Karnataka Bank Jayaram Bhat : ಕರ್ಣಾಟಕ ಬ್ಯಾಂಕ್‌ ಮಾಜಿ ಸಿಇಒ ಜಯರಾಮ್‌ ಭಟ್‌ ವಿಧಿವಶ

ಮಂಗಳೂರು : Karnataka Bank Jayaram Bhat : ರಾಜ್ಯದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಕರ್ಣಾಟಕ ಬ್ಯಾಂಕ್‌ನ ಮಾಜಿ ಆಡಳಿತ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಜಯರಾಮ್‌ ಭಟ್‌ (71 ವರ್ಷ) ಅವರು ವಿಧಿವಶರಾಗಿದ್ದಾರೆ. ಅಗಸ್ಟ್‌ ೧೦ರಂದು ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆಯನ್ನು ಕಲ್ಪಿಸಲಾದೆ.

ಮುಂಬೈನಿಂದ ಮಂಗಳೂರಿಗೆ ಆಗಮಿಸಿದ್ದ ಅವರಿಗೆ ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನದಿಂದ ಇಳಿಯುವ ವೇಳೆಯಲ್ಲಿ ಹೃದಯಾಘಾತವಾಗಿತ್ತು. ಕೂಡಲೇ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. 2005 ರಲ್ಲಿ ಕರ್ಣಾಟಕ ಬ್ಯಾಂಕ್‌ನ ಸಿಇಒ ಹಾಗೂ ವ್ಯವಸ್ಥಾಪಕ ನಿರ್ದೇಶರಾಗಿ ಆಯ್ಕೆಯಾಗಿದ್ದು, ಸುಮಾರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಕರ್ಣಾಟಕ ಬ್ಯಾಂಕ್‌ನ ಬ್ಯಾಂಕಿಂಗ್‌ ಸೇವೆಯಲ್ಲಿ ಹೊಸ ತಂತ್ರಜ್ಞಾನವನ್ನು ಅಳವಡಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮೊಬೈಲ್‌ ಬ್ಯಾಂಕಿಂಗ್‌, ಇ-ಲಾಬಿ, ಪಿಒಎಸ್‌, ಆಲ್‌ಲೈನ್‌ ಟ್ರೇಡಿಂಗ್‌ ಅಕೌಂಟ್‌, ಟ್ರಾವೆಲ್‌ ಕಾರ್ಡ್‌, ಗಿಫ್ಟ್‌ ಕಾರ್ಡ್‌ ಸೇರಿದಂತೆ ಹಲವು ಯೋಜನೆಗಳನ್ನು ಗ್ರಾಹಕರಿಗೆ ಪರಿಚಯಿಸಿದ್ದರು.

ಜಯರಾಮ್‌ ಭಟ್‌ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೊಳಲಿಯಲ್ಲಿ ಪ್ರಾಥಮಿಕ ಶಿಕ್ಷಣ, ಮಂಗಳೂರಿನಲ್ಲಿ ಪದವಿ ಶಿಕ್ಷಣ ಪಡೆದು, ಮೈಸೂರು ವಿಶ್ವ ವಿದ್ಯಾಲಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದರು. ಆರಂಭದಲ್ಲಿ ಮೂಲ್ಕಿಯ ಸರಕಾರಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ವೃತ್ತಿ ಜೀವನ ಆರಂಭಿಸಿದ್ದರು. 1973 ರಲ್ಲಿ ಕರ್ಣಾಟಕ ಬ್ಯಾಂಕಿನ ಪ್ರೊಬೇಷನರಿ ಅಧಿಕಾರಿ ಸೇವೆ ಆರಂಭಿಸಿದ್ದ ಜಯರಾಮ್‌ ಭಟ್‌ ಅವರು 1976 ರಲ್ಲಿ ಶಾಖಾ ವ್ಯವಸ್ಥಾಪಕರಾಗಿ ನಂತರ, ಸಹಾಯ ಪ್ರಧಾನ ವ್ಯವಸ್ಥಾಪಕ, ಉಪಪ್ರಧಾನ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದಾರೆ. 2005 ರಲ್ಲಿ ಪ್ರಧಾನ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ : Ambareesh Murty dies : ಪೆಪ್ಪರ್‌ಫ್ರೈನ ಸಹ-ಸಂಸ್ಥಾಪಕರಾದ ಅಂಬರೀಶ್ ಮೂರ್ತಿ ಹೃದಯಾಘಾತದಿಂದ ನಿಧನ

ಇದನ್ನೂ ಓದಿ : Karnataka: ಕಳೆದ 3 ವರ್ಷಗಳಲ್ಲಿ 45 ಸಾವಿರ ಅಪ್ರಾಪ್ತ ಬಾಲಕಿಯರು ಗರ್ಭಧಾರಣೆ

Comments are closed.