ಬೆಂಗಳೂರು : ದಿನೇ ದಿನೇ ದೇಶದಲ್ಲಿ ತೈಲ ಬೆಲೆಯಲ್ಲಿ ಏರಿಕೆ ಕಾಣುತ್ತಲೇ ಇದೆ. ಸತತ 6ನೇ ದಿನವೂ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡಿದ್ದು, ವಾಹನ ಸವಾರರ ಜೇಬಿಗೆ ಕತ್ತರಿ ಹಾಕಿದೆ. ಇಂದು ದೇಶದಲ್ಲಿ ತೈಲ ಬೆಲೆ ಹೊಸ ಸಾರ್ವಕಾಲಿಕ ದಾಖಲೆಯನ್ನು ಬರೆದಿದೆ.
ಇಂದು ಪೆಟ್ರೋಲ್ ಬೆಲೆಯಲ್ಲಿ 30 ಪೈಸೆ ಏರಿಕೆ ಕಂಡಿದ್ದರೆ, ಡೀಸೆಲ್ ಬೆಲೆಯಲ್ಲಿ 47 ಪೈಸೆ ಏರಿಕೆಯಾಗಿದೆ. ಈ ಮೂಲಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 104.14 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 92.82 ರೂಪಾಯಿಗೆ ಏರಿಕೆ ಆಗಿದೆ.
ಮಹಾರಾಷ್ಟ್ರದಲ್ಲಿ ಪೆಟ್ರೋಲ್ 109.84 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಡೀಸೆಲ್ ಅನ್ನು 100.31 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 101.31 ರೂ ಇದ್ದರೆ ಡೀಸೆಲ್ ಬೆಲೆ 97.01 ರೂ.ಗೆ ಏರಿಕೆಯಾದರೆ. ಹೈದ್ರಾಬಾದ್ನಲ್ಲಿ ಪೆಟ್ರೋಲ್ ಬೆಲೆ 110.02 ರೂ ಆಗಿದೆ, ಡೀಸೆಲ್ ಬೆಲೆ 101.71 ರೂ.ಗೆ ಮಾರಾಟ ಮಾಡಲಾಗುತ್ತಿದೆ.
ಇದನ್ನೂ ಓದಿ: Gold Rate Today : ಆಭರಣ ಪ್ರಿಯರಿಗೆ ಶಾಕ್ : ಚಿನ್ನದ ಬೆಲೆ ಮತ್ತೆ ಏರಿಕೆ
(Petrol and diesel prices up in India)