Gold-Silver Rate : ಚಿನ್ನದ ಬೆಲೆಯಲ್ಲಿ ಏರಿಕೆ, ಬೆಳ್ಳಿ ಹೇಗಿದೆ?

22 ಕ್ಯಾರೆಟ್‌ ಚಿನ್ನದ ಬೆಲೆ 10 ಗ್ರಾಂ ಗೆ 1,38,350 ರೂ. ಗಳಾದರೆ, 24 ಕ್ಯಾರೆಟ್‌ ಚಿನ್ನದ ಬೆಲೆ 10 ಗ್ರಾಂಗೆ 1,51,370 ರೂ. ದಾಖಲೆಯಾಗಿದೆ.

Gold-Silver Rate Today: ದೇಶದಲ್ಲಿ ಚಿನ್ನದ ಬೆಲೆ ಮತ್ತೊಮ್ಮೆ ತುಸು ಏರಿಕೆ ಕಂಡಿದೆ. ಇಷ್ಟು ದಿನ ಚಿನ್ನ ಪ್ರಿಯರಿಗೆ ಸ್ವಲ್ಪ ನಿರಾಳವಾಗುವಂತೆ ಮಾಡಿದ್ದ ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಯೋಚಿಸುವಂತೆ ಮಾಡಿದೆ. ಅದರಲ್ಲೂ ಕಳೆದ ಎರಡು ದಿನಗಳಲ್ಲಿ 10 ಗ್ರಾಂ ಚಿನ್ನದ ಬೆಲೆ 1000 ರೂ. ಆಸು ಪಾಸಿನಲ್ಲಿ ಏರಿಕೆ–ಇಳಿಕೆಯಾಗುತ್ತ ಸ್ಥಿರತೆ ಕಾಯ್ದುಕೊಳ್ಳಲು ಪರದಾಡುತ್ತಿದೆ. ಕಚ್ಚಾ ತೈಲ ಬೆಲೆಯಲ್ಲಾದ ಏರಿಕೆ ಮತ್ತು ಡಾಲರ್‌ ಮೌಲ್ಯದಲ್ಲಿ ಕಂಡ ಏರಿಕೆಯ ಪ್ರಭಾವದಿಂದ ಚಿನ್ನದ ಬೆಲೆಯಲ್ಲಿ ಈ ಬದಲಾವಣೆ ಕಂಡುಬರುತ್ತಿದೆ ಎನ್ನಲಾಗಿದೆ. ಚಿನ್ನದ ಬೆಲೆಯಲ್ಲಿನ ಬದಲಾವಣೆಯನ್ನು 18 ರಿಂದ 24 ಕ್ಯಾರೆಟ್ ಚಿನ್ನದ ವರೆಗೆ ನೋಡಬಹುದಾಗಿದೆ. ಏಪ್ರಿಲ್‌ 29ರ ಬೆಳಿಗ್ಗೆ ಚಿನಿವಾರಪೇಟೆಯಲ್ಲಿ 10 ಗ್ರಾಂ ಚಿನ್ನದ ಬೆಲೆ 1,51,370 ರೂ. ದಾಖಲೆಯಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಚಿನ್ನವು ಪ್ರತಿ ಔನ್ಸ್‌ಗೆ $ 4,586.50 ಆಗಿದೆ.

ಮುಂಬೈ ಮತ್ತು ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ?

ಪ್ರಸ್ತುತ, ಮುಂಬೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 10 ಗ್ರಾಂ ಗೆ 1,38,350 ರೂ. ಗಳಾದರೆ, 24 ಕ್ಯಾರೆಟ್‌ ಚಿನ್ನದ ಬೆಲೆ 10 ಗ್ರಾಂಗೆ 1,51,370 ರೂ. ದಾಖಲೆಯಾಗಿದೆ. ಬೆಂಗಳೂರಿನಲ್ಲಿಯೂ ಇದೇ ಬೆಲೆ ಮುಂದುವರೆದಿದೆ.

ಇದನ್ನೂ ಓದಿ: ರೈಲ್ವೆ ಟಿಕೆಟ್ ಬುಕ್ ಮಾಡುವ ಮುನ್ನ ಹುಷಾರ್.! ಯಾಮಾರಿದ್ರೆ ಖಾಲಿ ಆಗುತ್ತೆ ನಿಮ್ಮ ಬ್ಯಾಂಕ್‌ ಖಾತೆ

ಬೆಳ್ಳಿ ದರ ಹೇಗಿದೆ?

ಚಿನ್ನದ ನಂತರ ಸ್ಥಾನದಲ್ಲಿರುವ ಮತ್ತೊಂದು ಅಮೂಲ್ಯ ಲೋಹವಾದ ಬೆಳ್ಳಿ ಬೆಲೆಯು ಇಳಿಕೆ ಕಂಡಿದೆ. ಏಪ್ರಿಲ್‌ 29 ರ ಬೆಳಿಗ್ಗೆ ಪ್ರತಿ ಕಿಲೋಗ್ರಾಂ ಬೆಳ್ಳಿಯ ಬೆಲೆ 2,59,900 ರೂ. ದಾಖಲಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸ್ಪಾಟ್ ಬೆಳ್ಳಿಯ ಬೆಲೆ ಪ್ರತಿ ಔನ್ಸ್‌ಗೆ $73.18 ಆಗಿದೆ. ದೇಶದಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಯ ಬದಲಾವಣೆಗಳು ಜಾಗತಿಕ ಅಂಶಗಳಿಂದ ಪ್ರಭಾವಿತವಾಗುತ್ತಿರುವುದು ಕಂಡುಬರುತ್ತಿದೆ.

Archana V. Bhat |ಅರ್ಚನಾ ವಿ. ಭಟ್

ಅರ್ಚನಾ ವಿ. ಭಟ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಕಳೆದ ಹಲವು ವರ್ಷಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯೂಸ್‌ನೆಕ್ಸ್ಟ್‌ ಕನ್ನಡ ಸುದ್ದಿ ಸಂಸ್ಥೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವ್ಯವಹಾರ, ಆಟೋಮೊಬೈಲ್‌, ಟೆಕ್ನಾಲಜಿ, ಕ್ರೀಡೆ ಸುದ್ದಿ ವಿಭಾಗದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿದ್ದಾರೆ.. ನೈಜ, ಸತ್ಯ ಸುದ್ದಿಯನ್ನು ಪ್ರಕಟಿಸುತ್ತಿದ್ದಾರೆ.

Related Stories