ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ರಾಜ್ಯ ಸಾರಿಗೆ ಇಲಾಖೆಯು ಬೆಂಗಳೂರಿನಲ್ಲಿ ಆಟೊ ರಿಕ್ಷಾ ಪ್ರಯಾಣ ದರವನ್ನು ಏರಿಕೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.
ಕರ್ನಾಟಕ ರಸ್ತೆ ಪ್ರಾಧಿಕಾರದ ಅಧ್ಯಕ್ಷರು, ಬೆಂಗಳೂರು ಜಿಲ್ಲಾಧಿಕಾರಿ ಜೆ ಮಂಜುನಾಥ್ ಅವರು ಈ ಕುರಿತು ಸಭೆ ನಡೆಸಿದ್ದಾರೆ. ಸದ್ಯ ಕನಿಷ್ಠ ಆಟೋ ದರ 25 ರೂ ಇದೆ. ಈ ದರವನ್ನು 30 ರೂಗೆ ಏರಿಕೆ ಮಾಡುವ ಕುರಿತ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಆಟೋ ಪ್ರಯಾಣದರ ಏರಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಸಾರಿಗೆ ಶ್ರೀರಾಮುಲು, ಆಟೊ ರಿಕ್ಷಾ ಒಕ್ಕೂಟಗಳು ದರ ಏರಿಕೆಗೆ ವಿನಂತಿ ಮಾಡಿವೆ .ಈ ಹಿಂದೆ 2013ರಲ್ಲಿ ಆಟೊ ಪ್ರಯಾಣ ದರವನ್ನು ಕೊನೆಯದಾಗಿ ಏರಿಸಲಾಗಿತ್ತು.
ಆಟೋ ಪ್ರಯಾಣ ದರ ಏರಿಕೆ ಮಾಡುವ ಕುರಿತು ಪ್ರಸ್ತಾಪ ಮಾಡಲಾಗಿದೆ ಹಾಗೂ ಈ ವಿಷಯದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: Petrol Price Hike : ವಾಹನ ಸವಾರರಿಗೆ ಶಾಕ್ ಕೊಟ್ಟ ಪೆಟ್ರೋಲ್ : ಮತ್ತೆ ಏರಿಕೆಯಾಯ್ತು ತೈಲ ಬೆಲೆ
(Another Shock for People: Auto Travel Rate Soon!)