ಬ್ಯಾಂಕ್ ಸಾಲ ಪಡೆದವರಿಗೆ ಇಲ್ಲಿದೆ ಗುಡ್ ನ್ಯೂಸ್ !

0

ನವದೆಹಲಿ: ಬ್ಯಾಂಕುಗಳಿಂದ ಸಾಲ ಪಡೆದಿದ್ದ ಸಾಲಗಾರರಿಗೆ ಈಗಾಗಲೇ ಆರ್ ಬಿಐ ಇಎಂಐ ಪಾವತಿಗೆ ವಿನಾಯಿತಿಯನ್ನು ನೀಡಿತ್ತು. ಆದ್ರೀಗ ಕೇಂದ್ರ ಸರಕಾರ ಇಎಂಐ ಮೇಲಿನ ಬಡ್ಡಿಯನ್ನು ಮನ್ನಾ ಮಾಡಲು ಮುಂದಾಗಿದ್ದು, ಮೂರು ದಿನಗಳ ಒಳಗಾಗಿ ಗುಡ್ ನ್ಯೂಸ್ ನೀಡುವ ಸಾಧ್ಯತೆಯಿದೆ.

ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇಶದಾದ್ಯಂತ ಹೇರಿಕೆಯಾಗಿದ್ದ ಲಾಕ್ ಡೌನ್ ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಸುಮಾರು 6 ತಿಂಗಳ ಕಾಲ ಸಾಲಗಾರರಿಗೆ ಇಎಂಐ ಪಾವತಿಗೆ ವಿನಾಯಿತಿಯನ್ನು ನೀಡಿತ್ತು. ಆದರೆ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಎಸ್ ಬಿಐ 2 ವರ್ಷಗಳ ಕಾಲ ಇಎಂಐ ಪಾವತಿಗೆ ವಿನಾಯಿತಿ ಘೋಷಣೆ ಮಾಡಿದೆ.

ಆದರೆ ಇಎಂಐ ಬಡ್ಡಿಯನ್ನೂ ಮನ್ನಾ ಮಾಡುವಂತೆ ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆಯನ್ನು ನಡೆಸಿದ್ದ ಸುಪ್ರೀಂ ಕೋರ್ಟ್ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಕುರಿತು ಕ್ರಮಕೈಗೊಳ್ಳುವಂತೆ ಕೇಂದ್ರ ಸರಕಾರಕ್ಕೆ ಸೂಚಿಸಿದೆ.

ಮೊರಟೋರಿಯಂ ಸಂದರ್ಭದಲ್ಲಿ ಮುಂದೂಡಲಾಗಿದ್ದ ಸಾಲದ ಕಂತುಗಳಿಗೆ ಬಡ್ಡಿ, ಚಕ್ರಬಡ್ಡಿ ವಿಧಿಸುವ ಮತ್ತು ಮರುಪಾವತಿಗೆ ವಿಳಂಭ ಮಾಡುವವರಿಗೆ ಕ್ರಿಡಿಟ್ ರೇಟಿಂಗ್ ಬದಲಾಯಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಒಳಗಾಗಿ ತೀರ್ಮಾನ ಕೈಗೊಳ್ಳುವುದಾಗಿ ಕೇಂದ್ರ ಸರಕಾರ ಸುಪ್ರೀಂ ಕೋರ್ಟಿಗೆ ತಿಳಿಸಿದೆ.’

ಕೇಂದ್ರ ಸರಕಾರದ ನಿರ್ಧಾರ ಇದೀಗ ಕುತೂಹಲ ಮೂಡಿಸಿದೆ. ಸಾಲದ ಕಂತುಗಳ ಮರುಪಾವತಿಗೆ ಸಪ್ಟೆಂಬರ್ ಅಂತ್ಯದ ವರೆಗೂ ವಿನಾಯಿತಿಯನ್ನು ನೀಡಲಾಗಿದ್ದು, ಮತ್ತೆ ಒಂದೆರಡು ದಿನಗಳ ಕಾಲ ಇಎಂಐ ಪಾವತಿಗೆ ವಿನಾಯಿತಿ ನೀಡುವ ಸಾಧ್ಯತೆಯೂ ಇದೆ.

Leave A Reply

Your email address will not be published.