ಬೆಂಗಳೂರು : ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಈ ಬಾರಿ ಕುಸಿತ (Arecanut Price Decrease) ಕಂಡಿದೆ. ಇತ್ತೀಚಿಗಷ್ಟೇ ಅಡಿಕೆಧಾರಣೆಯಲ್ಲಿ ಏರಿಕೆ ಕಂಡಿದ್ದು, ಏಕಾಏಕಿ ಬೆಲೆಯಲ್ಲಿ ಬಾರಿ ಇಳಿಕೆ ಕಂಡಿದೆ. ಈ ಸಲ ಅಡಿಕೆ ಬೆಳೆಯಲ್ಲಿ ಉತ್ತಮ ಇಳುವರಿ ಆಗಿದ್ದು, ಬೆಲೆ ಇಳಿಕೆಯಿಂದ ಬೆಳೆಗಾರರು ಬೇಸರಗೊಂಡಿದ್ದಾರೆ. ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ (Arecanut) ಧಾರಣೆ ಮುಂದಿನ ದಿನಗಳಲ್ಲಿ ಉತ್ತಮ ಸ್ಥಿತಿಯನ್ನು ಪಡೆದುಕೊಳ್ಳಬಹುದು ಎಂಬ ನೀರಿಕ್ಷೆಯಲ್ಲಿ ಇದ್ದಾರೆ. ವರದಿಗಳ ಪ್ರಕಾರ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಎಲ್ಲಾ ರಾಜ್ಯಕ್ಕಿಂತ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿಅಡಿಕೆ ಧಾರಣೆ 52,899 ರೂ. ದರದಲ್ಲಿ ವಹಿವಾಟು ನಡೆಸುತ್ತಿದ್ದು, ಸ್ಥಿರತೆಯನ್ನು ಕಾಯ್ದುಕೊಂಡಿದೆ. ಇನ್ನು ಮಂಗಳೂರಿನ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ರೂ. 25,876 ರಿಂದ 31,000 ರೂ. ಬೆಲೆಯಲ್ಲಿ ಮಾರಾಟವಾಗುತ್ತಿದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಬೆಲೆ ಎಷ್ಟಿದೆ ಎನ್ನುವುದನ್ನು ಈ ಕೆಳಗೆ ತಿಳಿಸಲಾಗಿದೆ.
ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆಧಾರಣೆ ವಿವರ :
- ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ರಾಶಿ ಅಡಿಕೆ 41,119 ರೂ.
- ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ರಾಶಿ ಅಡಿಕೆ 46,799 ರೂ.
- ದಾವಣಗೆರೆ ಜಿಲ್ಲೆಯಲ್ಲಿ ರಾಶಿ ಅಡಿಕೆ 45,269 ರೂ.
- ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ರಾಶಿ ಅಡಿಕೆ 46,099 ರೂ.
- ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ರಾಶಿ ಅಡಿಕೆ 46,609 ರೂ.
- ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಾಶಿ ಅಡಿಕೆ 46,799 ರೂ.
- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ರಾಶಿ ಅಡಿಕೆ 52,899 ರೂ.
- ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ಹಳೆ ಅಡಿಕೆಗೆ 48,000 – 54,500 ರೂ.
- ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ಕೋಕ ಅಡಿಕೆಗೆ 12,500 – 25,000 ರೂ.
- ದಕ್ಷಿಣ ಕನ್ನಡದ ಮಂಗಳೂರಿನಲ್ಲಿ ಹೊಸ ಅಡಿಕೆಗೆ 25,876 -31,000 ರೂ.
- ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಕೋಕ ಅಡಿಕೆಗೆ 11,000 – 26,000 ರೂ.
- ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಹೊಸ ಅಡಿಕೆಗೆ 32,000 – 38,000 ರೂ.
- ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ರಾಶಿ ಅಡಿಕೆ 45,899 ರೂ.
- ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ರಾಶಿ ಅಡಿಕೆ 46,419 ರೂ.
- ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ರಾಶಿ ಅಡಿಕೆ 46,679 ರೂ.
- ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ರಾಶಿ ಅಡಿಕೆ 45,900 ರೂ.
- ಶಿವಮೊಗ್ಗ ಜಿಲ್ಲೆಯಲ್ಲಿ ರಾಶಿ ಅಡಿಕೆ 46,299 ರೂ.
- ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ರಾಶಿ ಅಡಿಕೆ 46,899 ರೂ.
- ತುಮಕೂರು ಜಿಲ್ಲೆಯಲ್ಲಿ ರಾಶಿ ಅಡಿಕೆ 43,400 ರೂ.
ಇದನ್ನೂ ಓದಿ : ಅಡಿಕೆ ಬೆಳೆಗಾರರಿಗೆ ಕಹಿ ಸುದ್ಧಿ : ಮಾರುಕಟ್ಟೆಯಲ್ಲಿ ಮತ್ತೆ ಇಳಿಕೆ ಕಂಡ ಅಡಿಕೆ ಬೆಲೆ
ಇದನ್ನೂ ಓದಿ : ಮಾರುಕಟ್ಟೆಯಲ್ಲಿ ಇಳಿಕೆ ಕಂಡ ಅಡಿಕೆ ಬೆಲೆ : ಮಕರ ಸಂಕ್ರಾಂತಿಯಂದು ಬೆಳೆಗಾರರಿಗೆ ಕಹಿ ಸುದ್ದಿ
ಇದನ್ನೂ ಓದಿ : Arecanut state market price: ಅಡಿಕೆ ಧಾರಣೆಯಲ್ಲಿ ಏರಿಳಿತ: ಮಂಗಳೂರಿನಲ್ಲಿ ಇಂದಿನ ಅಡಿಕೆ ಬೆಲೆ ಎಷ್ಟು?
Arecanut Price Decrease, growers in fear