ಆಭರಣ ಪ್ರಿಯರಿಗೆ ದೀಪಾವಳಿ ಗುಡ್ ನ್ಯೂಸ್ : ಇಂದಿನ ಬೆಲೆ ಎಷ್ಟು ಗೊತ್ತಾ ?

ಬೆಂಗಳೂರು : ಕೊರೊನಾ ವೈರಸ್ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆಯೇ ಚಿನ್ನದ ದರದಲ್ಲಿ ಭಾರಿ ಏರಿಕೆ ಕಂಡಿತ್ತು. ಆದರೆ ನಂತರದ ದಿನಗಳಲ್ಲಿ ಇಳಿಕೆಯನ್ನು ಕಂಡಿದ್ದರೂ, ಏರಿಳಿತದಲ್ಲಿಯೇ ಸಾಗುತ್ತಿದೆ. ಆದ್ರೀಗ ದೀಪಾವಳಿಯ ಹೊತ್ತಲ್ಲಿ ಚಿನ್ನ ಆಭರಣ ಪ್ರಿಯರಿಗೆ ಗುಡ್ ನ್ಯೂಸ್ ಕೊಟ್ಟಿದೆ.

ಕೊರೊನಾರಂಭಕ್ಕೂ ಮುನ್ನ 10 ಗ್ರಾಂಗೆ 35 ಸಾವಿರ ರೂಪಾಯಿ ಇದ್ದ ಚಿನ್ನದ ಬೆಲೆ ಇಂದು 50 ಸಾವಿರ ರೂಪಾಯಿ ಸಮೀಪಿಸಿದೆ. ಅನ್​ಲಾಕ್​ ಘೋಷಣೆ ಆದ ನಂತರದಲ್ಲಿ ಚಿನ್ನದ ಆಮದು ಸಮಸ್ಥಿತಿಗೆ ಬರುತ್ತಿದ್ದು, ಚಿನ್ನದ ಬೆಲೆ ನಿಧಾನವಾಗಿ ಕಡಿಮೆ ಆಗಿತ್ತು. ದೀಪಾವಳಿ ಹಬ್ಬದ ಸಮಯದಲ್ಲಿ ಜನರು ಚಿನ್ನದ ಖರೀದಿಗೆ ಮುಂದಾಗಿದ್ದು, ಚಿನ್ನದ ದರದಲ್ಲಿ ಏರಿಳಿತ ಕಾಣುತ್ತಿದೆ.

ಕಳೆದ ವಾರ ಚಿನ್ನದ ದರ ಒಂದೇ ದಿನ ಭಾರೀ ಇಳಿಕೆ ಕಂಡಿತ್ತು. ನಂತರ ನಾಲ್ಕು ದಿನ ಏರಿಕೆ ಕಂಡಿತ್ತು. ಆದಾಗ್ಯೂ ಕಳೆದ ವಾರ ಚಿನ್ನದ ದರ 770 ರೂಪಾಯಿ ಇಳಿಕೆ ಕಂಡಂತಾಗಿದೆ. ಈ ಮೂಲಕ ಶುದ್ಧ ಚಿನ್ನ 47,700 ರೂಪಾಯಿ ಆಗಿದೆ. ಇನ್ನು ಬೆಳ್ಳಿ ದರದ ವಿಚಾರಕ್ಕೆ ಬರುವುದಾದರೆ ಕಳೆದವಾರ ಕೆಜಿ ಬೆಳ್ಳಿ 1820 ರೂಪಾಯಿ ಇಳಿಕೆ ಕಂಡಂತಾಗಿದೆ. ಈ ಮೂಲಕ ದರ 63,600 ರೂಪಾಯಿ ಆಗಿದೆ.

ಅನೇಕ ವಿಚಾರಗಳು ಚಿನ್ನದ ಬೆಲೆಯನ್ನು ನಿರ್ಧರಿಸುತ್ತವೆ. ಹಣ ದುಬ್ಬರ, ಅಂತಾರಾಷ್ಟ್ರೀಯ ಮಾರುಕಟ್ಟೆ ಬೆಲೆ, ಬಡ್ಡಿ ದರ, ಜ್ಯುವೆಲರಿ ಮಾರುಕಟ್ಟೆ ಮತ್ತು ವ್ಯಾಪಾರ ಯುದ್ಧಗಳು ಚಿನ್ನದ ಬೆಲೆ ಏರಿಳಿತಕ್ಕೆ ನೇರ ಕಾರಣವಾಗುತ್ತವೆ. ಸದ್ಯ ಕೊರೋನಾ ವೈರಸ್​ ಇರುವುದರಿಂದ ಜನರಿಗೆ ಬೇರೆಲ್ಲೂ ಹೂಡಿಕೆ ಮಾಡಲು ಕ್ಷೇತ್ರಗಳು ಸಿಗುತ್ತಿಲ್ಲ. ಹೀಗಾಗಿ, ಚಿನ್ನದ ಮೇಲೆ ಹೂಡಿಕೆ ಮಾಡುತ್ತಿದ್ದಾರೆ. ಇದರಿಂದ ಸಹಜವಾಗಿಯೇ ಚಿನ್ನದ ದರದಲ್ಲಿ ಏರಿಕೆ ಕಂಡಿತ್ತು.

ವಿಶ್ವದ ಆರ್ಥಿಕತೆ ತಲೆಕೆಳೆಗಾಗಿದೆ. ಹೀಗಾಗಿ ಯಾವ ಮಾರುಕಟ್ಟೆಯ ಮೇಲೂ ಖಚಿತವಾಗಿ ಏನನ್ನೂ ಹೇಳಲೂ ಸಾಧ್ಯವಾಗುತ್ತಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಚಿನ್ನದ ದರ ಏರಿಕೆ ಆಗಲಿದೆ ಎಂದು ತಜ್ಞರು ಹೇಳುತ್ತಿದ್ದಾರೆ.

Comments are closed.