ಬೆಂಗಳೂರು : ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಕರ್ನಾಟಕದ ಕಾಂಗ್ರೆಸ್ ಸರಕಾರ (karntaka Government) ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದು. ಆದರೆ ಯೋಜನೆ ಆರಂಭಗೊಂದು ಎರಡು ತಿಂಗಳು ಕಳೆದರೂ ಕೂಡ ಕರ್ನಾಟಕದಲ್ಲಿ 10 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಭಾಗ್ಯ ಇನ್ನೂ ಸಿಕ್ಕಿಲ್ಲ. ಇದರಿಂದಾಗಿ ಗೃಹಿಣಿಯರು ಪದೇ ಪದೇ ಅರ್ಜಿ ಸಲ್ಲಿಸಿದ್ದು, ಬೇಸತ್ತು ಹೋಗಿದ್ದಾರೆ.
ಗೃಹಲಕ್ಷ್ಮೀ ಯೋಜನೆಯ (Gruha Lakshmi Scheme) ಅಡಿಯಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದವರ ಪೈಕಿ ಇದುವರೆಗೆ ಒಟ್ಟು 9,44,155 ಅರ್ಜಿದಾರರ ಬ್ಯಾಂಕ್ ಖಾತೆಗೆ ಇನ್ನೂ ಹಣ ಜಮೆ ಆಗಿಲ್ಲ. ಅದ್ರಲ್ಲೂ 3082 ಅರ್ಜಿದಾರರು ಮೃತಪಟ್ಟಿದ್ದು, ಅವರ ಹೆಸರಲ್ಲಿ ಅರ್ಜಿಯನ್ನು ಸಲ್ಲಿಕೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಅಂತಹ ಅರ್ಜಿಗಳು ಅನರ್ಹವಾಗಿವೆ.

ಇನ್ನು 1,59,356 ಅರ್ಜಿದಾರರ ಆಧಾರ್ ಮತ್ತು ಬ್ಯಾಂಕ್ ಖಾತೆಗೆ ನೀಡಿರುವ ಹೆಸರಿನಲ್ಲಿ ವ್ಯತ್ಯಾಸಗಳು ಕಂಡು ಬಂದಿವೆ. ಇನ್ನು 5,96,268 ಫಲಾನುಭವಿಗಳು ತಮ್ಮ ಖಾತೆಯನ್ನು ಆಧಾರ್ ಜೊತೆಗೆ ಲಿಂಕ್ ಮಾಡಿಲ್ಲ. ಇನ್ನು ಅರ್ಜಿದಾರರ ಪೈಕಿ 1,75,683 ಫಲಾನುಭವಿಗಳ ಹೆಸರು ಮತ್ತು ವಿಳಾಸ ವಿಭಿನ್ನವಾಗಿದೆ.
ಇದನ್ನೂ ಓದಿ : ಸರಕಾರದ ಹೊಸ ರೂಲ್ಸ್ : ನವೆಂಬರ್ 1 ರಿಂದ ಬದಲಾಗಲಿದೆ ಈ ನಾಲ್ಕು ನಿಯಮ
ಹೀಗಾಗಿ ನಾನಾ ಕಾರಣಗಳಿಂದಾಗಿ ಕರ್ನಾಟಕ ರಾಜ್ಯದ ಸುಮಾರು 9.44 ಲಕ್ಷಕ್ಕೂ ಅರ್ಜಿದಾರರಿಗೆ ಇನ್ನೂ ಗೃಹಲಕ್ಷ್ಮೀ ಯೋಜನೆಯ ಲಾಭ ಸಿಕ್ಕಿಲ್ಲ. ಅಲ್ಲದೇ ಹಲವು ಅರ್ಜಿದಾರರು ಸಲ್ಲಿಸಿದ್ದ ಅರ್ಜಿಯಲ್ಲಿ ಯಾವುದೇ ದೋಷಗಳಿಲ್ಲ. ಆದರೂ ಆದರೂ ಕೂಡ ಅಂತಹಾ ಗೃಹಿಣಿಯರ ಖಾತೆಗಳಿಗೆ 2000 ರೂಪಾಯಿಯನ್ನು ವರ್ಗಾವಣೆ ಮಾಡಿಲ್ಲ.
