IBPS ಕ್ಲರ್ಕ್ ನೇಮಕಾತಿ 2025: 10,277 ಹುದ್ದೆ, ಪದವೀಧರರಿಗೆ ಅವಕಾಶ

IBPS Clerk Recruitment 2025 : ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಒಂದೊಳ್ಳೆ ಅವಕಾಶ ಕಲ್ಪಿಸಿದೆ.

IBPS ಕ್ಲರ್ಕ್ ನೇಮಕಾತಿ 2025 (CRP-CSA XV) ಗಾಗಿ ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಆಗಸ್ಟ್ 1, 2025 ರಿಂದ ಪ್ರಾರಂಭವಾಗಿದೆ.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಐಬಿಪಿಎಸ್‌ ( ibps.in) ಮೂಲಕ ಆಗಸ್ಟ್ 21, 2025ರ ಒಳಗಾಗಿ ಅರ್ಜಿ ಸಲ್ಲಿಸ ಬಹುದು. ಭಾರತದ ಒಟ್ಟು 11 ಸರಕಾರಿ ಬ್ಯಾಂಕುಗಳಲ್ಲಿ ಖಾಲಿ ಇರುವ ಕ್ಲರಿಕಲ್‌ ಹುದ್ದೆಗಳಿಗೆ ನಡೆಯಲಿದೆ.

Also Read : ಪ್ರಧಾನ ಮಂತ್ರಿ ಫಸಲ್‌ ಭೀಮಾ ಯೋಜನೆ : ಅರ್ಜಿ ಸಲ್ಲಿಸುವುದು ಹೇಗೆ ?

IBPS ಕ್ಲರ್ಕ್ ನೇಮಕಾತಿ 2025 : ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಪ್ರಾರಂಭ: ಆಗಸ್ಟ್ 1, 2025

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 21, 2025

ಪೂರ್ವಭಾವಿ ಪರೀಕ್ಷೆ: ಅಕ್ಟೋಬರ್ 4, 5, ಮತ್ತು 11, 2025

ಮುಖ್ಯ ಪರೀಕ್ಷೆ: ನವೆಂಬರ್ 29, 2025

ಅರ್ಹತಾ ಮಾನದಂಡ

ವಿದ್ಯಾರ್ಹತೆ: ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಆಗಸ್ಟ್ 1, 2025ಕ್ಕೆ ಕನಿಷ್ಠ 20 ಮತ್ತು ಗರಿಷ್ಠ 28 ವರ್ಷ ವಯಸ್ಸಾಗಿರಬೇಕು. ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ವಿನಾಯಿತಿ ನೀಡಲಾಗುತ್ತದೆ.

ಕಂಪ್ಯೂಟರ್ ಜ್ಞಾನ: ಅಭ್ಯರ್ಥಿಗಳಿಗೆ ಕಂಪ್ಯೂಟರ್ ಕಾರ್ಯಾಚರಣೆಗಳ ಬಗ್ಗೆ ಜ್ಞಾನವಿರಬೇಕು.

Also Read : ಕರ್ನಾಟಕದ ಐದು ಲಕ್ಷ ರೈತರಿಗೆ ಸಿಗಲ್ಲ ಪಿಎಂ ಕಿಸಾನ್‌ ಯೋಜನೆಯ ಹಣ

ಸ್ಥಳೀಯ ಭಾಷಾ ಜ್ಞಾನ: ಅಭ್ಯರ್ಥಿಯು ಅರ್ಜಿ ಸಲ್ಲಿಸುವ ರಾಜ್ಯದ ಸ್ಥಳೀಯ ಭಾಷೆಯನ್ನು ಓದಲು, ಬರೆಯಲು ಮತ್ತು ಮಾತನಾಡಲು ತಿಳಿದಿರಬೇಕು.

ಈ ನೇಮಕಾತಿಯ ಆಯ್ಕೆ ಪ್ರಕ್ರಿಯೆಯು ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆ ಎಂಬ ಎರಡು ಹಂತಗಳಲ್ಲಿ ನಡೆಯಲಿದೆ. ಅರ್ಜಿದಾರರು IBPS ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.

ಅರ್ಜಿ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಅಭ್ಯರ್ಥಿಗಳು ಇನ್ನಷ್ಟು ವಿವರಗಳಿಗಾಗಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಸೂಚಿಸಲಾಗಿದೆ. ಈ ವರ್ಷ 10,277 ಹುದ್ದೆಗಳಿಗೆ ನೇಮಕಾತಿ ನಡೆಯುವ ನಿರೀಕ್ಷೆಯಿದೆ.

IBPS Clerk Recruitment 2025 10277-Jobs Karnataka Application Details

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories