ಪ್ರತೀ ಕುಟುಂಬಕ್ಕೆ ಸಿಗಲಿದೆ 5000 ರೂ. : ಕಾಂಗ್ರೆಸ್‌ನಿಂದ ಮತ್ತೊಂದು ಗ್ಯಾರಂಟಿ ಘೋಷಣೆ

Congress guarantee 5000 rupees :  ಕರ್ನಾಟಕದ ಕಾಂಗ್ರೆಸ್‌ ಸರಕಾರ ಈಗಾಗಲೇ ಹಲವು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆ. ಶಕ್ತಿ ಯೋಜನೆ, ಗೃಹಲಕ್ಷ್ಮೀ ಯೋಜನೆ, ಗೃಹಜ್ಯೋತಿ ಯೋಜನೆ, ಅನ್ನಭಾಗ್ಯ, ಯುವನಿಧಿ ಯೋಜನೆಗಳ ಮೂಲಕ ಜನರ ಮನ ಗೆದ್ದಿದೆ.

Congress guarantee 5000 rupees :  ಕರ್ನಾಟಕದ ಕಾಂಗ್ರೆಸ್‌ ಸರಕಾರ ಈಗಾಗಲೇ ಹಲವು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆ. ಶಕ್ತಿ ಯೋಜನೆ, ಗೃಹಲಕ್ಷ್ಮೀ ಯೋಜನೆ, ಗೃಹಜ್ಯೋತಿ ಯೋಜನೆ, ಅನ್ನಭಾಗ್ಯ, ಯುವನಿಧಿ ಯೋಜನೆಗಳ ಮೂಲಕ ಜನರ ಮನ ಗೆದ್ದಿದೆ. ಈ ನಡುವಲ್ಲೇ ಕಾಂಗ್ರೆಸ್‌ ಪಕ್ಷ ಇಂದಿರಮ್ಮ ಅಭಯಂ (indiramma Abhayam ) ಎಂಬ ಮತ್ತೊಂದು ಘೋಷಣೆ ಮಾಡಿದ್ದು, ಪ್ರತೀ ಬಡ ಕುಟುಂಬಕ್ಕೆ ತಲಾ 5000 ರೂಪಾಯಿ ನೀಡಲು ಮುಂದಾಗಿದೆ.

Congress guarantee 5000 rupees for poor in andra pradesh Indiramma Abhayam Scheme
Image Credit to Original Source

ಪಂಚ ಗ್ಯಾರಂಟಿ ಯೋಜನೆಗಳ ಮೂಲಕವೇ ಕಾಂಗ್ರೆಸ್‌ ಸರಕಾರ ಕರ್ನಾಟಕದಲ್ಲಿ ಅಧಿಕಾರದ ಗದ್ದುಗೆ ಹಿಡಿದಿತ್ತು. ಮಾತ್ರವಲ್ಲ ತೆಲಂಗಾಣದಲ್ಲಿಯೂ ಕಾಂಗ್ರೆಸ್‌ ಪಕ್ಷದ ಗೆಲುವಿಗೆ ಗ್ಯಾರಂಟಿ ಯೋಜನೆ ಸಹಕಾರಿಯಾಗಿತ್ತು. ಮುಂದಿನ ಲೋಕಸಭಾ ಚುನಾವಣೆಯಲ್ಲಿಯೂ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಲು ಕಾಂಗ್ರೆಸ್‌ ಪಕ್ಷ ಸಜ್ಜಾಗಿದೆ.

ಇದೀಗ ಆಂಧ್ರಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಚುನಾವಣಾ ದಿನಾಂಕ ಘೋಷಣೆಗೂ ಮೊದಲೇ ಕಾಂಗ್ರೆಸ್‌ ಪಕ್ಷ ಭರ್ಜರಿ ಯೋಜನೆ ಗಳನ್ನು ಘೋಷಣೆ ಮಾಡುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚುನಾವಣಾ ಹೊತ್ತಲೇ ಪ್ರತೀ ಕುಟುಂಬದ ಯಜಮಾನರಿಗೆ ಪ್ರತೀ ತಿಂಗಳು ತಲಾ 5000 ಸಾವಿರ ರೂಪಾಯಿ ನೀಡುವುದಾಗಿ ಘೋಷಣೆಯನ್ನು ಮಾಡಿದ್ದಾರೆ.

