Arecanut Price Increase : ಮತ್ತೆ ಮಾರುಕಟ್ಟೆಯಲ್ಲಿ ಏರಿಕೆ ಕಂಡ ಅಡಿಕೆ ಬೆಲೆ : ಎಲ್ಲೆಲ್ಲಿ ಎಷ್ಟೆಷ್ಟು ಏರಿಕೆ ?

ಬೆಂಗಳೂರು: ಕರ್ನಾಟಕ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆಯಲ್ಲಿ ಮತ್ತೆ ಏರಿಕೆ (Arecanut Price Increase) ಕಂಡಿದೆ. ಕಳೆದ ಕೆಲವು ದಿನಗಳಿಂದ ಏರಿಳಿತಗೊಂಡಿದ್ದ ಅಡಿಕೆ ಧಾರಣೆಯಲ್ಲಿ ಇಂದು (ಜನವರಿ 9) ಸೋಮವಾರ ಮಾರುಕಟ್ಟೆಯಲ್ಲಿ ಚೇತರಿಕೆ ಕಂಡಿದ್ದು, ರೈತರಿಗೆ ಸಂತಸ ಉಂಟು ಮಾಡಿದೆ. ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ. ವರದಿಗಳ ಪ್ರಕಾರ ಅಡಿಕೆ ಧಾರಣೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ಬೇರೆ ಬೇರೆ ಆಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿಅಡಿಕೆ ಧಾರಣೆ 52,515 ರೂ. ದರದಲ್ಲಿ ವಹಿವಾಟು ನಡೆಸುತ್ತಿದ್ದು, ಇದು ಬೇರೆ ಎಲ್ಲಾ ಜಿಲ್ಲೆಕ್ಕಿಂತ ಹೆಚ್ಚಿನ ಬೆಲೆಯಲ್ಲಿ ಮಾರಾಟವಾಗುವ ಪ್ರದೇಶವಾಗಿದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿಇಂದಿನ ಅಡಿಕೆ ಬೆಲೆ ಎಷ್ಟಿದೆ ಎನ್ನುವುದನ್ನು ಈ ಕೆಳಗೆ ತಿಳಿಸಲಾಗಿದೆ.

  • ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ರಾಶಿ ಅಡಿಕೆ 41,119 ರೂ.
  • ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ರಾಶಿ ಅಡಿಕೆ 47,100 ರೂ.
  • ದಾವಣಗೆರೆ ಜಿಲ್ಲೆಯಲ್ಲಿ ರಾಶಿ ಅಡಿಕೆ 45,269 ರೂ.
  • ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ರಾಶಿ ಅಡಿಕೆ 46,099 ರೂ.
  • ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ರಾಶಿ ಅಡಿಕೆ 46,199 ರೂ.
  • ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಾಶಿ ಅಡಿಕೆ 46,399 ರೂ.
  • ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ರಾಶಿ ಅಡಿಕೆ 52,515 ರೂ.
  • ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ಹಳೆ ಅಡಿಕೆಗೆ 48,000 – 54,500 ರೂ.
  • ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ಕೋಕ 12,500 – 25,000 ರೂ.
  • ದಕ್ಷಿಣ ಕನ್ನಡದ ಮಂಗಳೂರಿನಲ್ಲಿ ಹೊಸ ಅಡಿಕೆಗೆ 25,876 -31,000 ರೂ.
  • ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಕೋಕ 11,000 – 26,000 ರೂ.
  • ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಹೊಸ ಅಡಿಕೆಗೆ 32,000 – 38,000 ರೂ.
  • ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ರಾಶಿ ಅಡಿಕೆ 46,809 ರೂ.
  • ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ರಾಶಿ ಅಡಿಕೆ 46,419 ರೂ.
  • ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ರಾಶಿ ಅಡಿಕೆ 46,579 ರೂ.
  • ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ರಾಶಿ ಅಡಿಕೆ 45,900 ರೂ.
  • ಶಿವಮೊಗ್ಗ ಜಿಲ್ಲೆಯಲ್ಲಿ ರಾಶಿ ಅಡಿಕೆ 46,899 ರೂ.
  • ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ರಾಶಿ ಅಡಿಕೆ 46,899 ರೂ.
  • ತುಮಕೂರು ಜಿಲ್ಲೆಯಲ್ಲಿ ರಾಶಿ ಅಡಿಕೆ 43,400 ರೂ.

ಇದನ್ನೂ ಓದಿ : Arecanut today price : ಅಡಿಕೆ ಬೆಲೆಯಲ್ಲಿ ಭರ್ಜರಿ ಏರಿಕೆ : ಮಾರುಕಟ್ಟೆಯಲ್ಲಿ ಇಂದಿನ ಬೆಲೆ ಎಷ್ಟು ಗೊತ್ತಾ ?

ಇದನ್ನೂ ಓದಿ : Antyodaya and BPL card holders : ನೀವು ಅಂತ್ಯೋದಯ ಮತ್ತು ಬಿಪಿಎಲ್‌ ಕಾರ್ಡ್‌ದಾರರೇ ? ಇಲ್ಲಿದೆ ಮಹತ್ವದ ಮಾಹಿತಿ

ಇದನ್ನೂ ಓದಿ : RBI Safest Bank List : ಗ್ರಾಹಕರೇ ಎಚ್ಚರ : ಈ ಮೂರು ಬ್ಯಾಂಕ್‌ಗಳಲ್ಲಿ ಹಣ ಇಟ್ಟರೆ ಮಾತ್ರ ಸೇಫ್‌

Arecanut Price Increase The price of arecanut increased again in the market: how much increase everywhere?

Comments are closed.