ಹಿಮಾಚಲ ಪ್ರದೇಶ: ಹೆಣ್ಣು ಭ್ರೂಣ ಹತ್ಯೆ ತಡೆಯುವ ಸಲುವಾಗಿ ಒಂದು ಹೆಣ್ಣು ಮಗುವನ್ನು ಹೊಂದಿರುವ ಪೋಷಕರಿಗೆ (Parents Of Single Girl Child) 2 ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡುವುದಾಗಿ ರಾಜ್ಯ ಸರಕಾರ ಘೋಷಣೆ ಮಾಡಿದೆ. ಅಲ್ಲದೇ ಎಡು ಹಣ್ಣು ಮಗು ಜನಿಸಿದ ನಂತರ ಕುಟುಂಬ ಯೋಜನೆಗೆ ಒಳಪಡುವ ದಂಪತಿಗಳಿಗೆ 1 ಲಕ್ಷ ರೂಪಾಯಿ ಸಹಾಯಧನ ನೀಡುವುದಾಗಿಯೂ ಘೋಷಣೆ ಮಾಡಿದೆ.
ಇಂದಿರಾಗಾಂಧಿ ಬಾಲಿಕಾ ಯೋಜನೆಯ (Indira Gandhi Balika Yojana) ಅಡಿಯಲ್ಲಿ ಇದುವರೆಗೆ ಒಬ್ಬಂಟಿ ಹೆಣ್ಣು ಮಗುವನ್ನು ಹೊಂದಿರುವ ಪೋಷಕರಿಗೆ 35 ಸಾವಿರ ರೂಪಾಯಿ ಸಹಾಯಧನವನ್ನು ನೀಡಲಾಗುತ್ತಿತ್ತು. ಈ ಪ್ರೋತ್ಸಾಹ ಧನವನ್ನು 2 ಲಕ್ಷಕ್ಕೆ ಏರಿಕೆ ಮಾಡಲಾಗಿದೆ ಎಂದು ಹಿಮಾಚಲ ಪ್ರವೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖ್ (Himachal Pradesh Chief Minister Sukhvinder Singh Sukhkhu) ಘೋಷಣೆ ಮಾಡಿದ್ದಾರೆ.
ಹಿಮಾಚಲ ಪ್ರದೇಶದ ಚಂಬಾ, ಶಿಮ್ಲಾ, ಮಂಡಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಉತ್ತಮ ಲಿಂಗ ಅನುಪಾತವನ್ನು ಕಾಯ್ದುಕೊಳ್ಳುವ ಸಲುವಾಗಿ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈಗಾಗಲೇ ಇಂದಿರಾಗಾಂಧಿ ಬಾಲಿಕಾ ಯೋಜನೆ ರಾಜ್ಯದಲ್ಲಿ ಜಾರಿಯಲ್ಲಿದ್ದು, ಇದೀಗ ಸಹಾಯಧನದ ಮೊತ್ತವನ್ನು ಏರಿಕೆ ಮಾಡಲಾಗಿದೆ.

ಕೇವಲ ಒಂದು ಮಗುವನ್ನು ಹೊಂದಿರುವ ಪೋಷಕರನ್ನು ಪ್ರೋತ್ಸಾಹಿಸುವುದು ಮಾತ್ರಲ್ಲ ಈಗಾಗಲೇ ಎರಡು ಹೆಣ್ಣು ಮಕ್ಕಳನ್ನು ಹೊಂದಿದ್ದು, ಮತ್ತೊಂದು ಮಗು ಬೇಡಾ ಅಂತಾ ಕುಟುಂಬ ಯೋಜನೆಯನ್ನು ಅಳವಡಿಸಿಕೊಳ್ಳುವ ಪೋಷಕರಿಗೆ 1ಲಕ್ಷ ರೂಪಾಯಿ ಪ್ರೋತ್ಸಾಹ ಧನವನ್ನು ನೀಡಲಾಗುತ್ತಿದೆ. ಈ ಮೂಲಕ ಫ್ಯಾಮಿಲಿ ಫ್ಲ್ಯಾನಿಂಗ್‌ಗೆ ಉತ್ತಮ ಯೋಜನೆಯನ್ನು ಸರಕಾರ ಹಾಕಿಕೊಂಡಿದೆ.