ಇದನ್ನೂ ಓದಿ : ಬಿಪಿಎಲ್‌ ಕಾರ್ಡುದಾರರಿಗೆ 6 ಲಕ್ಷ, ಎಪಿಎಲ್‌ಗೆ 2 ಲಕ್ಷ : ಕೇಂದ್ರ ಸರಕಾರದ ಈ ಯೋಜನೆ ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಿ

ಈ ಯೋಜನೆಗೆ ಇಂದಿರಮ್ಮ ಅಭಯಂ  ಯೋಜನೆ ಎಂದು ಹೆಸರಿಡಲಾಗಿದೆ. ಹೈದ್ರಾಬಾದ್‌ನ ಅನಂತಪುರದಲ್ಲಿ ನಡೆದ ನ್ಯಾಯ ಸಾಧನಾ ಸಭೆ ಮಹಾಸಮಾವೇಶದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಈ ಘೋಷಣೆಯನ್ನು ಮಾಡಿದ್ದು, ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದ್ರೆ ಈ ಯೋಜನೆ ಪ್ರತಿಯೊಬ್ಬರಿಗೂ ದೊರೆಯಲಿದೆ.

Congress guarantee 5000 rupees for poor in andra pradesh Indiramma Abhayam Scheme
Image Credit to Original Source

ಅರ್ಹ ಬಡ ಕುಟುಂಬವು ಪ್ರತೀ ತಿಂಗಳು 5000 ರೂಪಾಯಿ ಹಣವನ್ನು ಸರಕಾರದಿಂದ ಪಡೆಯಲಿದೆ. ಸರಕಾರ ಕರ್ನಾಟಕದಲ್ಲಿ ಕಾಂಗ್ರೆಸ್‌ ಸರಕಾರ ಜಾರಿಗೆ ತಂದಿರುವ ಗೃಹಲಕ್ಷ್ಮೀ ಯೋಜನೆಯ ಮಾದರಿಯಲ್ಲಿಯೇ ಮನೆಯ ಯಜಮಾನರ ಖಾತೆಗೆ ನೇರ ವರ್ಗಾವಣೆ ಮಾಡುವ ಚಿಂತನೆಯನ್ನು ಮಾಡಿಕೊಂಡಿದೆ.

ಇದನ್ನೂ ಓದಿ : ಗೃಹಲಕ್ಷ್ಮೀ ಯೋಜನೆ : ಹಣ ವರ್ಗಾವಣೆ ಹೊಸ ಸೂತ್ರ, ಹಣ ಸಿಗದೇ ಇರುವವರಿಗೂ ಇಲ್ಲಿದೆ ಗುಡ್‌ನ್ಯೂಸ್‌

ಆಂಧ್ರಪ್ರದೇಶದಲ್ಲಿ ಚುನಾವಣಾ ದಿನಾಂಕ ಘೋಷಣೆಯಾದ ನಂತರ ಕಾಂಗ್ರೆಸ್‌ ಇನ್ನಷ್ಟು ಘೋಷಣೆಗಳನ್ನು ಮಾಡುವ ಸಾಧ್ಯತೆಯಿದೆ. ಕರ್ನಾಟಕದಲ್ಲಿ ಈಗಾಗಲೇ ಗೃಹಲಕ್ಷ್ಮೀ ಯೋಜನೆಯ ಮೂಲಕ ಮನೆಯ ಗೃಹಿಣಿಯರು ಈ ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ. ಈಗಾಗಲೇ ಐದು ಕಂತಿನ ಹಣವನ್ನು ಪಡೆದುಕೊಂಡಿದ್ದು, ಮುಂದಿನ ಕಂತಿನ ಹಣಕ್ಕಾಗಿ ಕಾದುಕುಳಿತಿದ್ದಾರೆ.

ಇದನ್ನೂ ಓದಿ : ಈ ಮಹಿಳೆಯರಿಗೆ ಸಿಗಲ್ಲ ಗೃಹಲಕ್ಷ್ಮೀ ಯೋಜನೆಯ 6ನೇ ಕಂತಿನ ಹಣ

Congress guarantee 5000 rupees for poor in andra pradesh Indiramma Abhayam Scheme

Comments are closed.