3.26 ಲಕ್ಷ ರೇಷನ್‌ ಕಾರ್ಡ್‌ ರದ್ದು ! ರಾತ್ರೋ ರಾತ್ರಿ ಜಾರಿಯಾಯ್ತು ಹೊಸ ರೂಲ್ಸ್‌

ಅನ್ನಭಾಗ್ಯ ಯೋಜನೆಯಡಿ (Anna Bhagya Yojana) ಅಕ್ಕಿ ಬದಲು ನಗದು ನೀಡುವ ವ್ಯವಸ್ಥೆ ಜಾರಿಗೆ ಬಂದ ಬೆನ್ನಲ್ಲೇ ಕರ್ನಾಟಕ ರಾಜ್ಯದಲ್ಲಿ 3.26 ಲಕ್ಷ ಪಡಿತರ ಚೀಟಿಗಳನ್ನು ರದ್ದುಪಡಿಸಿದೆ (Ration card Cancel) ಇದರಿಂದ ಬಾರೀ ಆಕ್ರೋಶ ವ್ಯಕ್ತವಾಗಿದೆ.

ಬೆಂಗಳೂರು : ಅನ್ನಭಾಗ್ಯ ಯೋಜನೆಯಡಿ (Anna Bhagya Yojana) ಅಕ್ಕಿ ಬದಲು ನಗದು ನೀಡುವ ವ್ಯವಸ್ಥೆ ಜಾರಿಗೆ ಬಂದ ಬೆನ್ನಲ್ಲೇ ರೇಷನ್‌ ಕಾರ್ಡ್‌ದಾರರಿಗೆ ಸರಕಾರ ಶಾಕ್‌ ಮೇಲೆ ಶಾಕ್‌ ಕೊಡುತ್ತಿದೆ. ಇದೀಗ ಕರ್ನಾಟಕ ರಾಜ್ಯದಲ್ಲಿ 3.26 ಲಕ್ಷ ಪಡಿತರ ಚೀಟಿಗಳನ್ನು ರದ್ದುಪಡಿಸಿದೆ (Ration card Cancel) ಇದರಿಂದ ಬಾರೀ ಆಕ್ರೋಶ ವ್ಯಕ್ತವಾಗಿದೆ.

ಕಳೆದ ಆರು ತಿಂಗಳಿನಿಂದ ಪಡಿತರ ಸಾಮಗ್ರಿಗಳನ್ನು ಪಡೆದುಕೊಳ್ಳದೇ ಇರುವ ಬಿಪಿಎಲ್‌ ಪಡಿತರ ಚೀಟಿಗಳನ್ನು ರಾಜ್ಯ ಸರಕಾರ ಸದ್ದಿಲ್ಲದೇ ರದ್ದುಪಡಿಸಿದೆ. ಕರ್ನಾಟಕದಲ್ಲಿ ಒಟ್ಟಿ 1,16,95,029 ಬಿಪಿಎಲ್ ಕಾರ್ಡ್ ದಾರರು ಇದ್ದಾರೆ. ಈ ಪೈಕಿ 3.26 ಲಕ್ಷ ಕಾರ್ಡ್‌ದಾರರಿಗೆ ಆರು ತಿಂಗಳಿಂದ ಪಡಿತರ ಸಾಮಗ್ರಿಗಳನ್ನು ಪಡೆದುಕೊಂಡಿಲ್ಲ.

Karnataka 326000 lakh ration cards canceled New rules came into force overnight
Image Credit to Original Source

ಕಳೆದ ಆರು ತಿಂಗಳಿನಿಂದ ಪಡಿತರ ಸಾಮಗ್ರಿಗಳನ್ನು ಪಡೆದುಕೊಳ್ಳದೇ ಇರುವವರ ರೇಷನ್‌ ಕಾರ್ಡ್‌ಗಳನ್ನು ರದ್ದುಪಡಿಸಲು ಕರ್ನಾಟಕ ಸರಕಾರ ಕ್ರಮಕೈಗೊಂಡಿದೆ. ಲಕ್ಷಾಂತರ ಕುಟುಂಬಗಳಿಗೆ ಪಡಿತರ ಜೊತೆಗೆ ಇತರ ಸೌಲಭ್ಯವೂ ಕಡಿತವಾಗುವ ಆತಂಕವಿದೆ. ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಪಡಿತರ ಸಾಮಗ್ರಿ ವಿತರಣೆ ಮಾಡುತ್ತಿದೆ.

