ಅನ್ನಭಾಗ್ಯ ಯೋಜನೆಯಡಿಯಲ್ಲಿ ಸರಕಾರದ ಸೌಲಭ್ಯಗಳನ್ನು ಪಡೆಯುತ್ತಿದ್ದವರ ಬಿಪಿಎಲ್ ಕಾರ್ಡುಗಳನ್ನು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ರದ್ದು ಮಾಡಿದೆ. ರಾಜ್ಯ ಸರಕಾರದ ಸೂಚನೆಯ ಮೇರೆಗೆ ಬಿಪಿಎಲ್ ಕಾರ್ಡುಗಳ ಪರಿಶೀಲನೆ ನಡೆಸಿದ್ದು, ಆದಾಯ ತೆರಿಗೆ ಪಾವತಿ ಸೇರಿದಂತೆ ಹಲವು ಕಾರಣಗಳನ್ನು ನೀಡಿ ಲಕ್ಷಾಂತರ ಬಿಪಿಎಲ್ ಕಾರ್ಡುಗಳನ್ನು ರದ್ದು ಪಡಿಸಿ ಎಪಿಎಲ್ ಕಾರ್ಡ್ ವಿತರಿಸಲಾಗಿದೆ. ಆದ್ರೀಗ ಬಿಪಿಎಲ್ ಕಾರ್ಡುದಾರರಿಗೆ ರಾಜ್ಯ ಸರಕಾರ ಇದೀಗ ಬಿಗ್ ರಿಲೀಪ್ ನೀಡಿದೆ.

ಕರ್ನಾಟಕದಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ವಾಪಾಸ್ ಪಡೆಯುವುದು ರಾಜ್ಯ ಸರಕಾರದ ಉದ್ದೇಶವಾಗಿದ್ದು, ಅರ್ಹರ ಬಿಪಿಎಲ್ ಕಾರ್ಡುಗಳನ್ನು ಯಾವುದೇ ಕಾರಣಕ್ಕೂ ರದ್ದು ಮಾಡಬಾರದು ಎಂದು ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ರಾಜ್ಯ ಸರಕಾರ ಕಟ್ಟುನಿಟ್ಟಿನ ಆದೇಶ ನೀಡಿದೆ. ಒಂದೊಮ್ಮೆ ಪಡಿತರ ಚೀಟಿ ಪರಿಷ್ಕರಣೆಯ ವೇಳೆಯಲ್ಲಿ ಬಡವರಿಗೆ ಅನ್ಯಾಯವಾಗಿದ್ದರೆ ಅಂತಹವರು ಮತ್ತೊಮ್ಮೆ ಬಿಪಿಎಲ್ ಕಾರ್ಡ್ ಪಡೆಯಲು ಅವಕಾಶ ಕಲ್ಪಿಸಿದೆ.
ಇದನ್ನೂ ಓದಿ : Nandini milk price hike : ಕರ್ನಾಟಕದಲ್ಲಿ ಹಾಲಿನ ದರ 2 ರೂ. ಏರಿಕೆ ಫಿಕ್ಸ್ ! ಗ್ರಾಹಕರಿಗೆ ನಂದಿನಿ ಬರೆ
ಸದ್ಯ ರಾಜ್ಯದ ಕಾಂಗ್ರೆಸ್ ಸರಕಾರದ ನಿರ್ದೇಶನದ ಮೇರೆಗೆ ಆಹಾರ ಇಲಾಖೆ ಬಿಪಿಎಲ್ ಕಾರ್ಡುದಾರರಿಗೆ ಬಿಗ್ ಆಪರೇಷನ್ ನಡೆಸುತ್ತಿದೆ. ರಾಜ್ಯದಲ್ಲಿ ಈಗಾಗಲೇ ಲಕ್ಷಾಂತರ ಕಾರ್ಡುಗಳು ರದ್ದಾಗಿದೆ. ಈ ಮೂಲಕ ರಾಜ್ಯ ಸರಕಾರ ಬಡವರಿಗೆ ಅನ್ಯಾಯ ಮಾಡಿದೆ ಎಂಬ ಆರೋಪ ಕೇಳಿಬಂದಿದೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲಾಖೆಯ ಅಧಿಕಾರಿಗಳಿಗೆ ಖಡಕ್ ಸೂಚನೆಯನ್ನು ನೀಡಿದ್ದಾರೆ.

ಅರ್ಹರಾಗಿದ್ದು ಬಿಪಿಎಲ್ ಕಾರ್ಡ್ ಕಳೆದುಕೊಂಡಿರುವ ಫಲಾನುಭವಿಗಳು ಇದ್ದರೆ ಅಂತಹವರು ಯಾವುದೇ ಕಾರಣಕ್ಕೂ ಭಯ ಪಡುವ ಅಗತ್ಯವಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸಿಎಸ್ ಚಂದ್ರ ಭೂಪಾಲ ತಿಳಿಸಿದ್ದಾರೆ. ರಾಜ್ಯ ಸರಕಾರದ ಸೂಚನೆಯ ಮೇರೆಗೆ ಅನರ್ಹ ಕಾರ್ಡುದಾರರ ಪತ್ತೆಗೆ ಕ್ರಮಕೈಗೊಂಡಿದೆ. ಆದರೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ಸಮಸ್ಯೆ ಆಗೋದಿಲ್ಲ ಎಂದಿದ್ದಾರೆ.
ಇದನ್ನೂ ಓದಿ : Ration Card e-KYC : ರೇಷನ್ ಕಾರ್ಡ್‌ಗೆ ಇಕೆವೈಸಿ ಕಡ್ಡಾಯ, ತಪ್ಪಿದ್ರೆ ರದ್ದಾಗುತ್ತೆ ಕಾರ್ಡ್
Big relief for BPL cardholders New rules implemented in Karnataka