Gruha Lakshmi Scheme : ಕರ್ನಾಟಕ ಸರಕಾರ ಗೃಹಲಕ್ಷ್ಮೀ ಯೋಜನೆಯ ಮೂಲಕ ಪ್ರತೀ ಕುಟುಂಬದ ಯಜಮಾನಿಯ ಖಾತೆಗೆ ಪ್ರತೀ ತಿಂಗಳು 2000 ರೂಪಾಯಿ ಹಣವನ್ನು ಜಮೆ ಮಾಡುತ್ತಿದೆ. ರಾಜ್ಯದಲ್ಲಿ 1.21 ಕೋಟಿ ಮಹಿಳಾ ಫಲಾನುಭವಿಗಳು ಈಗಾಗಲೇ ಗೃಹಲಕ್ಷ್ಮೀ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. ಈ ನಡುವಲ್ಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Minister Lakshmi Hebbalkar) ಮತ್ತೊಂದು ಗುಡ್‌ನ್ಯೂಸ್ ಕೊಟ್ಟಿದ್ದಾರೆ.

ಕರ್ನಾಟಕದಲ್ಲಿ ಒಟ್ಟು 2 ಸಾವಿರ ಕೋಟಿ ರೂಪಾಯಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಪ್ರತೀ ತಿಂಗಳು ವರ್ಗಾವಣೆ ಆಗುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳಿನಲ್ಲಿ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದೆ. ಈಗಾಗಲೇ 6 ಕಂತುಗಳ ಮೂಲಕ ಸುಮಾರು 12,000 ರೂಪಾಯಿ ಹಣವನ್ನ ಪ್ರತೀ ಕುಟುಂಬದ ಮಹಿಳೆಯರು ಪಡೆದುಕೊಂಡಿದ್ದಾರೆ.
ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಯಶವಂತರಾಯ ಗೌಡ ಪಾಟೀಲ್ ಅವರು ಕೇಳಿದ ಪ್ರಶ್ನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉತ್ತರವನ್ನು ನೀಡಿದ್ದಾರೆ. ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ ಎಲ್ಲಾ ಮಹಿಳೆಯರಿಗೂ ಕೂಡ ಗೃಹಲಕ್ಷ್ಮೀ ಯೋಜನೆಯ ಪ್ರಯೋಜನ ಸಿಕ್ಕಿಲ್ಲ. ಇದರಿಂದಾಗಿ ಮಹಿಳೆಯರು ಇಲಾಖೆಗಳಿಗೆ ಅಲೆದು ಅಲೆದು ಸುಸ್ತಾಗಿದ್ದರು. ಈ ಕುರಿತು ರಾಜ್ಯದಲ್ಲಿ 8.20 ಲಕ್ಷ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಯೋಜನೆ ನಗದು ಪಾವತಿ ಬಾಕಿ ಇದೆ ಎಂದಿದ್ದಾರೆ.
ಇದನ್ನೂ ಓದಿ : ಬ್ಯಾಂಕ್ ಗ್ರಾಹರಿಕೆ ಎಚ್ಚರಿಕೆಕೊಟ್ಟ RBI : ಬ್ಯಾಂಕ್ ಖಾತೆ ಹೊಂದಿರುವ ಪ್ರತಿಯೊಬ್ಬರೂ ಈ ಸ್ಟೋರಿಯನ್ನು ತಪ್ಪದೇ ಓದಿ
ಪ್ರತೀ ತಿಂಗಳ 15 ನೇ ತಾರೀಕಿನ ಬಳಿಕ ಫಲಾನುಭವಿಗಳ ಖಾತೆಗೆ ಹಣವನ್ನು ಪಾವತಿ ಮಾಡಲಾಗುತ್ತದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗೃಹಲಕ್ಷ್ಮೀ ಯೋಜನೆಗೆ ನೋಂದಾವಣೆ ಮಾಡಿಕೊಂಡಿರುವ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಆಧಾರ್ ನೋಂದಣಿಯಾಗಿಲ್ಲ. ಇನ್ನು ಕೆಲವರು ಈಕೆವೈಸಿ ಮಾಡಿಸಿಲ್ಲ. ಇದೇ ಕಾರಣದಿಂದಲೇ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ್ದರೂ ಕೂಡ ಕೆಲವೊಬ್ಬರ ಖಾತೆಗೆ ಹಣ ವರ್ಗಾವಣೆ ಆಗಿರಲಲ್ಲ ಎಂದಿದ್ದಾರೆ.

ಇಷ್ಟೇ ಅಲ್ಲದೇ ಕೆಲವೊಂದು ಕುಟುಂಬಗಳು ರೇಷನ್ ಕಾರ್ಡ್‌ನಲ್ಲಿ ಯಜಮಾನ ಇರುವ ಸ್ಥಾನದಲ್ಲಿ ಯಜಮಾನಿಯಾಗಿ ತಿದ್ದುಪಡಿ ಮಾಡಿಕೊಂಡಿದ್ದವು. ಇಂತಹ ಹಲವು ಮಹಿಳೆಯರಿಗೆ ಹಣ ವರ್ಗಾವಣೆ ಆಗಿಲ್ಲ. ಹೀಗಾಗಿ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಪರಿಹಾರ ಮಾಡಿಕೊಂಡು ಅತೀ ಶೀಘ್ರದಲ್ಲಿಯೇ ಎಲ್ಲರ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ : ಕೇವಲ 50 ರೂ.ಹೂಡಿಕೆ ಮಾಡಿದ್ರೆ 35 ಲಕ್ಷ ರೂ. ಸಿಗುತ್ತೆ : ಅಂಚೆ ಇಲಾಖೆ ಗ್ರಾಮ ಸುರಕ್ಷಾ ಯೋಜನೆ
ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಎದುರಾಗಿರುವ ತಾಂತ್ರಿಕ ಸಮಸ್ಯೆಗಳನ್ನು ಪರಿಹಾರ ಮಾಡಲು ಇಲಾಖೆ ಈಗಾಗಲೇ ಎರಡು ಬಾರಿ ಅದಾಲತ್ ನಡೆಸಿತ್ತು. ಮನೆ ಮನೆಗೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಕಳುಹಿಸಿ ಸಮಸ್ಯೆ ಪರಿಹಾರ ಮಾಡುವ ಕಾರ್ಯವನ್ನು ಮಾಡಿತ್ತು. ಆದರೂ ಕೂಡ ಇದುವರೆಗೂ ಲಕ್ಷಾಂತರ ಮಂದಿಯ ಖಾತೆಗೆ ಇಂದಿಗೂ ಗೃಹಲಕ್ಷ್ಮೀ ಯೋಜನೆಯ ಜಮೆ ಆಗಿಲ್ಲ.

Gruha Lakshmi Scheme Karnataka Minister Lakshmi Hebbalkar gave Good News