Union budget 2023: ಕೇಂದ್ರ ಬಜೆಟ್‌ ನಲ್ಲಿ ಕರ್ನಾಟಕಕ್ಕೆ ಸಿಕ್ಕಿದ್ದೇನು ?

ನವದೆಹಲಿ: (Union budget 2023) ಇಂದು ಸಂಸತ್‌ ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಕೇಂದ್ರ ಬಜೆಟ್‌ ಮಂಡನೆ ಮಾಡಿದ್ದು, ಕರ್ನಾಟಕ ಕೇಂದ್ರದ ಬಜೆಟ್‌ ಮೇಲೆ ಹಲವು ನಿರೀಕ್ಷೆಗಳನ್ನು ಇಟ್ಟುಕೊಂಡಿತ್ತು. ಇದೀಗ ನಿರೀಕ್ಷೆಯಲ್ಲಿ ಕೆಲವು ಯೋಜನೆಗಳಿಗೆ ಅನುದಾನ ದೊರೆತಿದ್ದು, ಕರ್ನಾಟಕಕ್ಕೆ ಬಂಪರ್‌ ಆಫರ್‌ ದೊರೆತಿದೆ. ಮಧ್ಯ ಕರ್ನಾಟಕಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆ, ಕರಾವಳಿ ಮೀನುಗಾರಿಗೆ ಅಭಿವೃದ್ದಿ, ಬರ ಅನುದಾನ ಸೇರಿದಂತೆ ಹಲವು ಯೋಜನೆಗಳನ್ನು ಘೋಷಣೆ ಮಾಡಿದೆ.

ಕೇಂದ್ರ ಬಜೆಟ್‌ ನಲ್ಲಿ ಕರ್ನಾಟಕಕ್ಕೆ ಸಿಕ್ಕಿದ್ದೇನು ?

ಭದ್ರಾ ಮೇಲ್ದಂಡೆ ಯೋಜನೆ :

ಕರ್ನಾಟಕದ ಬರಪೀಡಿತ ಪ್ರದೇಶಗಳ ಅಭಿವೃದ್ದಿಗೆ ಕೇಂದ್ರ ಸರಕಾರ ಆದ್ಯತೆ ನೀಡಿದ್ದು, ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಅನುದಾನ ನೀಡಿದೆ. ಇದರಿಂದ ಈ ಯೋಜನೆಗೆ ಮತ್ತಷ್ಟು ಬಲ ಬರಲಿದ್ದು, ಚಿತ್ರದುರ್ಗ ಸೇರಿದಂತೆ ಮಧ್ಯ ಕರ್ನಾಟಕದ ಹಲವಾರು ಮಳೆಯಾಧಾರಿತ ಕೃಷಿ ಜಿಲ್ಲೆಗಳಿಗೆ ವರದಾನವಾಗಲಿದೆ. ಇದರಿಂದ ಯೋಜನೆ ತ್ವರಿತವಾಗಿ ಹಾಗೂ ಪರಿಣಾಮಕಾರಿಯಾಗಿ ಪೂರ್ಣಗೊಳ್ಳಲು ಸಾಧ್ಯವಾಗಲಿದೆ. ಹನಿ ನೀರಾವರಿ ಮೂಲಕ ಸೌಲಭ್ಯ ಕಲ್ಪಿಸುವ ಬೃಹತ್‌ ಗಾತ್ರದ ನೀರಾವರಿ ಯೋಜನೆ ಇದಾಗಿದ್ದು, ರಾಜ್ಯದ ಇತರ ನೀರಾವರಿ ಯೋಜನೆಗೆ ಮಾದರಿಯಾಗಿದೆ. ಮಳೆಯಾಶ್ರಿತ ಕೃಷಿಯನ್ನೇ ನಂಬಿಕೊಂಡ ರೈತರ ಬದುಕು ದುರ್ಬಲವಾದ ಬಳಿಕ ರೂಪುಗೊಂಡ ಯೋಜನೆಯೇ ಭದ್ರಾ ಮೇಲ್ದಂಡೆ. ಚಿಕ್ಕಮಗಳೂರು-ಶಿವಮೊಗ್ಗ ಜಿಲ್ಲೆಯಲ್ಲಿರುವ ಭದ್ರಾ ಜಲಾಶಯದಿಂದ ಮಧ್ಯಕರ್ನಾಟಕಕ್ಕೆ ನೀರುಣಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದ್ದು, 29.90 ಟಿ.ಎಂ.ಸಿ. ಅಡಿ ನೀರನ್ನು ಮೇಲ್ದಂಡೆಗೆ ಮೀಸಲಿಟ್ಟು ಯೋಜನೆ ರೂಪಿಸಲಾಗಿದೆ.

