ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ ಅರ್ಥಿಕ ನೆರವು ಪಡೆಯುತ್ತಿದ್ದ 1.78 ಲಕ್ಷ ಮಹಿಳೆಯರಿಗೆ ಇನ್ಮುಂದೆ ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ ಪ್ರತೀ ತಿಂಗಳು 2 ಸಾವಿರ ರೂಪಾಯಿ ಹಣ ಸಿಗೋದಿಲ್ಲ. ಅಷ್ಟಕ್ಕೂ ಮಹಿಳೆಯರಿಗೆ ಯಾವ ಕಾರಣಕ್ಕೆ ಹಣ ಸಿಗೋದಿಲ್ಲಾ ಅನ್ನೋ ಸಂಪೂರ್ಣ ಮಾಹಿತಿ ಇಲ್ಲಿದೆ.

ಕರ್ನಾಟಕ ಸರಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆಯು ಕೂಡ ಒಂದಾಗಿದೆ. ಈ ಯೋಜನೆಯ ಮೂಲಕ ಕುಟುಂಬದ ಯಜಮಾನಿಗೆ ಪ್ರತೀ ತಿಂಗಳು 2 ಸಾವಿರ ರೂಪಾಯಿ ಹಣವನ್ನು ನೀಡಲಾಗುತ್ತಿದೆ. ಮಹಿಳೆಯರ ಬ್ಯಾಂಕ್ ಖಾತೆಗೆ ಹಣವನ್ನು ನೇರ ವರ್ಗಾವಣೆ ಮಾಡಲಾಗುತ್ತಿದೆ.
ಆದರೆ ಕಳೆದ ಎರಡು ತಿಂಗಳಿನಿಂದಲೂ ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ ಹಣ ಜಮೆ ಆಗಿಲ್ಲ. ಮಹಿಳೆಯರು ಬ್ಯಾಂಕುಗಳಿಗೆ ಅಲೆದು ಅಲೆದು ಸುಸ್ತಾಗಿದ್ದಾರೆ. ಸದ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಎರಡು ತಿಂಗಳ ಗೃಹಲಕ್ಷ್ಮೀ ಹಣವನ್ನು ಒಟ್ಟಿಗೆ ಜಮೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಆದರೆ ಮುಂದಿನ ಕಂತಿನ ಹಣ ಎಷ್ಟು ಮಹಿಳೆಯರಿಗೆ ಜಮೆ ಆಗುತ್ತೆ ಅನ್ನೋದು ಅನುಮಾನ.
ಇದನ್ನೂ ಓದಿ : ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸಿಗಲಿದೆ 5 ಲಕ್ಷ ರೂ. ಯೋಜನೆ : ಅರ್ಜಿ ಸಲ್ಲಿಸುವುದು ಹೇಗೆ ?
ಕರ್ನಾಟಕ ಸರಕಾರದ ಇ ಆಡಳಿತ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜೊತೆಗೂಡಿ ಜಂಟಿಯಾಗಿ ಗೃಹಲಕ್ಷ್ಮೀ ಯೋಜನೆಯ ಅರ್ಹ ಹಾಗೂ ಅನರ್ಹ ಫಲಾನುಭವಿಗಳ ಪಟ್ಟಿಯನ್ನು ಸಿದ್ದ ಪಡಿಸುತ್ತಿದೆ. ಸದ್ಯ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಸುಮಾರು 1.78 ಲಕ್ಷ ಮಹಿಳೆಯರಿಗೆ ಇನ್ಮುಂದೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗೋದಿಲ್ಲ. ಇದಕ್ಕೆ ಕಾರಣವನ್ನೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ನೀಡಿದೆ.

ಆದಾಯ ತೆರಿಗೆ ಪಾವತಿದಾರರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗೋದಿಲ್ಲ ಎಂದು ತಿಳಿಸಲಾಗಿತ್ತು. ಆದರೂ ಕೂಡ ಲಕ್ಷಾಂತರ ಮಂದಿ ಆದಾಯ ತೆರಿಗೆ ಪಾವತಿದಾರರು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅನರ್ಹರ ಪಟ್ಟಿಯನ್ನು ಸಿದ್ದಪಡಿಸಿದ್ದು ಬರೋಬ್ಬರಿ 1.78ಲಕ್ಷ ಮಹಿಳೆಯರಿಗೆ ಇನ್ಮುಂದೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗೋದಿಲ್ಲ.
ಇದನ್ನೂ ಓದಿ : ಗೃಹಲಕ್ಷ್ಮೀ ಫಲಾನುಭವಿಗಳಿಗೆ ಭರ್ಜರಿ ಗುಡ್‌ನ್ಯೂಸ್
ಇನ್ನೊಂದೆಡೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯು ಆದಾಯ ತೆರಿಗೆಯ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದು, ಅನರ್ಹಗೊಂಡಿರುವ ಪಟ್ಟಿಯನ್ನು ದೃಢೀಕರಿಸುತ್ತಿದೆ. ಇ ಆಡಳಿತ ಇಲಾಖೆ ನೀಡಿರುವ ಮಾಹಿತಿ ಸರಿಯಾಗಿ ಇದ್ದಿದ್ದೇ ಆದ್ರೆ ಲಕ್ಷಾಂತರ ಮಹಿಳೆಯರಿಗೆ ಇನ್ಮುಂದೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗೋದಿಲ್ಲ. ನೀವೇನಾದ್ರೂ ಆದಾಯ ತೆರಿಗೆ ಪಾವತಿ ಮಾಡುವವರ ಪಟ್ಟಿಯಲ್ಲಿದ್ರೆ ನಿಮಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆ ಆಗೋದಿಲ್ಲ.
ಇದನ್ನೂ ಓದಿ : Ration Card e-KYC : ರೇಷನ್ ಕಾರ್ಡ್‌ಗೆ ಇಕೆವೈಸಿ ಕಡ್ಡಾಯ, ತಪ್ಪಿದ್ರೆ ರದ್ದಾಗುತ್ತೆ ಕಾರ್ಡ್
1.78 lakh women will no longer get Gruha Lakshmi Scheme money: Is your name in this list ?