BPL card holders : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಜನರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ವಿಶ್ವಕರ್ಮ, ಪ್ರಧಾನ ಮಂತ್ರಿ ಮುದ್ರಾ ಯೋಜನೆಗಳ ಮೂಲಕ ಸ್ವ ಉದ್ಯೋಗಕ್ಕೆ ಅನುಕೂಲ ಕಲ್ಪಿಸಿದ್ದರೆ, ಇದೀಗ ಬಡ ಜನರಿಗೆ 5 ಲಕ್ಷ ರೂಪಾಯಿಯ ಆರ್ಥಿಕ ಅನುಕೂಲ ಕಲ್ಪಿಸುವ ಯೋಜನೆಯನ್ನು ಜಾರಿಗೆ ತಂದಿದೆ.

ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳು ಆಯುಷ್ಮಾನ್ ಕಾರ್ಡ್ ನೋಂದಣಿ ಮಾಡಿಸಿಕೊಂಡಿದ್ದರೆ ವಾರ್ಷಿಕ 5 ಲಕ್ಷ ರೂಪಾಯಿಯ ಉಚಿತ ಚಿಕಿತ್ಸೆಯನ್ನು ಪಡೆದುಕೊಳ್ಳಬಹುದಾಗಿದೆ. ಆರೋಗ್ಯ ರಕ್ಷಕ ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿಗಳ ಜನ ಆರೋಗ್ಯ ಯೋಜನೆ ಮತ್ತು ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯ ಅಡಿಯಲ್ಲಿ ಈ ಲಾಭವನ್ನು ಜನರು ಪಡೆದುಕೊಳ್ಳಬಹುದಾಗಿದೆ.
ಆಯುಷ್ಮಾನ್ ಕಾರ್ಡ್‌ನಿಂದ ಬಿಪಿಎಲ್ ಕಾರ್ಡುದಾರರು ವಾರ್ಷಿಕ 5 ಲಕ್ಷ ರೂಪಾಯಿಯ ವರೆಗೆ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆಯನ್ನು ಪಡೆದುಕೊಳ್ಳಬಹುದಾಗಿದೆ. ಬಿಪಿಎಲ್ ಮಾತ್ರವಲ್ಲದೇ ಎಪಿಎಲ್ ಕುಟುಂಬಗಳು ಕೂಡ ಈ ಯೋಜನೆಯ ಲಾಭ ಪಡೆಯಬಹುದಾಗಿದೆ. ಬಿಪಿಎಲ್ ಕುಟುಂಬಗಳಿಗೆ ವಾರ್ಷಿಕವಾಗಿ 1.5 ಲಕ್ಷ ರೂಪಾಯಿಯ ವರೆಗೆ ಉಚಿತ ಚಿಕಿತ್ಸೆಯನ್ನು ಪಡೆಯಬಹುದಾಗಿದೆ.
ಇದನ್ನೂ ಓದಿ : 7ನೇ ವೇತನ ಆಯೋಗದ ಶಿಫಾರಸ್ಸು ಅಗಸ್ಟ್ 1ರಿಂದಲೇ ಜಾರಿ : ಸರಕಾರಿ ನೌಕರರಿಗೆ ಭರ್ಜರಿ ಗುಡ್‌ನ್ಯೂಸ್
ಆಯುಷ್ಮಾನ್ ಕಾರ್ಡುಗಳನ್ನು ಇದುವರೆಗೂ ಮಾಡಿಸದೇ ಇರುವವರು ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಗಳಲ್ಲಿ ನಿಮ್ಮ ಪಡಿತರ ಚೀಟಿಯನ್ನು ನೀಡುವ ಮೂಲಕ ಮೊಬೈಲ್ ಸಂಖ್ಯೆಯನ್ನು ನೀಡಿ ಉಚಿತವಾಗಿ ಪಡೆಯಬಹುದಾಗಿದೆ. ಈ ಯೋಜನೆಯ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಲಿದೆ. ಆಯುಷ್ಮಾನ್ ಕಾರ್ಡ್‌ಗಳನ್ನು ನೋಂದಣಿ ಮಾಡಿಸಿಕೊಂಡವರು ದೇಶದ ಯಾವುದೇ ಭಾಗದಲ್ಲಿದ್ದರೂ ಕೂಡ ಉಚಿತ ಚಿಕಿತ್ಸೆಯನ್ನು ಪಡೆಯಬಹುದಾಗಿದೆ. ತುರ್ತು ಚಿಕಿತ್ಸೆಯ ಸಂದರ್ಭದಲ್ಲಿ ರೋಗಿಗಳು 171 ಚಿಕಿತ್ಸೆಗಳಿಗೆ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆಯಬಹುದಾಗಿದೆ.

ಇದನ್ನೂ ಓದಿ : Gruha Lakshmi Yojana : ಗೃಹಲಕ್ಷ್ಮೀ ಯೋಜನೆ ಹಣ ಜಮೆ ಆಗಿಲ್ವಾ : ಚಿಂತೆ ಬಿಡಿ ಎನ್‌ಪಿಸಿಐ ಚೆಕ್ ಮಾಡಿ
ಈ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿ ಬೇಕಾಗಿದ್ದಲ್ಲಿ ಕೂಡಲೇ 104 ಅಥವಾ 14555ಕ್ಕೆ ಕರೆ ಮಾಡಬಹುದಾಗಿದೆ. ಅಲ್ಲದೇ ಟೋಲ್ ಫ್ರೀ ಸಂಖ್ಯೆ: 18004258330 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ. ಇಲ್ಲವಾದ್ರೆ ಪ್ರತೀ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.
ಇದನ್ನೂ ಓದಿ : ಮಹಿಳೆಯರಿಗೆ ಸಿಗಲಿದೆ 5000 ರೂ. ; ಹೊಸ ಯೋಜನೆ ಘೋಷಿಸಿದ ಪ್ರಧಾನ ನರೇಂದ್ರ ಮೋದಿ
BPL card holders will get Rs 5 lakh Scheme : How to Apply