ಬರಪೀಡಿತ ಪ್ರದೇಶಗಳಿಗೆ 5,200 ಕೋಟಿ ಆರ್ಥಿಕ ನೆರವು :

ಕಳೆದ ಎರಡು ದಶಕಗಳಲ್ಲಿ ಬರೋಬ್ಬರಿ 15 ಕ್ಕೂ ಅಧಿಕ ವರ್ಷಗಳ ಕಾಲ ಕರ್ನಾಟಕ ಬರಗಾಲವನ್ನು ಅನುಭವಿಸಿದೆ. ಇದರಿಂದಾಗಿ ಅಂತರ್ಜಲದ ಮಟ್ಟವು ಗಣನೀಯ ಮಟ್ಟದಲ್ಲಿ ಇಳಿಕೆಯಾಗುತ್ತಿದೆ. ಬರಗಾಲ ಪೀಡಿತ ಪ್ರದೇಶಗಳಿಗೆ ಅಗತ್ಯ ನೆರವು ನೀಡುವಂತೆ ರಾಜ್ಯ ಸರಕಾರ ಈ ಹಿಂದೆಯೇ ಕೇಂದ್ರ ಸರಕಾರಕ್ಕೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಇದೀಗ ನೆರವು ಘೋಷಣೆ ಮಾಡಲಾಗಿದೆ. ಕರ್ನಾಟಕದ ಹಾಸನ, ಕೋಲಾರ, ದಾವಣಗೆರೆ, ಬೆಳಗಾವಿ, ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಯಾದಗಿರಿ, ಬೀದರ್, ಹಾವೇರಿ, ಧಾರವಾಡ, ಮಂಡ್ಯ, ಬಳ್ಳಾರಿ, ಗದಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿನ ಹಲವು ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಣೆ ಮಾಡಲಾಗಿತ್ತು. ಇದೀಗ ಈ ಪ್ರದೇಶಗಳಿಗೆ ಆರ್ಥಿಕ ನೆರವು ನೀಡಿರುವುದು ಜನರಿಗೆ ನಿಟ್ಟುಸಿರು ಬಿಡುವಂತಾಗಿದೆ.

ಮೀನುಗಾರಿಕೆ ಅಭಿವೃದ್ದಿಗೆ 6 ಸಾವಿರ ಕೋಟಿ ರೂ.:

ಈ ಬಾರಿಯ ಬಜೆಟ್ ನಲ್ಲಿ ಮೋದಿ ಸರಕಾರ ಮೀನುಗಾರಿಕಾ ಅಭಿವೃದ್ದಿಗೆ ಬರೋಬ್ಬರಿ 6 ಸಾವಿರ ಕೋಟಿ ರೂಪಾಯಿಗಳನ್ನು ಮೀಸಲಿರಿಸಿದೆ. ಇದರಿಂದಾಗಿ ಮೀನುಗಾರರ ಜೊತೆಗೆ ಮೀನುಗಾರಿಕೆಗೆ ಸಂಬಂಧಿಸಿದಂತೆ ಅಭಿವೃದ್ದಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ಬಜೆಟ್ ನಲ್ಲಿ ಮೀನುಗಾರರಿಗೆ ಹೆಚ್ಚಿನ ನೆರವು ಲಭಿಸಲಿದೆ ಅನ್ನೋ ಲೆಕ್ಕಾಚಾರವೂ ಇದ್ದು, ಅಂತೆಯೇ ಮೀನುಗಾರಿಕೆಗೆ ಕೇಂದ್ರ ಸರಕಾರ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ.