ಇದನ್ನೂ ಓದಿ : ಹೊಸ ರೇಷನ್ ಕಾರ್ಡ್ : ರೇಷನ್ ಕಾರ್ಡ್ ತಿದ್ದುಪಡಿಗೆ ಈ ದಾಖಲೆಗಳು ಕಡ್ಡಾಯ
ಈಗಾಗಲೇ ಹಿಮಾಚಲ ಪ್ರದೇಶದಲ್ಲಿ ಈ ವಿಶಿಷ್ಟ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಹೆಣ್ಣು ಭ್ರೂಣ ಹತ್ಯೆಯನ್ನು ತಡೆಯುವಲ್ಲಿ ಸರಕಾರ ಯಶಸ್ವಿಯಾಗಿದೆ. ಸದ್ಯ ಲಿಂಗ ಅನುಪಾತವೂ ಕೂಡ ಸುಧಾರಣೆಯನ್ನು ಕಂಡಿದೆ ಎಮದು ಮುಖ್ಯಮಂತ್ರಿಗಳು ಮಾಹಿತಿಯನ್ನು ನೀಡಿದ್ದಾರೆ.
ಇನ್ನು ಕರ್ನಾಟಕದಲ್ಲಿನ ಕಾಂಗ್ರೆಸ್ ಸರಕಾರ ಹಲವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಅದ್ರಲ್ಲೂ ಅನ್ನಭಾಗ್ಯ ಯೋಜನೆಯ ಮೂಲಕ ಹತ್ತು ಕೆಜಿ ಅಕ್ಕಿಯನ್ನು ಪ್ರತಿಯೊಬ್ಬರಿಗೂ ನೀಡುವುದಾಗಿ ಸರಕಾರ ಘೋಷಣೆ ಮಾಡಿತ್ತು. ಅಕ್ಕಿ ಸಿಗದ ಹಿನ್ನೆಲೆಯಲ್ಲಿ ಹಣವನ್ನು ಪಡಿತರ ಚೀಟಿದಾರರ ಕುಟುಂಬದ ಮುಖ್ಯಸ್ಥರ ಖಾತೆಗೆ ವರ್ಗಾವಣೆ ಮಾಡಿತ್ತು.

ಆದರೆ ಕಳೆದ ತಿಂಗಳು ಕೆಲವು ಸದಸ್ಯರ ಖಾತೆಗಳಿಗೆ ಹಣ ವರ್ಗಾವಣೆ ಆಗಿರಲಿಲ್ಲ. ಆದ್ರೀಗ ಸರಕಾರ ಈ ಬಾರಿ ಅನ್ನಭಾಗ್ಯ ಹಣ ಜಮೆ ಆಗದವರ ಖಾತೆಗಳಿಗೆ ನೇರವಾಗಿ ಹಣ ವರ್ಗಾವಣೆ ಆಗಲಿದೆ ಎಂದು ತಿಳಿಸಿದೆ. ಸದ್ಯ ರಾಜ್ಯ ಸರಕಾರ ಅನ್ನಭಾಗ್ಯ ಯೋಜನೆಯಡಿಯಲ್ಲಿ ಅಕ್ಕಿ ಬದಲು ಹಣವನ್ನು ಪಡೆಯುವ ಫಲಾನುಭವಿಗಳ ಪಟ್ಟಿಯನ್ನು ಪ್ರಕಟಿಸಿದೆ.
ಇದನ್ನೂ ಓದಿ : ಅಂಗನವಾಡಿ ಕೇಂದ್ರಕ್ಕೆ ದಿಢೀರ್ ಭೇಟಿ : ಮಕ್ಕಳ ದುಸ್ಥಿತಿ ಕಂಡು ಮರುಗಿದ ನ್ಯಾಯಾಧೀಶೆ ಅರುಣಾ ಕುಮಾರಿ
ಹೆಚ್ಚಿನ ಮಾಹಿತಿಗಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್‌ಸೈಟ್ https://ahara.kar.nic.in/ ನಲ್ಲಿ ಪಡಿತರ ಚೀಟಿಯ ಸ್ಟೇಟಸ್ ಪರಿಶೀಲನೆ ಮಾಡಬಹುದಾಗಿದೆ. ಇನ್ನು ಗೃಹಲಕ್ಷ್ಮೀ ಯೋಜನೆಯ ಮೂಲಕ ರಾಜ್ಯ ಸರಕಾರ 2000 ರೂಗಳನ್ನು ಪ್ರತೀ ಕುಟುಂಬದ ಯಜಮಾನಿಯ ಖಾತೆಗೆ ವರ್ಗಾವಣೆ ಮಾಡುತ್ತಿದೆ. ಎಪಿಎಲ್, ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡುದಾರರ ಖಾತೆಗಳಿಗೆ ನೇರವಾಗಿ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ.
Govt New Scheme Parents Of Single Girl Child Will Get Rs 2 Lakh Himachal Pradesh