business

ತೆಲಂಗಾಣ ಬೆನ್ನಲ್ಲೇ ಕರ್ನಾಟಕದಲ್ಲೂ ರದ್ದಾಗುತ್ತಾ ಗೃಹಲಕ್ಷ್ಮೀ ಯೋಜನೆ ? ರಾಜ್ಯ ಸರಕಾರದಿಂದ ಮಹತ್ವದ ಆದೇಶ

Published by
Kannada News Next Desk

Gruha Lakshmi Yojana Canceled In Karnataka : ತೆಲಂಗಾಣ ಸರಕಾರ ಗೃಹಲಕ್ಷ್ಮೀ ಯೋಜನೆಯನ್ನು ರದ್ದುಗೊಳಿಸಿದೆ. ಬಿಆರ್‌ಎಸ್‌ ಸರಕಾರ ಹೊರಡಿಸಿರುವ ಮಹತ್ವಾಕಾಂಕ್ಷಿಯ ಗೃಹಲಕ್ಷ್ಮೀ ಯೋಜನೆಯನ್ನು ರದ್ದುಗೊಳಿಸಿದ್ದು, ಅದರ ಬದಲಾಗಿ ಅಭಯ ಹಸ್ತಂ ( ಇಂದಿರಮ್ಮ ಮನೆ) ಯೋಜನೆಯನ್ನು ಘೋಷಣೆ ಮಾಡಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲಿ ಗೃಹಲಕ್ಷ್ಮೀ ಯೋಜನೆ ರದ್ದಾಗುತ್ತಾ ಅನ್ನೋ ಅನುಮಾನ ವ್ಯಕ್ತವಾಗುತ್ತಿದೆ.

Image Credit to Original Source

ಗೃಹಲಕ್ಷ್ಮೀ ಯೋಜನೆಯನ್ನು ಬಿಆರ್‌ಎಸ್‌ ಸರಕಾರ ಜಾರಿಗೆ ತಂದಿತ್ತು. ಈ ಯೋಜನೆಗೆ ಸುಮಾರು 15 ಲಕ್ಷ ಮಂದಿ ಅರ್ಜಿಯನ್ನು ಸಲ್ಲಿಸಿದ್ದರು. ಪ್ರತೀ ಫಲಾನುಭವಿಗಳಿಗೆ ತಲಾ 3 ಲಕ್ಷ ರೂಪಾಯಿಗಳ ಆರ್ಥಿಕ ನೆರವು ನೀಡುವ ಉದ್ದೇಶವನ್ನು ಹೊಂದಿಲಾಗಿತ್ತು. ಆದರೆ ಇದೀಗ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರಕಾರ ಈ ಯೋಜನೆಯನ್ನೇ ರದ್ದುಗೊಳಿಸಿದೆ.

ಇನ್ನು ಗೃಹಲಕ್ಷ್ಮೀ ಯೋಜನೆಯ ಬದಲಾಗಿ ಅಭಯ ಹಸ್ತಂ ಯೋಜನೆಯನ್ನು ಘೋಷಿಸಿದೆ. ಈ ಯೋಜನೆ ಮೂಲಕ ಇಂದಿರಮ್ಮ ಮನೆ ಹೆಸರಲ್ಲಿ ಫಲಾನುಭವಿಗಳಿಗೆ ತಲಾ 5 ಲಕ್ಷ ರೂಪಾಯಿ ಆರ್ಥಿಕ ನೆರವು ದೊರೆಯಲಿದೆ. ಈಗಾಗಲೇ ಅರ್ಹ ಫಲಾನುಭವಿಗಳಿಂದ ಸರಕಾರ ಅರ್ಜಿಗಳನ್ನು ಸ್ವೀಕಾರ ಮಾಡಲು ಆರಂಭಿಸಿದೆ.

ತೆಲಂಗಾಣದಲ್ಲಿ ಕಾಂಗ್ರೆಸ್‌ ಪಕ್ಷ ಚುನಾವಣೆಯ ಸಂದರ್ಭದಲ್ಲಿ ಆರು ಯೋಜನೆಗಳನ್ನು ಘೋಷಣೆ ಮಾಡಿತ್ತು. ಈ ಪೈಕಿ ಅಭಯ ಹಸ್ತಂ ಯೋಜನೆಯು ಒಂದಾಗಿದೆ. ಚುನಾವಣೆಯ ಸಂದರ್ಭದಲ್ಲಿ ಜನರಿಗೆ ನೀಡಿರುವ ಭರವಸೆಯನ್ನು ಈಡೇರಿಸುವ ನಿಟ್ಟಿನಲ್ಲಿ ಸರಕಾರ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಇದನ್ನೂ ಓದಿ : 10 ಲಕ್ಷ ಸಾಲ 3 ಲಕ್ಷ ಸಬ್ಸಿಡಿ, ಅತ್ಯಂತ ಕಡಿಮೆ ಬಡ್ಡಿಗೆ PM ನರೇಂದ್ರ ಮೋದಿ ಸರಕಾರದಿಂದ ಹೊಸ ಯೋಜನೆ

ಕರ್ನಾಟಕದಲ್ಲಿಯೂ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್‌ ಪಕ್ಷ ಪಂಚ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು. ಗೃಹಜ್ಯೋತಿ, ಶಕ್ತಿ, ಗೃಹಲಕ್ಷ್ಮೀ, ಯುವ ನಿಧಿ ಹಾಗೂ ಅನ್ನಭಾಗ್ಯ ಯೋಜನೆಯನ್ನು ಈಗಾಗಲೇ ಕರ್ನಾಟಕದ ಕಾಂಗ್ರೆಸ್‌ ಸರಕಾರ ಜಾರಿಗೆ ತಂದಿದೆ. ಉಳಿದ ನಾಲ್ಕು ಯೋಜನೆಯ ಪ್ರಯೋಜನವನ್ನು ಜನರು ಈಗಾಗಲೇ ಪಡೆಯುತ್ತಿದ್ದಾರೆ. ಯುವನಿಧಿ ಯೋಜನೆಗೆ ಸದ್ಯ ಅರ್ಜಿ ಆಹ್ವಾನಿಸಲಾಗುತ್ತಿದೆ.

