ಬೆಂಗಳೂರು :ಬಿಎಸ್ ಯಡಿಯೂರಪ್ಪ ಅವರು ಜಾರಿಗೆ ತಂದಿದ್ದ ಭಾಗ್ಯಲಕ್ಷ್ಮೀ ಯೋಜನೆ ಅದೆಷ್ಟೋ ಬಡ ಹೆಣ್ಣು ಮಕ್ಕಳಿಗೆ ವರದಾನವಾಗಿದೆ. ಭಾಗ್ಯಲಕ್ಷ್ಮೀ ಯೋಜನೆಯ ಅಡಿಯಲ್ಲಿ ಹಣ ತೊಡಗಿಸಿದ್ದ ಫಲಾನುಭವಿಗಳಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಯೋಜನೆ ಆರಂಭಗೊಂಡು ಇದೀಗ 18 ವರ್ಷ ತುಂಬಿದ್ದು, ಇದೀಗ 2.30 ಲಕ್ಷ ಫಲಾನುಭವಿಗಳಿಗೆ ಮೆಚ್ಯುರಿಟಿ ಹಣ ಸಿಗಲಿದೆ.

18 ವರ್ಷಗಳ ಹಿಂದೆ ಜಾರಿಗೆ ಬಂದಿದ್ದ ಭಾಗ್ಯಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಸಿದವರಿಗೆ ಮುಂದಿನ ಏಪ್ರಿಲ್ ಮತ್ತು ಮೇ ತಿಂಗಳ ಅಂತ್ಯಕ್ಕೆ ಮೆಚ್ಯುರಿಟಿಗೆ ಅರ್ಹರಾಗಿದ್ದಾರೆ. ಇದೇ ಕಾರಣದಿಂದಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಫಲಾನುಭವಿಗಳ ನೋಂದಾಯಿತ ಖಾತೆಗೆ ಹಣವನ್ನು ಜಮೆ ಮಾಡಲು ಸಿದ್ದತೆ ಮಾಡಿಕೊಂಡಿದೆ.
ಕರ್ನಾಟಕದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ ಜನಿಸಿದ ಹೆಣ್ಣು ಮಕ್ಕಳಿಗೆ ಭವಿಷ್ಯದಲ್ಲಿ ಆರ್ಥಿಕ ನೆರವು ನೀಡುವ ಸಲುವಾಗಿ 2006-07ರಲ್ಲಿ ಮುಖ್ಯಮಂತ್ರಿಯಾಗಿದ್ದ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದ ಸರಕಾರ ಭಾಗ್ಯಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿತ್ತು. ಇದೀಗ ಭಾಗ್ಯಲಕ್ಷ್ಮೀ ಲಕ್ಷಾಂತರ ಕುಟುಂಬಗಳಿಗೆ ಅನುಕೂಲಕರವಾಗಲಿದೆ.
ಇದನ್ನೂ ಓದಿ : ಗೃಹಲಕ್ಷ್ಮೀ ಯೋಜನೆ ಹಣ ಯಾವಾಗ ಬಿಡುಗಡೆ ಆಗುತ್ತೆ ? ಇಲ್ಲಿದೆ ಮಹತ್ವದ ಸುದ್ದಿ
ಭಾಗ್ಯಲಕ್ಷ್ಮಿ ಯೋಜನೆಯ ಹಣವನ್ನು ವಾಪಾಸ್ ಪಡೆಯಲು ಹಲವು ನಿಯಮಗಳನ್ನು ಸರಕಾರ ಜಾರಿಗೆ ತಂದಿದೆ. ಭಾಗ್ಯಲಕ್ಷ್ಮೀ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ ಬಿಪಿಎಲ್ ಕಾರ್ಡ್ ಹೊಂದಿರಲೇ ಬೇಕು. ಅಲ್ಲದೇ ಮೂರು ಮಕ್ಕಳನ್ನು ಮೀರಿರಬಾರದು. ಇನ್ನು ಯೋಜನೆಯಲ್ಲಿ ನೋಂದಣಿ ಮಾಡಿರುವ ಮಗುವು ಕಡ್ಡಾಯವಾಗಿ 8 ನೇ ತರಗತಿ ವಿದ್ಯಾಭ್ಯಾಸವನ್ನು ಪೂರೈಸಿರಲೇ ಬೇಕು. ಈ ಕುರಿತು ಶಾಲೆಗಳಿಂದ ಅಧಿಕೃತ ದಾಖಲೆಯನ್ನು ನೀಡಬೇಕು.
ಇದನ್ನೂ ಓದಿ : Ration Card e-KYC : ರೇಷನ್ ಕಾರ್ಡ್‌ಗೆ ಇಕೆವೈಸಿ ಕಡ್ಡಾಯ, ತಪ್ಪಿದ್ರೆ ರದ್ದಾಗುತ್ತೆ ಕಾರ್ಡ್

ಭಾಗ್ಯಲಕ್ಷ್ಮೀ ಯೋಜನೆಯ ಅಡಿಯಲ್ಲಿ ನೋಂದಣಿ ಮಾಡಿಸಿರುವ ಫಲಾನುಭವಿಗಳು ಬಾಲ ಕಾರ್ಮಿಕರಾಗಿರಬಾರದು. ಅಲ್ಲದೇ ಬಾಲ್ಯ ವಿವಾಹಕ್ಕೆ ಒಳಗಾಗಿರಬಾರದು ಎನ್ನುವ ನಿಯಮವನ್ನು ಕಡ್ಡಾಯಗೊಳಿಸಲಾಗಿದೆ. ಒಟ್ಟಿನಲ್ಲಿ ಹದಿನೆಂಟು ವರ್ಷಗಳ ಹಿಂದೆ ಹಣವನ್ನು ಹೂಡಿಕೆ ಮಾಡಿರುವ ಫಲಾನುಭವಿಗಳಿಗೆ ಭಾಗ್ಯಲಕ್ಷ್ಮೀ ಯೋಜನೆ ವರದಾನವಾಗಲಿದೆ.
ಇದನ್ನೂ ಓದಿ : ಗ್ರಾಮ ಸುರಕ್ಷಾ ಯೋಜನೆ : ತಿಂಗಳಿಗೆ 1500 ರೂಪಾಯಿ ಪಾವತಿಸಿ, 34 ಲಕ್ಷ ರೂ. ಪಡೆಯಿರಿ
Karnataka Bhagyalakshmi Yojana beneficiaries Good News Maturity money to be credited to account in Kannada News