ಮಾರುಕಟ್ಟೆಯಲ್ಲಿ ಇಳಿಕೆ ಕಂಡ ಅಡಿಕೆ ಬೆಲೆ : ಮಕರ ಸಂಕ್ರಾಂತಿಯಂದು ಬೆಳೆಗಾರರಿಗೆ ಕಹಿ ಸುದ್ದಿ

ಮಂಗಳೂರು : ನಾಡಿನಾದ್ಯಂತ ಜನತೆ ಮಕರಸಂಕ್ರಾಂತಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ. ಹಬ್ಬದ ದಿನವಾದ ಶನಿವಾರ (ಜನವರಿ 14)ರಂದು ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ (Arecanut Price Today) ಕುಸಿತ ಕಂಡಿದೆ. ಕಳೆದ ಕೆಲವು ದಿನಗಳಿಂದ ಏರಿಕೆಯಾಗಿದ್ದ ಅಡಿಕೆ ಧಾರಣೆ ಚೇತರಿಕೆ ಕಂಡಿದ್ದು, ರೈತರ ಮೊಗದಲ್ಲಿ ಸಂತಸ ಮೂಡುವಂತೆ ಮಾಡಿತ್ತು. ಆದರೆ ಇಂದು ಅಡಕೆಧಾರಣೆಯಲ್ಲಿ ಕುಸಿತಗೊಂಡಿದ್ದು, ಮತ್ತೆ ರೈತರಿಗೆ ಬೇಸರ ಉಂಟು ಮಾಡಿದೆ. ಇತ್ತೀಚಿಗೆ ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಉತ್ತಮ ಸ್ಥಿತಿಯಲ್ಲಿದೆ. ವರದಿಗಳ ಪ್ರಕಾರ ಅಡಿಕೆ ಧಾರಣೆ ಮುಂದಿನ ದಿನಗಳಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಬೇರೆ ರಾಜ್ಯಕ್ಕಿಂತ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿ ಅಧಿಕ ಬೆಲೆಯಲ್ಲಿ ಅಡಿಕೆ ಧಾರಣೆ 52,899 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಬೆಲೆ ಎಷ್ಟಿದೆ ಎನ್ನುವುದನ್ನು ಈ ಕೆಳಗೆ ತಿಳಿಸಲಾಗಿದೆ.

ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆಧಾರಣೆ ವಿವರ :

  • ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ರಾಶಿ ಅಡಿಕೆ 41,119 ರೂ.
  • ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ರಾಶಿ ಅಡಿಕೆ 46,799 ರೂ.
  • ದಾವಣಗೆರೆ ಜಿಲ್ಲೆಯಲ್ಲಿ ರಾಶಿ ಅಡಿಕೆ 45,269 ರೂ.
  • ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ರಾಶಿ ಅಡಿಕೆ 46,099 ರೂ.
  • ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ರಾಶಿ ಅಡಿಕೆ 46,609 ರೂ.
  • ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಾಶಿ ಅಡಿಕೆ 46,799 ರೂ.
  • ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ರಾಶಿ ಅಡಿಕೆ 52,899 ರೂ.
  • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಳೆ ಅಡಿಕೆಗೆ 48,000 – 54,500 ರೂ.
  • ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಕೋಕಗೆ 12,500 – 25,000 ರೂ.
  • ಮಂಗಳೂರಿನಲ್ಲಿ ಹೊಸ ಅಡಿಕೆಗೆ 25,876 -31,000 ರೂ.
  • ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಕೋಕಗೆ 11,000 – 26,000 ರೂ.
  • ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಹೊಸ ಅಡಿಕೆಗೆ 32,000 – 38,000 ರೂ.
  • ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ರಾಶಿ ಅಡಿಕೆ 45,899 ರೂ.
  • ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ರಾಶಿ ಅಡಿಕೆ 46,419 ರೂ.
  • ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ರಾಶಿ ಅಡಿಕೆ 46,679 ರೂ.
  • ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ರಾಶಿ ಅಡಿಕೆ 45,900 ರೂ.
  • ಶಿವಮೊಗ್ಗ ಜಿಲ್ಲೆಯಲ್ಲಿ ರಾಶಿ ಅಡಿಕೆ 46,299 ರೂ.
  • ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ರಾಶಿ ಅಡಿಕೆ 46,899 ರೂ.
  • ತುಮಕೂರು ಜಿಲ್ಲೆಯಲ್ಲಿ ರಾಶಿ ಅಡಿಕೆ 43,400 ರೂ.

ಇದನ್ನೂ ಓದಿ : Arecanut Price Increase : ಮತ್ತೆ ಮಾರುಕಟ್ಟೆಯಲ್ಲಿ ಏರಿಕೆ ಕಂಡ ಅಡಿಕೆ ಬೆಲೆ : ಎಲ್ಲೆಲ್ಲಿ ಎಷ್ಟೆಷ್ಟು ಏರಿಕೆ ?

ಇದನ್ನೂ ಓದಿ : Arecanut state market price: ಅಡಿಕೆ ಧಾರಣೆಯಲ್ಲಿ ಏರಿಳಿತ: ಮಂಗಳೂರಿನಲ್ಲಿ ಇಂದಿನ ಅಡಿಕೆ ಬೆಲೆ ಎಷ್ಟು?

ಇದನ್ನೂ ಓದಿ : Arecanut today price : ಅಡಿಕೆ ಬೆಲೆಯಲ್ಲಿ ಭರ್ಜರಿ ಏರಿಕೆ : ಮಾರುಕಟ್ಟೆಯಲ್ಲಿ ಇಂದಿನ ಬೆಲೆ ಎಷ್ಟು ಗೊತ್ತಾ ?

Arecanut Price Today: Arecanut price has seen a decrease in the market: Bitter news for growers on Makar Sankranti

Comments are closed.