ಇದನ್ನೂ ಓದಿ : ಉಚಿತ ಬಸ್‌ ಪ್ರಯಾಣ, ಗೃಹಲಕ್ಷ್ಮೀ ಯೋಜನೆ ಪುರುಷರಿಗೂ ವಿಸ್ತರಣೆ !

ಬಿಪಿಎಲ್‌ ಕಾರ್ಡ್‌ ಪಡೆದುಕೊಂಡಿದ್ದರೂ ಕೂಡ ಕಳೆದ ಆರು ತಿಂಗಳ ವರೆಗೆ ಲಕ್ಷಾಂತರ ಕುಟುಂಬಗಳು ಪಡಿತರ ಸಾಮಗ್ರಿ ಪಡೆದುಕೊಂಡಿಲ್ಲ. ಅನ್ನಭಾಗ್ಯ ಯೋಜನೆಯಡಿ ಪಡಿತರ ಕೇಂದ್ರಗಳಿಗೆ ರೇಷನ್‌ ಕಾರ್ಡ್‌ದಾರರು ಬಾರದ ಹಿನ್ನೆಲೆಯಲ್ಲಿ, ಇಂತಹ ಕುಟುಂಬಗಳಿಗೆ ಪಡಿತರ ಸಾಮಗ್ರಿ ಅಗತ್ಯವಿಲ್ಲ ಅನ್ನೋದನ್ನು ಮನಗಂಡು ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಕ್ರಮ ಕೈಗೊಂಡಿದೆ.

Karnataka 326000 lakh ration cards canceled New rules came into force overnight
image Credit to Original Source

3.26 ಲಕ್ಷ ಕಾರ್ಡ್‌ಗಳನ್ನು ರದ್ದು ಮಾಡುವುದರಿಂದ ಕರ್ನಾಟಕ ಸರಕಾರಕ್ಕೆ ಪ್ರತೀ ತಿಂಗಳು ಸುಮಾರು 5 ಕೋಟಿ ರೂಪಾಯಿ ಉಳಿತಾಯ ಆಗಲಿದೆ. ಇನ್ನು ಪಡಿತರ ಚೀಟಿ ಬಳಸದೇ ಇರುವವರಿಗೆ ಯಾವುದೇ ಮುನ್ಸೂಚನೆಯನ್ನೂ ನೀಡದೇ ಪಡಿತರ ಚೀಟಿ ರದ್ದುಪಡಿಸಲು ಸರಕಾರದ ಚಿಂತನೆ ನಡೆದಿದೆ.

ಈಗಾಗಲೇ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಕಳೆದ ಆರು ತಿಂಗಳಿನಿಂದ ಅನ್ನಭಾಗ್ಯ ಯೋಜನೆಯಡಿಯಲ್ಲಿ ಆಹಾರ ಸಾಮಗ್ರಿಗಳನ್ನು ಪಡೆದುಕೊಳ್ಳದೇ ಇರುವ ಕುಟುಂಬಗಳ ಮಾಹಿತಿಯನ್ನು ಈಗಾಗಲೇ ರಾಜ್ಯ ಸರಕಾರಕ್ಕೆ ಕಳುಹಿಸಿದೆ. ಇದರ ಬೆನ್ನಲ್ಲೇ ಇಲಾಖೆ ಕಾರ್ಡ್‌ ರದ್ದತಿಗೆ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದೆ. ಆದರೆ ಇಲಾಖೆಯ ಕ್ರಮದ ವಿರುದ್ದ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ : ಆಧಾರ್‌ ಕಾರ್ಡ್‌ ಹೊಸ ಫೀಚರ್ಸ್‌ : ಮನೆಯಲ್ಲಿಯೇ ಕುಳಿತು ನಿಮ್ಮ ಆಧಾರ್‌ ಕಾರ್ಡ್‌ ಅನ್‌ಲಾಕ್‌ ಮಾಡಿ

