7th Pay Commission report submission : ಬೆಂಗಳೂರು : ಸರಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ 7ನೇ ವೇತನ ಆಯೋಗದ ವರದಿ ಸರಕಾರಕ್ಕೆ ಸಲ್ಲಿಕೆಯಾಗಿದೆ. 7ನೇ ವೇತನ ಆಯೋಗದ ಅಧ್ಯಕ್ಷ ಸುಧಾಕರ ರಾವ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವೇತನ ಆಯೋಗದ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ.

2022ರ ನವೆಂಬರ್ 19ರಂದು ಸರಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅವರ ನೇತೃತ್ವದಲ್ಲಿ 7ನೇ ವೇತನ ಆಯೋಗವನ್ನು ರಚಿಸಲಾಗಿತ್ತು. ಅವಧಿ ಮುಗಿದಿದ್ದರೂ ಕೂಡ ಎರಡು ಬಾರಿ ಆಯೋಗದ ಅವಧಿಯನ್ನು ವಿಸ್ತರಣೆ ಮಾಡಲಾಗಿತ್ತು. ಇದೀಗ ಆಯೋಗದ ಅವಧಿ ಮಾರ್ಚ್ 15ಕ್ಕೆ ಮುಕ್ತಾಯವಾಗುವ ಹಿನ್ನೆಲೆಯಲ್ಲಿ 7 ನೇ ಆಯೋಗದ ವರದಿಯನ್ನು ಆಯೋಗ ಸರಕಾರಕ್ಕೆ ಸಲ್ಲಿಕೆ ಮಾಡಿದೆ.
ಆಯೋಗದ ಅವಧಿ ಈ ಹಿಂದೆ ಮುಕ್ತಾಯದ ಅವಧಿಯಲ್ಲಿ ಆರು ತಿಂಗಳ ಕಾಲ ಆಯೋಗದ ಅವಧಿಯನ್ನು ವಿಸ್ತರಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿತ್ತು. ಅಲ್ಲದೇ ಈ ಅವಧಿಯಲ್ಲಿ ಸರಕಾರ ಶೇ.17 ರಷ್ಟು ಮಧ್ಯಂತರ ಪರಿಹಾರವನ್ನು ಸರಕಾರ ಘೋಷಣೆ ಮಾಡಿತ್ತು. ಇದೀಗ 7 ನೇ ವೇತನ ಆಯೋಗದ ವರದಿಯಲ್ಲಿ ಸರಕಾರಿ ನೌಕರರ ವೇತನ ಹೆಚ್ಚಳದ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಿದೆ.
ಇದನ್ನೂ ಓದಿ : 10ನೇ ಉತ್ತೀರ್ಣರಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ, ರೂ 55000 ರೂ. ವೇತನ, 98,083 ಹುದ್ದೆ ಭರ್ತಿಗೆ ಅರ್ಜಿ
ಲೋಕಸಭಾ ಚುನಾವಣೆ ಘೋಷಣೆ ಆಗುವ ಮೊದಲೇ ಸರಕಾರಿ ನೌಕರರಿಗೆ ರಾಜ್ಯ ಸರಕಾರ ಘೋಷಣೆ ಮಾಡುವ ಸಾಧ್ಯತೆಯಿದೆ. 7ನೇ ವೇತನ ಆಯೋಗದ ವರದಿ ಸಲ್ಲಿಕೆಯಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯೋಗದ ಅವಧಿಯನ್ನು ಜಾರಿಗೆ ತರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಆದರೆ ಇಂದು ಸಂಜೆ ಲೋಕಸಭಾ ಚುನಾವಣೆ ಘೋಷಣೆ ಆಗುವ ಸಾಧ್ಯತೆಯಿದೆ.

ಇದನ್ನೂ ಓದಿ : ಶಾಲೆಗಳಿಗೆ ಬೇಸಿಗೆ ರಜೆ 2024 : ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟ ರಾಜ್ಯ ಸರಕಾರ
ಲೋಕಸಭಾ ಚುನಾವಣಾ ದಿನಾಂಕ ಘೋಷಣೆಯಾದ್ರೆ ಇಂದಿನಿಂದಲೇ ನೀತಿಸಂಹಿತೆ ಜಾರಿಯಾಗುವ ಸಾಧ್ಯತೆಯಿದೆ. ಒಂದೊಮ್ಮೆ ನೀತಿ ಸಂಹಿತೆ ಜಾರಿಯಾದ್ರೆ ಸರಕಾರ ಯಾವುದೇ ಘೋಷಣೆಗಳನ್ನು ಮಾಡುವುದಕ್ಕೆ ಸಾಧ್ಯವಾಗುವುದಿಲ್ಲ. ಚುನಾವಣಾ ಘೋಷಣೆಗೂ ಮೊದಲೇ ರಾಜ್ಯ ಸರಕಾರ ಸರಕಾರಿ ನೌಕರರಿಗೆ ಶುಭ ಸುದ್ದಿಯನ್ನು ನೀಡಬಹುದಾಗಿದೆ.
ಇದನ್ನೂ ಓದಿ : ಅನ್ನಭಾಗ್ಯ ಯೋಜನೆ ಹಣ ವರ್ಗಾವಣೆ : ನಿಮ್ಮ ಖಾತೆಗೆ ಹಣ ಜಮೆ ಆಗಿದ್ಯಾ ಚೆಕ್ ಮಾಡಿ
Good news for government employees: 7th Pay Commission report submission