ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಎರಡನೇ ಅಲೆ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಬ್ಯಾಂಕ್ ವ್ಯವಹಾರದ ವೇಳೆಯಲ್ಲಿ ಬದಲಾವಣೆ ಮಾಡಲಾಗಿದೆ.

ರಾಜ್ಯದ ಎಲ್ಲಾ ಬ್ಯಾಂಕುಗಳ ವ್ಯವಹಾರಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ನಡೆಯಲಿದೆ. ಏ.22ರಿಂದಲೇ ಜಾರಿಗೆ ಬಂದಿದ್ದು, ಮೇ 31ರ ವರೆಗೆ ಜಾರಿಯಲ್ಲಿರಲಿದೆ. ಸಾಮಾನ್ಯ ವಾಗಿ ಬೆಳಗ್ಗೆ 10ರಿಂದ ಮಧ್ಯಾಹ್ನ 2ರ ವರೆಗೆ ಮತ್ತು ಮಧ್ಯಾಹ್ನ 2ರಿಂದ ಸಂಜೆ 4ರ ವರೆಗೆ ಬ್ಯಾಂಕುಗಳು ವ್ಯವಹಾರ ನಡೆಸುತ್ತಿದ್ದವು.

ಆದರೆ ಇದೀಗ ಕೊರೋನಾ ಎರಡನೇ ಅಲೆ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕಚೇರಿ ಸಿಬ್ಬಂದಿ ಹಾಜರಾತಿಯನ್ನು ಶೇ.50ಕ್ಕೆ ಇಳಿಸಿರು ವುದರಿಂದ ತಾತ್ಕಾಲಿಕವಾಗಿ ಆದೇಶ ಹೊರಡಿಸಲಾಗಿದೆ. ಬ್ಯಾಂಕ್ ನೌಕರರ ಆರೋಗ್ಯದ ದೃಷ್ಟಿಯಿಂದ ವ್ಯವಹಾರದ ಸಮಯವನ್ನು ಎರಡು ಗಂಟೆ ಕಡಿತಗೊಳಿಸಲಾಗಿದೆ.
