ನವದೆಹಲಿ : ಹಿಂದೆಲ್ಲಾ ಎಲ್‌ಪಿಜಿ ಸಂಪರ್ಕ ಪಡೆಯಬೇಕಾದ್ರೆ ಕಚೇರಿಗಳಿಗೆ ಸಾಕಷ್ಟು ಬಾರಿ ಅಲೆಯ ಬೇಕಾಗಿತ್ತು. ಆದ್ರೀಗ ಕಾಲ ಬದಲಾಗಿದೆ, ಕೇವಲ ಒಂದೇ ಒಂದು ಮಿಸ್‌ಕಾಲ್ ಕೊಟ್ರೆ ಸಾಕು ಎಲ್‌ಪಿಜಿ ಗ್ಯಾಸ್ ಮನೆ ಬಾಗಿಲಿಗೆ ಬರುತ್ತೆ.
ಇಂಡಿಯನ್ ಆಯಿಲ್ ಕಾರ್ಪೋರೇಷನ್ ಗ್ರಾಹಕ ಸ್ನೇಹಿ ಯೋಜನೆಯೊಂದನ್ನು ಜಾರಿಗೆ ತರುತ್ತಿದೆ. ಅಡುಗೆ ಅನಿಲ ಹೊಸ ಸಂಪರ್ಕ ಪಡೆಯಲು ಕಾಯುತ್ತಿರುವ ಗ್ರಾಹಕರಿಗೆ ಸಿಹಿ ಸುದ್ದಿ ಕೊಟ್ಟಿದ್ದು, ಹೊಸ ಯೋಜನೆಯ ಪ್ರಕಾರ ಹೊಸ ಸಂಪರ್ಕ ಪಡೆಯಲು ಗ್ರಾಹಕರು ಡೀಲರ್ ಕಚೇರಿಗಳಿಗೆ ಅಲೆಯಬೇಕಾಗಿಲ್ಲ. ಮನೆಯಲ್ಲಿಯೇ ಕುಳಿತು 8454955 555 ಸಂಖ್ಯೆಗೆ ಮಿಸ್ಡ್ ಕಾಲ್ ಕೊಟ್ಟರೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸಿಬ್ಬಂದಿ ನಿಮ್ಮ ಮನೆಯ ಬಾಗಿಲಿಗೆ ಬಂದು ಹೊಸ ಅಡುಗೆ ಅನಿಲ ಸಂಪರ್ಕ ನೀಡಲಿದ್ದಾರೆ.
ದೇಶದ ಯಾವುದೇ ಭಾಗದಲ್ಲಿನ ಗ್ರಾಹಕರು ಎಲ್‌ಪಿಜಿ ಸಂಪರ್ಕ ಪಡೆಯಲು ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ. ನಗರ ಮಾತ್ರವಲ್ಲದೇ ಗ್ರಾಮೀಣ ಭಾಗದ ಜನರಿಗೂ ಕೂಡ ಈ ಯೋಜನೆ ಲಭ್ಯವಾಗಲಿದೆ. ಅಷ್ಟೇ ಅಲ್ಲದೇ 5 ಕೆಜಿ ಸಿಲಿಂಡರ್ ಸೌಲಭ್ಯವನ್ನು ಕೂಡ ಪಡೆಯಬಹುದಾಗಿದೆ.
ಹೊಸ ಗ್ಯಾಸ್ ಕನೆಕ್ಷನ್ ಪಡೆಯಲು ಮಾತ್ರವಲ್ಲ ಈಗಾಗಲೇ ಗ್ಯಾಸ್ ಸಂಪರ್ಕ ಹೊಂದಿರುವ ಗ್ರಾಹಕರು ಕೂಡ ತಮ್ಮ ಸಿಲಿಂಡರ್ ರೀಫಿಲ್ ಮಾಡಿಸಿಕೊಳ್ಳಲು ಕೂಡ ತಮ್ಮ ನೊಂದಾಯಿತ ಮೊಬೈಲ್ ಸಂಖ್ಯೆಯಿಂದ ಮಿಸ್ ಕಾಲ್ ಕೊಟ್ಟು ಸಿಲಿಂಡರ್ ಪಡೆಯಬಹುದಾಗಿದೆ. ಈ ಯೋಜನೆಗೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಅಧ್ಯಕ್ಷ ಎಸ್.ಎಂ. ವೈದ್ಯ ಈ ಯೋಜನೆಗೆ ಚಾಲನೆ ನೀಡಿದ್ದಾರೆ.
ಸಹಕಾರಿ ಬ್ಯಾಂಕುಗಳಲ್ಲಿ ಠೇವಣಿ ಇಟ್ಟಿದ್ದೀರಾ : ಕೇಂದ್ರ ಸರಕಾರದಿಂದ ಗುಡ್‌ನ್ಯೂಸ್
ಇಳಿ ವಯಸ್ಸಲ್ಲಿ ಬರ್ನಾರ್ಡ್ ಅರ್ನಾಲ್ಟ್ ಮುಡಿಗೇರಿತು ವಿಶ್ವದ ಶ್ರೀಮಂತ ವ್ಯಕ್ತಿ ಪಟ್ಟ