಥಮ ರಾಷ್ಟ್ರೀಯ ನೀರಾವರಿ ಯೋಜನೆಯಾಗಿದ್ದು, ಭದ್ರಾ ಮೇಲ್ದಂಡೆ ಯೋಜನೆಯಡಿ ಒಟ್ಟು 29.90 ಟಿ.ಎಂ.ಸಿ. ನೀರಿನ ಬಳಕೆಯೊಂದಿಗೆ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳ 5,57,022 ಎಕರೆ (2,25,515 ಹೆಕ್ಟೇರ್) ಭೂಪ್ರದೇಶಕ್ಕೆ ನೀರಾವರಿ ಕಲ್ಪಿಸಲು ಮತ್ತು ಇದೇ ಜಿಲ್ಲೆಗಳ 367 ಸಣ್ಣ ನೀರಾವರಿ ಕೆರೆಗಳನ್ನು ಅವುಗಳ ಸಾಮಥ್ರ್ಯದ ಶೇ. 50 ರಷ್ಟನ್ನು ತುಂಬಿಸಲು ಉದ್ದೇಶಿಸಲಾಗಿದ್ದು, ಕಾಮಗಾರಿಗಳು ಇನ್ನೂ ಕೂಡ ಪ್ರಗತಿ ಹಂತದಲ್ಲಿವೆ.

ಹನಿ ನೀರಾವರಿ ,ಮೂಲಕ ಸೌಲಭ್ಯ ಕಲ್ಪಿಸುವ ಬೃಹತ್‌ ಗಾತ್ರದ ನೀರಾವರಿ ಯೋಜನೆ ಇದಾಗಿದ್ದು, ರಾಜ್ಯದ ಇತರ ನೀರಾವರಿ ಯೋಜನೆಗೆ ಮಾದರಿಯಾವಗಿದೆ. ಮಳೆಯಾಶ್ರಿತ ಕೃಷಿಯನ್ನೇ ನಂಬಿಕೊಂಡ ರೈತರ ಬದುಕು ದುರ್ಬರವಾದ ಬಳಿಕ ರೂಪುಗೊಂಡ ಯೋಜನೆಯೇ ಭದ್ರಾ ಮೇಲ್ದಂಡೆ. ಚಿಕ್ಕಮಗಳೂರು-ಶಿವಮೊಗ್ಗ ಜಿಲ್ಲೆಯಲ್ಲಿರುವ ಭದ್ರಾ ಜಲಾಶಯದಿಂದ ಮಧ್ಯಕರ್ನಾಟಕಕ್ಕೆ ನೀರುಣಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದ್ದು, 29.90 ಟಿ.ಎಂ.ಸಿ. ಅಡಿ ನೀರನ್ನು ಮೇಲ್ದಂಡೆಗೆ ಮೀಸಲಿಟ್ಟು ಯೋಜನೆ ರೂಪಿಸಲಾಗಿದೆ.

ಈ ಯೋಜನೆಗೆ ಒಟ್ಟು 7,012 ಎಕರೆ ಭೂಸ್ವಾಧೀನ ಮಾಡಿಕೊಳ್ಳಲಾಗಿದ್ದು, ಇದರಲ್ಲಿ ಮೂರು ಸಾವಿರದ ಐನೂರು ಎಕರೆ ಭೂಸ್ವಾಧೀನವಾಗಿದೆ. ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಆಗುತ್ತಿರುವ ವಿಳಂಬದಿಂದ ಯೋಜನೆ ಕುಂಟುತ್ತ ಸಾಗುತ್ತಿದ್ದು, ಅರಣ್ಯ ಭೂಮಿ, ಅಮೃತ್‌ ಮಹಲ್‌ ಕಾವಲು ಹಾಗೂ ರೈತರ ಜಮೀನು ವಶಕ್ಕೆ ಸಂಬಂಧಿಸಿದಂತೆ ಹಲವು ಪ್ರಕರಣಗಳು ಇನ್ನೂ ನ್ಯಾಯಾಲಯದಲ್ಲಿ ಬಾಕಿ ಉಳಿದಿವೆ. ಪರಿಸರ ಸೂಕ್ಷ್ಮ ಪ್ರದೇಶವಾಗಿರುವ ಕಾರಣಕ್ಕೆ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದ ಅನುಮತಿ ಪಡೆಯಲು ಎಂಟು ವರ್ಷ ಹಿಡಿದಿದ್ದು, ೨೦೧೬ ರಿಂದ ಕಾಮಗಾರಿ ಆರಂಭವಾದರೂ ಕೂಡ ಇನ್ನೂ ಪೂರ್ಣಗೊಂಡಿಲ್ಲ.

ಇದನ್ನೂ ಓದಿ : ಕರ್ನಾಟಕದ ಬರಪೀಡಿತ ಪ್ರದೇಶಗಳಿಗೆ 5300 ಕೋಟಿ ಆರ್ಥಿಕ ನೆರವು

ಇದನ್ನೂ ಓದಿ : ಮೀನುಗಾರರಿಗೆ ಗುಡ್‌ ನ್ಯೂಸ್‌ : ಮೀನುಗಾರಿಕೆ ಅಭಿವೃದ್ದಿಗೆ 6 ಸಾವಿರ ಕೋಟಿ ರೂ. ಘೋಷಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳ ಅಭಿವೃದ್ದಿಗೆ ಕೇಂದ್ರ ಸರಕಾರ ಆದ್ಯತೆ ನೀಡಿದ್ದು, ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಅನುದಾನ ನೀಡಿದೆ. ಇದರಿಂದ ಈ ಯೋಜನೆಗೆ ಮತ್ತಷ್ಟು ಬಲ ಬರಲಿದ್ದು, ಚಿತ್ರದುರ್ಗ ಸೇರಿದಂತೆ ಮಧ್ಯ ಕರ್ನಾಟಕದ ಹಲವಾರು ಮಳೆಯಾಧಾರಿತ ಕೃಷಿ ಜಿಲ್ಲೆಗಳಿಗೆ ವರದಾನವಾಗಲಿದೆ. ಇದರಿಂದ ಯೋಜನೆ ತ್ವರಿತವಾಗಿ ಹಾಗೂ ಪರಿಣಾಮಕಾರಿಯಾಗಿ ಪೂರ್ಣಗೊಳ್ಳಲು ಸಾಧ್ಯವಾಗಲಿದೆ. ಕಳೆದ ಎರಡು ದಶಕಗಳಲ್ಲಿ ಬರೋಬ್ಬರಿ 15 ಕ್ಕೂ ಅಧಿಕ ವರ್ಷಗಳ ಕಾಲ ಕರ್ನಾಟಕ ಬರಗಾಲವನ್ನು ಅನುಭವಿಸಿದೆ. ಇದರಿಂದಾಗಿ ಅಂತರ್ಜಲದ ಮಟ್ಟವು ಗಣನೀಯ ಮಟ್ಟದಲ್ಲಿ ಇಳಿಕೆಯಾಗುತ್ತಿದೆ. ಬರಗಾಲ ಪೀಡಿತ ಪ್ರದೇಶಗಳಿಗೆ ಅಗತ್ಯ ನೆರವು ನೀಡುವಂತೆ ರಾಜ್ಯ ಸರಕಾರ ಈ ಹಿಂದೆಯೇ ಕೇಂದ್ರ ಸರಕಾರಕ್ಕೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲೀಗ ಇದೀಗ ನೆರವು ಘೋಷಣೆ ಮಾಡಲಾಗಿದೆ.

Union Budget 2023 updates: Union Budget 2023: 5,300 Crore Reserve for Bhadra Upper Bank Project

Comments are closed.