ಗೃಹಲಕ್ಷ್ಮೀ ಯೋಜನೆಯ ಮೂಲಕ ಕರ್ನಾಟಕದಲ್ಲಿ ಮನೆಯ ಯಜಮಾನಿಗೆ ಪ್ರತೀ ತಿಂಗಳು 2000 ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತಿದೆ. ಗೃಹಿಣಿಯ ಬ್ಯಾಂಕ್‌ ಖಾತೆಗೆ ಕಳೆದ ನಾಲ್ಕು ತಿಂಗಳಿನಿಂದಲೂ ಹಣವನ್ನು ವರ್ಗಾವಣೆ ಮಾಡಲಾಗುತ್ತಿದೆ. ಈ ಮೂಲಕ ಪ್ರತೀ ಕುಟುಂಬವು ಗೃಹಲಕ್ಷ್ಮೀ ಯೋಜನೆಯ ಮೂಲಕ ವಾರ್ಷಿಕವಾಗಿ 24000 ರೂಪಾಯಿ ಆರ್ಥಿಕ ನೆರವು ಪಡೆಯಲಿದೆ.

ಇದನ್ನು ಓದಿ : ಶೀತ ಅಲೆಯ ಎಚ್ಚರಿಕೆ: ಜನವರಿ 6ರ ವರೆಗೆ ಈ ರಾಜ್ಯದಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಗೃಹಲಕ್ಷ್ಮೀ ಯೋಜನೆಯ ಪ್ರಯೋಜನ ಇನ್ನೂ ಸಿಗದೇ ಇರುವ ಮಹಿಳೆಯರಿಗೆ ಯೋಜನೆಯ ಲಾಭ ದೊರಕಿಸಿ ಕೊಡುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕ್ರಮಗಳನ್ನು ಕೈಗೊಂಡಿದೆ. ಈಗಾಗಲೇ ಪ್ರತೀ ಗ್ರಾಮದಲ್ಲಿ ಕ್ಯಾಂಪ್‌ ಆಯೋಜಿಸುವ ಮೂಲಕ ತಾಂತ್ರಿಕ ಸಮಸ್ಯೆಯನ್ನು ಪರಿಹಾರ ಮಾಡಿದ್ದು, ರಾಜ್ಯದ ಪ್ರತೀ ಮನೆಯ ಯಜಮಾನಿಗೆ ಈ ಯೋಜನೆಯ ಲಾಭ ದೊರೆಯಲಿದೆ.

Image Credit to Original Source

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ದಿ ಕುಂಠಿತವಾಗುತ್ತಿದೆ ಎಂಬ ಮಾತು ಕೇಳಿಬಂದಿದೆ. ತೆಲಂಗಾಣದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಇಂತದೊಂದು ಶುರುವಾಗುತ್ತಲೇ ಸರಕಾರ ಕೆಲವೊಂದು ಯೋಜನೆಯನ್ನು ರದ್ದು ಮಾಡಿದೆ. ಇದೀಗ ಕರ್ನಾಟಕದಲ್ಲಿಯೂ ಗೃಹಲಕ್ಷ್ಮೀ ಸೇರಿದಂತೆ ಗ್ಯಾರಂಟಿ ಯೋಜನೆ ರದ್ದಾಗುತ್ತಾ ಅನ್ನೋ ಚರ್ಚೆ ಕೇಳಿಬಂದಿದೆ.

ಇದನ್ನೂ ಓದಿ : ಆಯುಷ್ಮಾನ್ ಭಾರತ್ ಕಾರ್ಡ್ 2024 : ನಿಮ್ಮ ಮೊಬೈಲ್‌ನಿಂದಲೇ ಡೌನ್‌ಲೋಡ್ ಮಾಡಿ

ಕರ್ನಾಟಕ ಸರಕಾರವೇ ಈಗಾಗಲೇ ಸ್ಪಷ್ಟ ಪಡಿಸಿರುವಂತೆ ಸದ್ಯ ಸರಕಾರ ಯಾವುದೇ ಯೋಜನೆಯನ್ನು ರದ್ದುಪಡಿಸುವುದಿಲ್ಲ. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರೇ ಖುದ್ದು ಹೇಳಿಕೆಯನ್ನು ನೀಡಿದ್ದು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯ ರದ್ದತಿಯಿಲ್ಲ. ಗ್ಯಾರಂಟಿ ಕಾರ್ಯಕ್ರಮಕ್ಕೆ ಬೇಕಾಗುವಷ್ಟು ಹಣಕಾಸು ಸರಕಾರದ ಬಳಿಯಲ್ಲಿದೆ ಎಂದಿದ್ದಾರೆ.

Gruha Lakshmi Yojana Canceled In Karnataka After Telangana, an Important Order from the state Government

Share

Recent Posts