ಸಂಕ್ರಾಂತಿಗೆ ಗುಡ್ ನ್ಯೂಸ್ ಕೊಟ್ಟ ಬಂಗಾರ : ಒಂದೇ ದಿನ ಕುಸಿಯಿತು ಚಿನ್ನ, ಬೆಳ್ಳಿಯ ದರ

ಬೆಂಗಳೂರು : ಸಂಕ್ರಾಂತಿಯ ದಿನವೂ ಚಿನಿವಾರು ಮಾರುಕಟ್ಟೆಯಲ್ಲಿ ಚಿನ್ನದ ದರ ಆಭರಣ ಪ್ರಿಯರಿಗೆ ಗುಡ್ ನ್ಯೂಸ್ ಕೊಟ್ಟಿದೆ. 24 ಕ್ಯಾರೆಟ್ ಚಿನ್ನದ ದರದಲ್ಲಿ 500 ರೂಪಾಯಿ ಇಳಿಕೆ ಕಂಡಿದ್ದರೆ, ಬೆಳ್ಳಿಯ ದರವೂ ಭಾರೀ ಕುಸಿತವನ್ನು ಕಂಡಿದೆ.

ಕೊರೊನಾ ವೈರಸ್ ಸೋಂಕಿನ ಆರ್ಭಟದ ನಡುವಲ್ಲೇ ಚಿನ್ನದ ದರದಲ್ಲಿ ಭಾರೀ ಏರಿಕೆಯಾಗಿತ್ತು. ಒಂದು ಹಂತದಲ್ಲಿ ಚಿನ್ನದ ದರ 70 ಸಾವಿರಕ್ಕೆ ಏರಿಕೆಯಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದರು. ಆದರೆ ಚಿನಿವಾರು ಮಾರುಕಟ್ಟೆ ಎಲ್ಲರ ಲೆಕ್ಕಾಚಾರವನ್ನೂ ಬುಡಮೇಲು ಮಾಡಿದೆ. ಕಳೆದ ನಾಲ್ಕು ದಿನಗಳಿಂದಲೂ ಚಿನ್ನಾಭರಣದ ದರದಲ್ಲಿ ಇಳಿಕೆಯಾಗುತ್ತಲೇ ಇದೆ. ಕಳೆದ 5 ದಿನಗಳಿಂದ ಲೂ 49 ಸಾವಿರ ರೂಪಾಯಿ ಆಸುಪಾಸಿನಲ್ಲಿಯೇ ಚಿನ್ನಾಭರಣ ಮಾರಾಟವಾಗುತ್ತಿದೆ. 24 ಕ್ಯಾರೆಟ್ ಚಿನ್ನದ ದರದಲ್ಲಿ 500 ರೂಪಾಯಿ ಇಳಿಕೆಯನ್ನು ಕಂಡು 10 ಗ್ರಾಮ ಚಿನ್ನ 49,900ಕ್ಕೆ ತಲುಪಿದೆ. ಬೆಂಗಳೂರಲ್ಲಿ 22 ಕ್ಯಾರೆಟ್ ಚಿನ್ನದ ದರ 45,750ರೂಪಾಯಿಗೆ ಇಳಿಕೆಯಾಗಿದೆ.

ಇನ್ನು ಬೆಳ್ಳಿ ದರದಲ್ಲಿಯೂ ಇಳಿಕೆಯನ್ನು ಕಂಡಿದ್ದು, ಒಂದು ಕೆ.ಜಿ. ಬೆಳ್ಳಿಯ ದರದ 66 ಸಾವಿರಕ್ಕೆ ಇಳಿಕೆಯಾಗಿದೆ. ಚಿನ್ನದ ಬೆಲೆ ನಗರದಿಂದ ನಗರಕ್ಕೆ ವ್ಯತ್ಯಾಸವಾಗಿದ್ದು, ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ.

ಇನ್ನು ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಈ ನಗರಗಳಲ್ಲಿ ಚಿನ್ನದ ಬೆಲೆ 52 ಸಾವಿರದ ಗಡಿ ದಾಟಿದೆ.

Comments are closed.