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ಹೊತ್ತಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಗೃಹಲಕ್ಷ್ಮೀ, ಶಕ್ತಿ ಯೋಜನೆ, ಗೃಹಜ್ಯೋತಿ ಯೋಜನೆ ಜಾರಿಗೆ ಬಂದಿದೆ. ಈ ಪೈಕಿ ಅನ್ನಭಾಗ್ಯ ಯೋಜನೆ ಕೂಡ ಒಂದು. ಈ ಯೋಜನೆಯ ಅಡಿಯಲ್ಲಿ ಪ್ರತೀ ಕುಟುಂಬದ ಪ್ರತೀ ಸದಸ್ಯರಿಗೆ ಪ್ರತೀ ತಿಂಗಳು 10 ಕೆಜಿ ಅಕ್ಕಿ ವಿತರಿಸುವುದಾಗಿ ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದೆ.

Karnataka 326000 lakh ration cards canceled New rules came into force overnight
Image Credit to Original Source

ಆದರೆ ಅಕ್ಕಿ ಸಿಗದ ಹಿನ್ನೆಲೆಯಲ್ಲಿ ಐದು ಕೆಜಿ ಅಕ್ಕಿಯ ಜೊತೆಗೆ ಐದು ಕೆಜಿ ಅಕ್ಕಿಯ ಹಣವನ್ನು ಅನ್ನಭಾಗ್ಯ ಯೋಜನೆಯ ಫಲಾನುವಿಗಳ ಖಾತೆಗೆ ಸರಕಾರ ಜಮೆ ಮಾಡುತ್ತಿದೆ. ಸರಕಾರದ ನಿಯಮದ ಪ್ರಕಾರ ರೇಷನ್‌ ಕಾರ್ಡ್‌ ಹೊಂದಿರುವ ಕುಟುಂಬಗಳು ಕನಿಷ್ಠ ಮೂರು ತಿಂಗಳಿಗೆ ಒಮ್ಮೆಯಾದ್ರೂ ನ್ಯಾಯಬೆಲೆ ಅಂಗಡಿಗಳಿಂದ ಪಡಿತರ ಸಾಮಗ್ರಿಗಳನ್ನು ಪಡೆಯಬೇಕು.

ಇದನ್ನೂ ಓದಿ : ಮಂಗಳಮುಖಿಯರಿಗೆ ಗೃಹಲಕ್ಷ್ಮೀ ಯೋಜನೆ : ರಾಜ್ಯ ಸರಕಾರದಿಂದ ಮಹತ್ವದ ನಿರ್ಧಾರ

ಒಂದೊಮ್ಮೆ ಮೂರು ತಿಂಗಳಿಗೊಮ್ಮೆ ಪಡಿತರ ಸಾಮಗ್ರಿ ಪಡೆಯದೇ ಇದ್ದರೆ, ಅಂತಹ ಕಾರ್ಡುಗಳನ್ನು ರದ್ದುಪಡಿಸಲಾಗುತ್ತದೆ. ರಾಜ್ಯ ಸರಕಾರ ಅಕ್ಕಿ ಬದಲು ನಗದು ನೀಡುತ್ತಿದೆ. ಆದರೆ ರಾಜ್ಯದಲ್ಲಿ ಅಂದಾಜು 8 ಲಕ್ಷ ಬಿಪಿಎಲ್ ಕಾರ್ಡ್ ಕುಟುಂಬಗಳು ನೇರ ನಗದು ವ್ಯವಸ್ಥೆಯಿಂದ ವಂಚಿತವಾಗಿವೆ.

3.26 lakh ration cards canceled New rules came into force overnight in Karnataka

Comments are closed.