Karnataka 7th Pay Commission Updates : ಬೆಂಗಳೂರು : ಕರ್ನಾಟಕ ಸರಕಾರ (Karnataka Govt) ಸರಕಾರಿ ನೌಕರರಿಗೆ ಗುಡ್‌ನ್ಯೂಸ್ ಕೊಟ್ಟಿದೆ. 7ನೇ ವೇತನ ಆಯೋಗದ ವರದಿ ಜಾರಿಗೆ ತರುವುದರಿಂದ ರಾಜ್ಯದಲ್ಲಿನ ಸರಕಾರಿ ನೌಕರರ ವೇತನ ಎಷ್ಟು ಹೆಚ್ಚಳವಾಗಲಿದೆ. ಯಾವಾಗ ಹೊಸ ರೂಲ್ಸ್ ರಾಜ್ಯದಲ್ಲಿ ಜಾರಿಯಾಗುತ್ತೆ ಅನ್ನೋ ಸಂಪೂರ್ಣ ಮಾಹಿತಿ ಇಲ್ಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ ಸರಕಾರಿ ನೌಕರರಿಗೆ ವೇತನ ಹೆಚ್ಚಳ ಕುರಿತು ಖಚಿತ ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ 7ನೇ ವೇತನ ಆಯೋಗದ ವರದಿ ಜಾರಿಯಾಗೋದು ಖಚಿತವಾಗಿದೆ. ಈಗಾಗಲೇ 7ನೇ ವೇತನ ಆಯೋಗ ತನ್ನ ವರದಿಯನ್ನು ಮಾರ್ಚ್ ತಿಂಗಳಿನಲ್ಲೇ ಸರಕಾರಕ್ಕೆ ಸಲ್ಲಿಕೆ ಮಾಡಿತ್ತು.
ಇದನ್ನೂ ಓದಿ : ಗೃಹಲಕ್ಷ್ಮೀ ಯೋಜನೆಗೆ ಸರಕಾರದಿಂದ ಹೊಸ ರೂಲ್ಸ್: ಇನ್ಮುಂದೆ ಈ ಮಹಿಳೆಯರಿಗೆ ಸಿಗೋದೆ ಇಲ್ಲ ಹಣ
ಕರ್ನಾಟಕ ಸರಕಾರ ಮೂರು ತಿಂಗಳು ಕಳೆದರೂ ಕೂಡ 7ನೇ ವೇತನ ಆಯೋಗ ಸಲ್ಲಿಸಿದ್ದ ವರದಿಯನ್ನು ಜಾರಿಗೆ ತಂದಿಲ್ಲ. ಈ ಕುರಿತು ಈಗಾಗಲೇ ಸರಕಾರಿ ನೌಕರರು ರಾಜ್ಯ ಸರಕಾರಕ್ಕೆ ಗಡುವು ನೀಡಿದ್ದರು. ಇದರ ಬೆನ್ನಲ್ಲೇ ಕರ್ನಾಟಕ ಸರಕಾರ 7ನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೆ ತರಲು ಮುಂದಾಗಿದೆ.

ಕಳೆದ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ ವರದಿ ಜಾರಿಗೆ ಸಂಬಂಧಿಸಿದಂತೆ ವಿಷಯ ಮಂಡನೆ ಮಾಡಲಾಗಿದ್ದು, ಸಚಿವರು ಮೌಖಿಕವಾಗಿ ಸಮ್ಮತಿ ಸೂಚಿಸಿದ್ದಾರೆ. ಆದರೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಮಂಡಿಸಿ, ಒಪ್ಪಿಗೆ ಪಡೆದು ರಾಜ್ಯದಲ್ಲಿ 7ನೇ ವೇತನ ಆಯೋಗದ ವರದಿ ಅಧಿಕೃತವಾಗಿ ಜಾರಿಗೆ ಬರಲಿದೆ.

ವಿಧಾನ ಮಂಡಲ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು, ಅದಕ್ಕೂ ಮೊದಲೇ 7ನೇ ವೇತನ ಆಯೋಗದ ವರದಿ ಕರ್ನಾಟಕದಲ್ಲಿ ಜಾರಿಯಾಗುವ ಸಾಧ್ಯತೆಯಿದೆ. ಆದರೆ ವೇತನ ಹೆಚ್ಚಳ ಯಾವಾಗಿನಿಂದ ಅನ್ವಯವಾಗಲಿದೆ ಅನ್ನೋದು ಖಚಿತವಾಗಿಲ್ಲ. ಕಳೆದ ವರ್ಷದಿಂದಲೇ ಅನ್ಚಯವಾಗಲಿದೆಯಾ ? ಅಥವಾ ಕಳೆದ ಜೂನ್ ತಿಂಗಳಿನಿಂದ ಅನ್ವಯವಾಗಲಿದೆಯಾ ಅನ್ನೋದು ಕಾದು ನೋಡಬೇಕಾಗಿದೆ.
ಇದನ್ನೂ ಓದಿ : 7ನೇ ವೇತನ ಆಯೋಗ ಜಾರಿ : ಸರಕಾರಿ ನೌಕರರಿಗೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ

7ನೇ ರಾಜ್ಯ ವೇತನ ಆಯೋಗದ ಶಿಫಾರಸಿನ ಪ್ರಕಾರ ಕರ್ನಾಟಕ ರಾಜ್ಯ ಸರಕಾರಿ ನೌಕರರ ವೇತನದಲ್ಲಿ ಶೇ.8 ರಿಂದ ಶೇ.8.5 ರಷ್ಟು ಹೆಚ್ಚಳವಾಗುವುದನ್ನು ನಿರೀಕ್ಷೆ ಮಾಡಲಾಗಿದೆ. ಅಲ್ಲದೇ ಮೂಲ ವೇತನದಲ್ಲಿ ಶೇ.25 ರಿಂದ ಶೇ.27.5 ರಷ್ಟು ಹೆಚ್ಚಳವಾಗುವುದು ಖಚಿತ. 7ನೇ ವೇತನ ಆಯೋಗದ ಶಿಫಾರಸ್ಸಿನ ಪ್ರಕಾರ ಈ ಹಿಂದೆಯೇ ವೇತನದಲ್ಲಿ ಹೆಚ್ಚಳ ಮಾಡಲಾಗಿತ್ತು.
ಇದನ್ನೂ ಓದಿ : 40 ವರ್ಷ ಮೇಲ್ಪಟ್ಟವರಿಗೆ ಪ್ರತೀ ತಿಂಗಳು ಸಿಗಲಿದೆ 12,000 ರೂಪಾಯಿ !
7ನೇ ವೇತನ ಆಯೋಗದ ಶಿಫಾರಸ್ಸಿನ ಪ್ರಕಾರ ಎಷ್ಟು ವೇತನ ಹೆಚ್ಚಳವಾಗಲಿದೆ ? ಇಲ್ಲಿದೆ ಸಂಪೂರ್ಣ ವಿವರ



Karnataka 7th Pay Commission Updates salary increase be implemented ? How much increase for whom? There is complete information in Kannada