ಇದಲ್ಲದೇ ರಾಜ್ಯಗಳಿಗೆ ಐವತ್ತು ವರ್ಷಗಳ ಕಾಲ ಬಡ್ಡಿ ರಹಿತ ಸಾಲವನ್ನು ಮುಂದುವರೆಸುವುದಾಗಿ ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ. ರಾಜ್ಯದ ಬಂಡವಾಳ ವೆಚ್ಚದ ಮಿತಿಯನ್ನು 1.3 ಲಕ್ಷ ಕೋಟಿಗೆ ಹೆಚ್ಚಿಸಲಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.30 ರಷ್ಟು ಹೆಚ್ಚಳವಾಗಿದೆ. ಇನ್ನು ಕೃಷಿ ಕ್ರಮಗಳು ತಂತ್ರಜ್ಞಾನ ಮತ್ತು ಡಿಜಿಟಲ್ ಪ್ರಗತಿಯನ್ನು ಹತೋಟಿಗೆ ತರುತ್ತವೆ. ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆಗೆ ಒತ್ತು ನೀಡಿ ಕೃಷಿ ಸಾಲದ ಗುರಿಯನ್ನು 20 ಲಕ್ಷ ಕೋಟಿ ರೂ.ಗೆ ಹೆಚ್ಚಳ ಮಾಡಲಾಗುತ್ತಿದೆ.

ಇದನ್ನೂ ಓದಿ : Railway Department : ಮೋದಿ ಬಜೆಟ್‌ನಲ್ಲಿ ರೈಲ್ವೆ ಇಲಾಖೆಗೆ 2.4 ಕೋಟಿ ರೂ.ಮೀಸಲು

ಇದನ್ನೂ ಓದಿ : ಮೋದಿ ಬಜೆಟ್‌ನಲ್ಲಿ ಹಿರಿಯ ನಾಗರಿಕರ ಉಳಿತಾಯ ಮಿತಿ 15 ಲಕ್ಷದಿಂದ 30 ಲಕ್ಷಕ್ಕೆ ಹೆಚ್ಚಳ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮಿಲೆಟ್ ರಿಸರ್ಚ್ ಅನ್ನು ಶ್ರೇಷ್ಠತೆಯ ಕೇಂದ್ರವಾಗಿ ಬೆಂಬಲಿಸಲಾಗುತ್ತದೆ. ಕೃಷಿಗಾಗಿ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವು ಅಂತರ್ಗತ ರೈತ-ಕೇಂದ್ರಿತ ಪರಿಹಾರಗಳನ್ನು ಸಕ್ರಿಯಗೊಳಿಸುತ್ತದೆ ಮತ್ತು ಕೃಷಿ ಒಳಹರಿವು, ಮಾರುಕಟ್ಟೆ ಇಂಟೆಲ್, ಕೃಷಿ ಉದ್ಯಮಕ್ಕೆ ಬೆಂಬಲ, ಸ್ಟಾರ್ಟ್‌ಅಪ್‌ಗಳಿಗೆ ಸುಧಾರಿತ ಪ್ರವೇಶಕ್ಕೆ ಸಹಾಯ ಮಾಡುತ್ತದೆ. ಕೃಷಿ ವೇಗವರ್ಧಕ ನಿಧಿಯನ್ನು ಗ್ರಾಮೀಣ ಪ್ರದೇಶದ ಯುವ ಉದ್ಯಮಿಗಳಿಂದ ಕೃಷಿ ಸ್ಟಾರ್ಟಪ್‌ಗಳನ್ನು ಉತ್ತೇಜಿಸಲು ಸ್ಥಾಪಿಸಲಾಗುವುದು, ರೈತರ ಸವಾಲುಗಳಿಗೆ ನವೀನ ಮತ್ತು ಕೈಗೆಟುಕುವ ಪರಿಹಾರಗಳನ್ನು ತರುತ್ತದೆ, ಲಾಭದಾಯಕತೆಯನ್ನು ಹೆಚ್ಚಿಸುತ್ತದೆ ಮತ್ತು ಆಧುನಿಕ ತಂತ್ರಜ್ಞಾನವನ್ನು ತರುತ್ತದೆ ಎಂದು ತಿಳಿಸಿದ್ದಾರೆ.

Union budget 2023: What did Karnataka get in the Union budget?

Comments are closed.