LPG ಅಭಾವದ ವದಂತಿ: ಸಿಲಿಂಡರ್ ದಾಸ್ತಾನಿನ ಬಗ್ಗೆ ಕೇಂದ್ರ ಸರ್ಕಾರದಿಂದ ಮಹತ್ವದ ಮಾಹಿತಿ

LPG Supply | Central Government: ಸಿಲಿಂಡರ್‌ಗಳ ಅಕ್ರಮ ದಾಸ್ತಾನು ಮತ್ತು ಕಪ್ಪು ಮಾರುಕಟ್ಟೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ ತಿಳಿಸಿದ್ದಾರೆ.

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧ ಮತ್ತು ಹಾರ್ಮುಜ್ ಜಲಸಂಧಿಯ (Strait of Hormuz) ಮೂಲಕ ಪೂರೈಕೆ ವ್ಯತ್ಯಯವಾಗಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಎಲ್‌ಪಿಜಿ (LPG) ಅಭಾವ ಉಂಟಾಗಲಿದೆ ಎಂಬ ವದಂತಿಗಳು ಹಬ್ಬಿವೆ. ಈ ಕುರಿತು ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರ, ಜನರು ಆತಂಕಕ್ಕೊಳಗಾಗಿ ಮುಗಿಬಿದ್ದು ಸಿಲಿಂಡರ್ ಖರೀದಿಸುವ (Cylinder Gas Panic Buying) ಅಗತ್ಯವಿಲ್ಲ ಎಂದು ತಿಳಿಸಿದೆ.

ಸರ್ಕಾರ ನೀಡಿದ ಪ್ರಮುಖ ಮಾಹಿತಿ:

ಕಪ್ಪು ಮಾರುಕಟ್ಟೆ ವಿರುದ್ಧ ಎಚ್ಚರಿಕೆ:

ಸಿಲಿಂಡರ್‌ಗಳ ಅಕ್ರಮ ದಾಸ್ತಾನು ಮತ್ತು ಕಪ್ಪು ಮಾರುಕಟ್ಟೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ ತಿಳಿಸಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯಲ್ಲೂ ಯಾವುದೇ ಕೊರತೆಯಿಲ್ಲ ಎಂದು ಅವರು ಖಚಿತಪಡಿಸಿದ್ದಾರೆ.

[youtube https://www.youtube.com/watch?v=nCMSZDdXGYY]

Exit mobile version