Gruha Lakshmi Yojana : ಕಳೆದ ಕೆಲವು ದಿನಗಳಿಂದಲೂ ಗೃಹಲಕ್ಷ್ಮೀ ಯೋಜನೆಯ ಹಣಕ್ಕಾಗಿ ಕಾಯುತ್ತಿದ್ದವರಿಗೆ ಇದೀಗ ಭರ್ಜರಿ ಗುಡ್‌ನ್ಯೂಸ್ ಸಿಕ್ಕಿದೆ. ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ ಕುಟುಂಬದ ಯಜಮಾನಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಗೃಹಲಕ್ಷ್ಮೀ ಯೋಜನೆಯ ಹಣಕ್ಕಾಗಿ ಕಾಯುತ್ತಿರುವವರ ಖಾತೆಗೆ ಇದೇ ವಾರ ಹಣ ಜಮೆ ಆಗಲಿದೆ ಎಂದು ಅವರು ತಿಳಿಸಿದ್ದಾರೆ.

ಬಳ್ಳಾರಿಯಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಗೃಹಲಕ್ಷ್ಮಿ ಯೋಜನೆಗೆ ಕರ್ನಾಟಕದಲ್ಲಿನ ಒಟ್ಟು ಕುಟುಂಬಗಳ ಪೈಕಿ ಶೇ.98 ರಷ್ಟು ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ. ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಕೊಂಡಿವವರ ಖಾತೆಗಳಿಗೆ ಈಗಾಗಲೇ ಎಲ್ಲಾ ತಿಂಗಳ ಹಣ ಜಮೆ ಆಗಿದೆ.
ಜೂನ್ ತಿಂಗಳ ಹಣ ಇದೇ ವಾರದಲ್ಲಿ ಎಲ್ಲರ ಖಾತೆಗೂ ಜಮೆ ಆಗಲಿದೆ ಎಂದಿದ್ದಾರೆ. ಜುಲೈ ತಿಂಗಳ ಹಣ ನಂತರದಲ್ಲಿ ಗೃಹಿಣಿಯರ ಬ್ಯಾಂಕ್ ಖಾತೆಗೆ ಜಮೆ ಆಗಲಿದೆ. ಈ ಕುರಿತು ಯಾರೂ ಚಿಂತೆ ಮಾಡುವ ಅಗತ್ಯವಿಲ್ಲ. ಒಂದೊಮ್ಮೆ ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ ಹಣ ಬಾರದೇ ಇದ್ದಲ್ಲಿ ಏನು ಸಮಸ್ಯೆ ಆಗಿದೆ ಅನ್ನೋ ಕುರಿತು ಅಧಿಕಾರಿಗಳಿಗೆ ವಿಚಾರಣೆ ನಡೆಸಬಹುದಾಗಿದೆ.
ಇದನ್ನೂ ಓದಿ : ಮಹಿಳೆಯರಿಗೆ ಸಿಗಲಿದೆ 5000 ರೂ. ; ಹೊಸ ಯೋಜನೆ ಘೋಷಿಸಿದ ಪ್ರಧಾನ ನರೇಂದ್ರ ಮೋದಿ
ಕರ್ನಾಟಕ ಸರಕಾರವು ಗ್ಯಾರಂಟಿ ಯೋಜನೆಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಿದೆ. ಗೃಹಲಕ್ಷ್ಮೀ ಯೋಜನೆಯಿಂದಾಗಿ ಪ್ರತೀ ಮಹಿಳೆಯು ಮನೆಯ ಯಜಮಾನಿ ಆಗಿದ್ದಾಳೆ. ಮಹಿಳೆಯರಿಗೆ ಆಧ್ಯತೆ ನೀಡಿರುವ ಶ್ರೇಯಸ್ಸು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ ಎಂದಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಒಟ್ಟು 7 ಸಾವಿರಕ್ಕೂ ಅಧಿಕ ಅಂಗನವಾಡಿ ಕೇಂದ್ರಗಳನ್ನು ಉನ್ನತ ಮಟ್ಟಕ್ಕೆ ಏರಿಸಲಾಗುವುದು. ಅಲ್ಲದೇ ಅಂಗನವಾಡಿ ಕೇಂದ್ರಗಳಿಗೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ನುರಿತ ತರಬೇತುದಾರರಿಂದ ಕೌಶಲ್ಯ ಅಭಿವೃದ್ದಿ ತರಬೇತಿಯನ್ನು ನೀಡಲು ಆಧ್ಯತೆಯನ್ನು ನೀಡಲಾಗುತ್ತದೆ.
ಇದನ್ನೂ ಓದಿ : ಗೃಹಲಕ್ಷ್ಮೀ ಯೋಜನೆ ಭರ್ಜರಿ ಗುಡ್‌ನ್ಯೂಸ್: ಮತ್ತೆ 12 ಜಿಲ್ಲೆಗಳಿಗೆ ಬಿಡುಗಡೆ ಆಯ್ತು ಹಣ
ಮಕ್ಕಳ ಶೈಕ್ಷಣಿಕ ಅನುಕೂಲತೆಗೆ ತಕ್ಕಂತೆ. ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವಂತೆ ತೂಕ, ಆರೋಗ್ಯದ ಜೊತೆಗೆ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದೆ ಎಂದಿದ್ದಾರೆ. ಗೃಹಲಕ್ಷ್ಮೀ ಯೋಜನೆಯ ಹಣ ಕೈ ಸೇರಿಲ್ಲ ಎಂದು ಚಿಂತೆ ಮಾಡುವವರಿಗೆ ಇದೀಗ ಖುದ್ದು ಸಚಿವರೇ ಗುಡ್‌ನ್ಯೂಸ್ ಕೊಟ್ಟಿದ್ದಾರೆ.
ಇದನ್ನೂ ಓದಿ : 40 ವರ್ಷ ಮೇಲ್ಪಟ್ಟವರಿಗೆ ಪ್ರತೀ ತಿಂಗಳು ಸಿಗಲಿದೆ 12,000 ರೂಪಾಯಿ !
Gruha Lakshmi Yojana money to all accounts this week Through DBT says Minister Lakshmi Hebbalkar