Ujjwala Yojana : ಕೇಂದ್ರ ಸರಕಾರ ಗೃಹಿಣಿಯರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಇದೀಗ ಬಡವರು ಹಾಗೂ ಮಹಿಳೆಯರಿಗಾಗಿ ಮತ್ತೊಂದು ಯೋಜನೆಯನ್ನು ಜಾರಿಗೆ ತಂದಿದೆ. ಪ್ರಧಾನಮಂತ್ರಿ ಉಜ್ವಲಾ ಯೋಜನೆಯ (Pradhan Mantri Ujjwala Yojana) ಮೂಲಕ ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಎರಡು ಉಚಿತ ಗ್ಯಾಸ್ ಸಿಲಿಂಡರ್‌ಗಳನ್ನು ನೀಡಲು ಮುಂದಾಗಿದೆ.

ಕೇಂದ್ರ ಸರಕಾರ ಈಗಾಗಲೇ ಉಜ್ವಲ ಯೋಜನೆಯನ್ನು ಜಾರಿಗೆ ತಂದಿದೆ. ಕರ್ನಾಟಕದಲ್ಲಿ ಲಕ್ಷಾಂತರ ಮಹಿಳೆಯರು ಉಜ್ವಲ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ. 18 ವರ್ಷ ಮೇಲ್ಪಟ್ಟ ಮಹಿಳೆಯರು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆದರೆ ಅರ್ಜಿ ಸಲ್ಲಿಸುವ ಮಹಿಳೆಯರ ಮನೆಯಲ್ಲಿ ಒಂದಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಇರಬಾರದು.
Also Read : ಮಹಿಳೆಯರಿಗೆ ಗುಡ್‌ನ್ಯೂಸ್ : ಕೇಂದ್ರ ಸರಕಾರ ನೀಡಲಿದೆ 6 ಯೋಜನೆಯಡಿ ಸಾಲ
ಬಿಪಿಎಲ್ ಕುಟುಂಬದವರ ಜೊತೆಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಬಡ ಕುಟುಂಬದ ಮಹಿಳೆಯರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಧಾರ್ ಕಾರ್ಡ್, ವಿಳಾಸ ದೃಢೀಕರಣದ ಜೊತೆಗೆ ಬ್ಯಾಂಕ್ ಖಾತೆಯ ವಿವರಗಳನ್ನು ನೀಡುವ ಮೂಲಕ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಉಜ್ವಲಾ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಮಹಿಳಯರು ಎಲ್‌ಪಿಜಿ ವಿತರಣಾ ಕೇಂದ್ರ ಅಥವಾ ಆನ್‌ಲೈನ್ ಪೋರ್ಟಲ್ ಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮಹಿಳೆಯರ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ಈ ಯೋಜನೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ. ಸರಕಾರದ ಅಧಿಕೃತ ವೆಬ್‌ಸೈಟ್‌ನಿಂದ ಮಾಹಿತಿಯನ್ನು ಪಡೆಯಬಹುದಾಗಿದೆ.
ಇದನ್ನೂ ಓದಿ : 1.78 ಲಕ್ಷ ಮಹಿಳೆಯರಿಗೆ ಇನ್ಮುಂದೆ ಸಿಗಲ್ಲ ಗೃಹಲಕ್ಷ್ಮೀ ಹಣ : ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ?
2 free LPG gas cylinders per family: How to apply Pradhan Mantri Ujjwala Yojana
?