ಮುಂಬೈ: ಕೊರೊನಾ ವೈರಸ್ ಸೋಂಕಿನ ಆರ್ಭಟದ ನಡುವಲ್ಲೇ ಚಿನ್ನದ ದರ ಗರಿಷ್ಠ ಮಟ್ಟಕ್ಕೆ ಏರಿಕೆಯಾಗುತ್ತಿದೆ. ದೇಶದಲ್ಲಿ ಗ್ರಾಂ ಚಿನ್ನಕ್ಕೆ ರೂ 4,961 ದಾಖಲಾಗಿದೆ.

ಅಮೆರಿಕಾ ಮತ್ತು ಚೀನಾ ನಡುವಿನ ವ್ಯಾಪಾರ, ರಾಜತಾಂತ್ರಿಕ ಚಿಕ್ಕಟ್ಟು ಜೊತೆಗೆ ಕೊರೋನಾ ಹಾವಳಿ ಚಿನಿವಾರು ಪೇಟೆಯ ಮೇಲೆ ನೇರ ಪರಿಣಾಮವನ್ನು ಬೀರಿದೆ.ಈ ಹಿನ್ನೆಲೆಯಲ್ಲಿ ಚಿನ್ನದ ಮೇಲಿನ ಹೂಡಿಕೆ ಹಾಗೂ ಹಣದುಬ್ಬರದ ನಿರೀಕ್ಷೆಗಳು ಚಿನ್ನದ ದರ ಏರಿಕೆಗೆ ಕಾರಣವಾಗುತ್ತಿದೆ.

ದೇಶದ ವಿವಿಧ ರಾಜ್ಯಗಳಲ್ಲಿ ಚಿನ್ನಾಭರಣದ ದರದಲ್ಲಿ ವ್ಯತ್ಯಾಸಗಳು ಕಂಡುಬರುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ದೇಶದಲ್ಲಿಯೇ ಅತೀ ಹೆಚ್ಚಿನ ದರಕ್ಕೆ ಚಿನ್ನ ಏರಿಕೆಯನ್ನು ಕಂಡಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನ ರೂ.49,560 ಇದ್ದರೆ, 24 ಕ್ಯಾರಟ್ 10 ಗ್ರಾಂ ಚಿನ್ನ ರೂ.50,760ಕ್ಕೆ ತಲುಪಿದೆ.


ಮುಂಬೈ ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನ ರೂ.49,610 ಇದ್ದರೆ, 24 ಕ್ಯಾರಟ್ 10 ಗ್ರಾಂ ಚಿನ್ನ ರೂ.50,610 ಕ್ಕೆ ತಲುಪಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನ ರೂ.48,110 ಇದ್ದರೆ, 24 ಕ್ಯಾರಟ್ 10 ಗ್ರಾಂ ಚಿನ್ನ ರೂ.52,480 ಕ್ಕೆ ತಲುಪಿದೆ.