ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯನ್ನು(Gruha Lakshmi Scheme) ಕರ್ನಾಟಕ ಸರಕಾರ (Karnataka Governament) ಯಶಸ್ವಿಯಾಗಿ ಜಾರಿಗೊಳಿಸಿದೆ. ಈಗಾಗಲೇ ಲಕ್ಷಾಂತರ ಗೃಹಿಣಿಯರು ಎರಡು ಕಂತಿನ ಹಣವನ್ನು ಪಡೆದುಕೊಂಡಿದ್ದಾರೆ. ಆದ್ರೆ ಮುಂದಿನ ತಿಂಗಳು ಗೃಹಲಕ್ಷ್ಮೀ ಯೋಜನೆಯ ಹಣವನ್ನು ಪಡೆಯಬೇಕಾದ್ರೆ ಕಡ್ಡಾಯವಾಗಿ ಈ ನಾಲ್ಕು ದಾಖಲೆಗಳನ್ನು ನೀವು ಸಲ್ಲಿಸಬೇಕು.
ಕರ್ನಾಟಕ ಸರಕಾರ ಈಗಾಗಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ ಕರ್ನಾಟಕದಲ್ಲಿರುವ ಪ್ರತೀ ಮನೆಯ ಯಜಮಾನಿಯ ಬ್ಯಾಂಕ್ ಖಾತೆಗೆ ಪ್ರತೀ ತಿಂಗಳು ೨೦೦೦ ರೂಪಾಯಿ ವರ್ಗಾಯಿಸಲಾಗುತ್ತದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಈ ಯೋಜನೆ ರಾಜ್ಯದಲ್ಲಿ ಜಾರಿಗೆ ಬಂದಿದೆ. ಈ ಯೋಜನೆಯ ಮೂಲಕ ಈಗಾಗಲೇ ಗೃಹಣಿಯರ ಬ್ಯಾಂಕ್ ಖಾತೆಗೆ ೪೦೦೦ ರೂಪಾಯಿ ಹಣವನ್ನು ವರ್ಗಾವಣೆ ಮಾಡಲಾಗಿದೆ. ಆದರೆ ಯೋಜನೆಗೆ ಅರ್ಜಿ ಸಲ್ಲಿಸಿದ ಲಕ್ಷಾಂತರ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಇನ್ನೂ ಸಿಕ್ಕಿಲ್ಲ.
ಇದೀಗ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿ ಇದುವರೆಗೂ ಹಣ ಪಡೆಯದೇ ಇರುವವರು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ (ಸಿಡಿಪಿಒ) ಅವರಿಗೆ ಕೂಡಲೇ ಈ 4 ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗಿದೆ. ಗೃಹ ಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಲು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಪಡಿತರ ಚೀಟಿ ಮತ್ತು ಅರ್ಜಿ ಸ್ವೀಕೃತಿ ಪತ್ರದ ಪ್ರತಿಯನ್ನು ಒದಗಿಸಬೇಕಾಗಿದೆ.
ಇದನ್ನೂ ಓದಿ : ಬಿಪಿಎಲ್ ಕಾರ್ಡ್‌ದಾರರಿಗೆ ಗುಡ್‌ನ್ಯೂಸ್ : ಅನ್ನಭಾಗ್ಯ ಬೆನ್ನಲ್ಲೇ ಸರಕಾರದಿಂದ ಮತ್ತೊಂದು ಯೋಜನೆ
ಈ ನಾಲ್ಕು ದಾಖಲೆಗಳನ್ನು ಸಿಡಿಪಿಓ ಅವರಿಗೆ ಸಲ್ಲಿಕೆ ಮಾಡಿದ್ರೆ ನಿಮಗೆ ಯಾವ ಕಾರಣಕ್ಕೆ ಈ ಗೃಹಲಕ್ಷ್ಮೀ ಹಣ ಬಂದಿಲ್ಲ ಅನ್ನುವ ಕುರಿತು ಮಾಹಿತಿ ಯನ್ನು ನೀಡುತ್ತಾರೆ. ರಾಜ್ಯದಲ್ಲಿ ಮಹಿಳೆಯರನ್ನು ಸ್ವಾವಲಂಭಿಗಳನ್ನಾಗಿ ಮಾಡಲು ಸರಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ. ಪ್ರತೀ ಕುಟುಂಬದ ಮುಖ್ಯಸ್ಥರು ಪ್ರತೀ 2,000 ರೂ.DBT ಮೂಲಕ ನೋಂದಾಯಿತ ಬ್ಯಾಂಕ್ ಖಾತೆಗೆ ಹಣವನ್ನು ಪಡೆಯಲಿದ್ದಾರೆ.

