Gruha Lakshmi Yojana: ಬೆಂಗಳೂರು: ಗೃಹಲಕ್ಷ್ಮೀ ಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ಫಲಾನುಭವಿಗಳಿಗೆ ರಾಜ್ಯ ಸರಕಾರ ಗುಡ್‌ನ್ಯೂಸ್ ಕೊಟ್ಟಿದೆ. ಬಾಕಿ ಉಳಿದಿರುವ ಎರಡು ತಿಂಗಳ ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ.

ಗೃಹಲಕ್ಷ್ಮೀ ಯೋಜನೆ ಕರ್ನಾಟಕ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿದೆ. ಗೃಹಲಕ್ಷ್ಮೀ ಯೋಜನೆಯ ಮೂಲಕ ಪ್ರತೀ ತಿಂಗಳು ಮನೆಯ ಯಜಮಾನಿಯರ ಖಾತೆಗೆ ೨೦೦೦ ರೂಪಾಯಿ ಹಣವನ್ನು ವರ್ಗವಣೆ ಮಾಡಲಾಗುತ್ತಿದೆ. ಕೋಟ್ಯಾಂತರ ಮಹಿಳೆಯರು ಈ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. ಆದರೆ ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮೀ ಯೋಜನೆಯ ಹಣ ಪಾವತಿಯಾಗಿಲ್ಲ.
ಇದನ್ನೂ ಓದಿ : ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸಿಗಲಿದೆ 5 ಲಕ್ಷ ರೂ. ಯೋಜನೆ : ಅರ್ಜಿ ಸಲ್ಲಿಸುವುದು ಹೇಗೆ ?
ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಗೃಹಲಕ್ಷ್ಮೀ ಯೋಜನೆಯ ಕುರಿತು ಸಾಕಷ್ಟು ಅಪಸ್ವರ ಕೇಳಿಬಂದಿತ್ತು. ಗ್ಯಾರಂಟಿ ಯೋಜನೆಗಳನ್ನು ರಾಜ್ಯ ಸರಕಾರ ಸ್ಥಗಿತಗೊಳಿಸಲಿದೆ ಎನ್ನಲಾಗುತ್ತಿದೆ. ಆದರೆ ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಯಾವುದೇ ಕಾರಣಕ್ಕೂ ಗೃಹಲಕ್ಷ್ಮೀ ಯೋಜನೆಯನ್ನು ರದ್ದುಪಡಿಸೋದೇ ಇಲ್ಲ ಎಂದು ಸ್ಪಷ್ಟನೆಯನ್ನು ಕೊಟ್ಟಿದ್ದಾರೆ.

ಕಳೆದ ಎರಡು ತಿಂಗಳಿನಿಂದ ಗೃಹಿಣಿಯರ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಪಾವತಿಯಾಗಿಲ್ಲ. ಅದರೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿರುವ ಮಾಹಿತಿಯ ಪ್ರಕಾರ, ಬಾಕಿ ಉಳಿದಿರುವ ಎರಡು ತಿಂಗಳ ಹಣವು ಒಟ್ಟಿಗೆ ಜಮೆ ಆಗಲಿದೆ. ಗೃಹಿಣಿರಿಗೆ ಒಟ್ಟಿಗೆ 4000 ರೂಪಾಯಿ ನೇರ ವರ್ಗಾವಣೆ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಇದನ್ನೂ ಓದಿ : Nandini milk price hike : ಕರ್ನಾಟಕದಲ್ಲಿ ಹಾಲಿನ ದರ 2 ರೂ. ಏರಿಕೆ ಫಿಕ್ಸ್ ! ಗ್ರಾಹಕರಿಗೆ ನಂದಿನಿ ಬರೆ
Good News for Gruha Lakshmi Beneficiaries Kannada News