Karnataka Govt Employees : ಕರ್ನಾಟಕದಲ್ಲಿ ಎನ್‌ಪಿಎಸ್‌ (NPS) ರದ್ದು, ಸರಕಾರಿ ನೌಕರರಿಗೆ ಗುಡ್‌ನ್ಯೂಸ್‌ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕ ರಾಜ್ಯ ಸರಕಾರಿ ನೌಕರರಿಗೆ (Karnataka Govt Employees) ಸಿಎಂ ಸಿದ್ದರಾಮಯ್ಯ ಗುಡ್‌ನ್ಯೂಸ್‌ ಕೊಟ್ಟಿದ್ದಾರೆ. ರಾಜ್ಯದಲ್ಲಿ ಎನ್‌ಪಿಎಸ್‌ (NPS)ರದ್ದು ಮಾಡಿ ಹಳೆ ಪಿಂಚಣಿ ವ್ಯವಸ್ಥೆಯನ್ನು (OPS) (ಜಾರಿಗೆ ತರಲು ನಿಟ್ಟಿನಲ್ಲಿ ಸಮಿತಿ ರಚನೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ವಿಧಾನಪರಿಷತ್‌ನಲ್ಲಿ ಮಾತನಾಡಿದ ಸಚಿವ ಎನ್‌.ಎಸ್.ಬೋಸರಾಜ್‌ ಅವರು, ರಾಜ್ಯದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ ಜಾರಿಯಲ್ಲಿದೆ. ಇದನ್ನು ರದ್ದು ಪಡಿಸಿ ಹಳೆ ಪಿಂಚಣಿ ಯೋಜನೆಯ ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಯೋಜನೆಯ ಅನುಷ್ಠಾನದ ಬಗ್ಗೆ ಕೈಗೊಂಡ ಕ್ರಮಗಳ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರಕಾರದ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯ ಅಧ್ಯಯನ ವರದಿ ಮಂಡನೆಯಾದ ನಂತರದಲ್ಲಿ ಈ ಕುರಿತು ಕ್ರಮಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : Ration card holders : ಪಡಿತರ ಚೀಟಿದಾರರ ಗಮನಕ್ಕೆ : ಸೆಪ್ಟೆಂಬರ್ 30 ರ ಮೊದಲು ಈ ಕೆಲಸ ಮಾಡಿ ಇಲ್ಲದಿದ್ದರೆ ನಿಮಗೆ ಸಿಗಲ್ಲ ರೇಷನ್‌

ಇದನ್ನೂ ಓದಿ : Cibil Score : ನಿಮ್ಮ ಸಿಬಿಲ್‌ ಸ್ಕೋರ್‌ ಹೆಚ್ಚಿಸಿಕೊಳ್ಳಬೇಕೇ ? ಹಾಗಾದ್ರೆ ಈ ಸಲಹೆಗಳನ್ನು ಪಾಲಿಸಿ

ಕೇಂದ್ರ ಸರಕಾರ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು 2004 ರ ಜನವರಿ 1ರಂದು ಜಾರಿಗೊಳಿಸಿತ್ತು. ಕರ್ನಾಟಕ ರಾಜ್ಯದಲ್ಲಿ 2006 ರ ಎಪ್ರಿಲ್‌ 1ರಿಂದ ಸರಕಾರಿ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿದೆ. ಆದರೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಸರಕಾರಿ ನೌಕರರು ವಿರೋಧಿಸುತ್ತಲೇ ಬಂದಿದ್ದಾರೆ. ಅಲ್ಲದೇ ಸಾಕಷ್ಟು ಹೋರಾಟಗಳನ್ನು ನಡೆಸಿದ್ದರು. ಈ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಸಮಿತಿ ರಚನೆ ಮಾಡಿದ್ದರೂ ಕೂಡ ಯಾವುದೇ ಕ್ರಮಗಳನ್ನು ಕೈಗೊಂಡಿರಲಿಲ್ಲ. ಇದೀಗ ಚನಾವಣೆಯ ಸಂದರ್ಭದಲ್ಲಿಯೂ ಎನ್‌ಪಿಎಸ್‌ ನೌಕರರು ಹೋರಾಟ ನಡೆಸಿದ್ದರು.

Karnataka Govt Employees: NPS canceled in Karnataka, CM Siddaramaiah gave good news to government employees

Comments are closed.