ರಾಜ್ಯ ಸರಕಾರ ಗೃಹಲಕ್ಷ್ಮೀ ಯೋಜನೆಯ ಲಾಭವನ್ನು ಪಡೆಯಲು ಪಡಿತರ ಚೀಟಿಗೆ KYC ಮಾಡಿಸುವುದ್ನು ಕಡ್ಡಾಯಗೊಳಿಸಿದೆ. ನೀವು ಹತ್ತಿರದ ನ್ಯಾಯಬೆಲೆ ಅಂಗಡಿಗೆ ತೆರಳಿ ಕೆವೈಸಿ ಮಾಡಿಸಿಕೊಳ್ಳಬಹುದಾಗಿದೆ. ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿ ಮೊದಲ ಕಂತು ಪಡೆಯದ ಫಲಾನುಭವಿಗಳು ತಮ್ಮ ಇ೦ಕೆವೈಸಿ ಮತ್ತು ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗಳಿಗೆ ಲಿಂಕ್ ಮಾಡಬೇಕು.
ಇದನ್ನೂ ಓದಿ : ಸರಕಾರಿ ಉದ್ಯೋಗಿಗಳ ವಿವಾಹಕ್ಕೆ ಸರಕಾರ ಅನುಮತಿ ಕಡ್ಡಾಯ : ವಿಚ್ಚೇಧನ ನೀಡಿದ್ರೂ ಇಲ್ಲ 2ನೇ ಮದುವೆ ಅವಕಾಶ
ರಾಜ್ಯ ಸರಕಾರದ ಮಹತ್ವಾಕಾಂಕ್ಷಿಯ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಗೆ ನೋಂದಣಿಯಾದ 10 ಲಕ್ಷಕ್ಕೂ ಅಧಿಕ ಮಹಿಳೆಯರಿಗೆ ಸರಕಾರ ಇದುವರೆಗೂ ಹಣ ವರ್ಗಾವಣೆ ಮಾಡಿಲ್ಲ. ಆದರೆ ಅರ್ಜಿ ಸಲ್ಲಿಸಿದವರ ಪೈಕಿ ಬಹುತೇಕರ ಅರ್ಜಿಯಲ್ಲಿ ಯಾವುದೇ ದೋಷಗಳು ಕಂಡು ಬಂದಿಲ್ಲ. ಆದರೂ ಕೂಡ ಯೋಜನೆಯ ಲಾಭ ಸಿಕ್ಕಿಲ್ಲ.
ಇದನ್ನೂ ಓದಿ : ನೀವು ಬಿಪಿಎಲ್ ಕಾರ್ಡ್ ಹೊಂದಿದ್ದೀರಾ ? ಜೊತೆಗೆ ಕಾರು ಇದ್ಯಾ ? ಹಾಗಾದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
ಇನ್ನು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿ ಹಣ ಜಮೆ ಆಗದೇ ಇರುವ ಮಹಿಳೆಯರು ಇದೀಗ ರಾಜ್ಯ ಸರಕಾರದ ವಿರುದ್ದ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಆದರೆ ರಾಜ್ಯ ಸರಕಾರದ ಅಧಿಕಾರಿಗಳು ಎಲ್ಲಾ ದಾಖಲೆಗಳು ಸರಿಯಾಗಿದ್ದರೂ ಕೂಡ ತಾಂತ್ರಿ ದೋಷ, ತಪ್ಪು ದಾಖಲೆಗಳ ನೆಪ ಹೇಳುತ್ತಿದ್ದಾರೆ ಎಂದು ಮಹಿಳೆಯರು ಆರೋಪಿಸುತ್ತಿದ್ದಾರೆ.
Gruha Lakshmi Scheme Submission of these 4 documents is mandatory to get the next installment