ಜುಲೈ ತಿಂಗಳಿನಲ್ಲಿ ಕರ್ನಾಟಕ ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆಗೆ ನೋಂದಣಿಯನ್ನು ಆರಂಭಿಸಲಾಗಿತ್ತು. ಆದರೆ ಆರಂಭದಿಂದಲೂ ಗೃಹಿಣಿಯರು ಅರ್ಜಿಸಿದ ಬಳಿಕ ಒಂದಿಲ್ಲೊಂದು ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಲೇ ಇದೆ. ಕೆಲವರು ಎರಡು ಮೂರು ಬಾರಿ ಅರ್ಜಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ ಎಂಬ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಇದನ್ನೂ ಓದಿ : 3.26 ಲಕ್ಷ ರೇಷನ್ ಕಾರ್ಡ್ ರದ್ದು ! ರಾತ್ರೋ ರಾತ್ರಿ ಜಾರಿಯಾಯ್ತು ಹೊಸ ರೂಲ್ಸ್
ಆದರೆ ರಾಜ್ಯ ಸರಕಾರ ಈ ಕುರಿತು ಸ್ಪಷ್ಟನೆಯನ್ನು ನೀಡಿದೆ. ಯಾವ ಕಾರಣಕ್ಕೆ ಈ ಬಾರಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಗೃಹಿಣಿಯರು ಪಡೆಯಲು ಸಾಧ್ಯವಾಗಿಲ್ಲೆ ಎಂಬ ಮಾಹಿತಿಯನ್ನು ನೀಡಿದೆ. ಕರ್ನಾಟಕದಲ್ಲಿ ಈಗಾಗಲೇ ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಎರಡು ತಿಂಗಳ ಹಣವನ್ನು ಜಮೆ ಮಾಡಲಾಗಿದೆ.

ಪಡಿತರ ಚೀಟಿಯಲ್ಲಿನ ಲೋಪದೋಷಗಳನ್ನು ಪರಿಹಾರ ಮಾಡಿಕೊಳ್ಳುವ ಸಲುವಾಗಿ ರಾಜ್ಯ ಸರಕಾರ ಹಲವು ಬಾರಿ ಅವಕಾಶಗಳನ್ನು ನೀಡಿದೆ. ಆದರೆ ಕೆಲವು ಮಹಿಳೆಯರು ಲೋಪದೋಷಗಳನ್ನು ಸರಿಪಡಿಸಿಕೊಂಡಿಲ್ಲ. ಇನ್ನೂ ಕೆಲವು ಮಹಿಳೆಯರು ಸರಿಯಾದ ಅರ್ಜಿ ಸಲ್ಲಿಕೆ ಮಾಡಿದ್ರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ ಅನ್ನೋ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಇದನ್ನೂ ಓದಿ : ಸರಕಾರಿ ನೌಕರರಿಗೆ ದಸರಾ ಗಿಫ್ಟ್ : ಡಿಎ ಹೆಚ್ಚಿಸಿದ ರಾಜ್ಯ ಸರಕಾರ, ವೇತನದಲ್ಲಿ ಎಷ್ಟು ಏರಿಕೆ ?
ಬ್ಯಾಂಕ್‌ಗಳಲ್ಲಿ ಖಾತೆಯನ್ನು ತೆರೆದಿರುವ ಮಹಿಳೆಯರು ತಮ್ಮ ಖಾತೆಯನ್ನು ಇ ಕೆವೈಸಿ ಮಾಡುವುದನ್ನು ಮರೆತಿದ್ದಾರೆ. ಕೆಲವರು ಆಧಾರ್ ಸೀಡಿಂಗ್ ಮಾಡಿಸಿಲ್ಲ. ಜೊತೆಗೆ ಅಂಚೆ ಕಚೇರಿಯಲ್ಲಿ ಕೆಲವರು ಖಾತೆಯನ್ನು ತೆರೆದಿದ್ದು, ತಮ್ಮ ಖಾತೆಯನ್ನು ಆಧಾರ್ ಕಾರ್ಡ್ ಜೊತೆಗೆ ಲಿಂಕ್ ಮಾಡಿಸಿಲ್ಲ. ಜೊತೆಗೆ ಪಡಿತರ ಕಾರ್ಡ್ ಜೊತೆಗೆ ಆಧಾರ್ ಲಿಂಕ್ ಮಾಡದೇ ಇದ್ದರೂ ಗೃಹಲಕ್ಷ್ಮೀ ಯೋಜನೆಯ ಲಾಭ ಸಿಗುವುದಿಲ್ಲ.
Gruha Lakshmi Scheme is not for 10 lakh women in Karnataka